ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವೆ

| Published : Sep 06 2024, 01:08 AM IST

ಸಾರಾಂಶ

ಗುಂಡ್ಲುಪೇಟೆ ಪುರಸಭೆ ನೂತನ ಅಧ್ಯಕ್ಷ ಕಿರಣ್‌ ಗೌಡರಿಗೆ ಪುರಸಭೆ ಮುಖ್ಯಾಧಿಕಾರಿ ಕೆ.ಪಿ. ವಸಂತಕುಮಾರಿ ಹೂಗುಚ್ಛ ನೀಡಿ ಅಭಿನಂದಿಸಿದರು. ಪುರಸಭೆ ಉಪಾಧ್ಯಕ್ಷೆ ಹೀನಾ ಕೌಸರ್‌ ಹಾಗೂ ಸಿಬ್ಬಂದಿ ಇದ್ದಾರೆ.

ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ

ಪಟ್ಟಣದ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲು ನಾನು ಉತ್ಸುಕನಾಗಿದ್ದೇನೆ ಎಂದು ಪುರಸಭೆ ನೂತನ ಅಧ್ಯಕ್ಷ ಕಿರಣ್‌ ಗೌಡ ಹೇಳಿದರು.

ಪುರಸಭೆ ಸಿಬ್ಬಂದಿಯಿಂದ ಸ್ವಾಗತ ದೊರೆತ ಬಳಿಕ ಕನ್ನಡಪ್ರಭದೊಂದಿಗೆ ಮಾತನಾಡಿದ ಅವರು, ಪಟ್ಟಣದ ಜನರ ಸಮಸ್ಯೆಗಳಿಗೆ ಸ್ಪಂದಿಸಲು ಅಧಿಕಾರಿಗಳು ಹಾಗೂ ಸಿಬ್ಬಂದಿ ಇನ್ಮುಂದೆ ಸದಾ ಸಿದ್ಧರಿರಬೇಕು ಎಂದು ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಪಟ್ಟಣದ ವಾರ್ಡ್‌ಗಳಿಗೆ ಬೆಳ್ಳಂಬೆಳಗ್ಗೆಯೇ ಭೇಟಿ ನೀಡಲು ನಿರ್ಧರಿಸಿದ್ದೇನೆ. ವಾರ್ಡ್‌ಗೆ ಭೇಟಿ ನೀಡುವ ವೇಳೆ ಪುರಸಭೆ ಮುಖ್ಯಾಧಿಕಾರಿ, ಆರೋಗ್ಯ ನಿರೀಕ್ಷಕ ಹಾಗೂ ಇತರೆ ಅಧಿಕಾರಿಗಳು ಇರಲಿದ್ದಾರೆ ಎಂದರು. ಪಟ್ಟಣದಲ್ಲಿ ಕುಡಿವ ನೀರಿನ ಸಮಸ್ಯೆ, ಕಸ ವಿಲೇವಾರಿ, ಸ್ವಚ್ಛತೆ ಕಾಪಾಡಲು ಪುರಸಭೆ ಸದಸ್ಯರೊಂದಿಗೆ ಶ್ರಮಿಸುತ್ತೇನೆ. ಇದಕ್ಕೆ ಜನರು ಸಹಕಾರ ನೀಡಬೇಕು ಎಂದು ಹೇಳಿದರು. ಪುರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಇನ್ಮುಂದೆ ಮೈ ಚಳಿ ಬಿಟ್ಟು ಕೆಲಸ ಮಾಡಬೇಕು. ಜನರ ಸಮಸ್ಯೆಗಳಿಗೆ ಕಿವಿಯಾಗಿ ಕೆಲಸ ಮಾಡಿದರೆ ಪುರಸಭೆಗೆ ಒಳ್ಳೆಯ ಹೆಸರು ಬರಲಿದೆ. ಆ ಕೆಲಸ ಆಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಕ್ಷೇತ್ರದ ಶಾಸಕ ಎಚ್.ಎಂ. ಗಣೇಶ್‌ ಪ್ರಸಾದ್‌ ಅವರ ಕೃಪಾಶೀರ್ವಾದ ಹಾಗೂ ಪುರಸಭೆ ಸದಸ್ಯರು ಸಾಥ್‌ ನೀಡಿದ ಫಲವಾಗಿ ನಾನು ಅಧ್ಯಕ್ಷನಾಗಿದ್ದೇನೆ. ಅವರಿಗೆ ಕೃತಜ್ಞತೆ ಸಲ್ಲಿಸುವೆ ಎಂದು ಹೇಳಿದರು.