ಸಾರಾಂಶ
ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮನೆಯೊಂದರ ಮೇಲೆ ದಾಳಿ ಮಾಡಿರುವ ಸಿಸಿಸಿ ಮಹಿಳಾ ಸಂರಕ್ಷಣಾ ದಳದ ಪೊಲೀಸರು ಹೊರರಾಜ್ಯದ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮನೆಯೊಂದರ ಮೇಲೆ ದಾಳಿ ಮಾಡಿರುವ ಸಿಸಿಸಿ ಮಹಿಳಾ ಸಂರಕ್ಷಣಾ ದಳದ ಪೊಲೀಸರು ಹೊರರಾಜ್ಯದ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.ಕೊಡಿಗೇಹಳ್ಳಿ ಪೊಲೀಸ್ ಠಾಣೆಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದೆ. ಮಹಿಳೆಯೊಬ್ಬಳು ಹೊರರಾಜ್ಯದ ಮಹಿಳೆಯರಿಗೆ ಉದ್ಯೋಗ ಕೊಡಿಸುವುದಾಗಿ ನಂಬಿಸಿ ನಗರಕ್ಕೆ ಕರೆತಂದು ಮನೆಯಲ್ಲಿ ಇರಿಸಿಕೊಂಡು ಹಣದ ಅಮಿಷವೊಡ್ಡಿ ವೇಶ್ಯಾವಾಟಿಕೆಯಲ್ಲಿ ತೊಡಗಿಸಿದ್ದರು. ಮೊಬೈಲ್ ಮುಖಾಂತರ ಪರಿಚಿತ ಗಿರಾಕಿಗಳನ್ನು ಸಂಪರ್ಕಿಸಿ ಮನೆಗೆ ಕರೆಸಿಕೊಂಡು ಮಾಂಸ ದಂಧೆ ನಡೆಸುತ್ತಿದ್ದರು ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ. ಈ ಸಂಬಂಧ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.