ಸಂಬಳಕ್ಕೆ ಬದ್ದರಾಗಿ ಕೆಲಸ ಮಾಡಿ

| Published : Jul 28 2024, 02:05 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಜಮಖಂಡಿ ಖಾಸಗಿ ಶಾಲೆಗಳಿಗಿಂತ ಉತ್ತಮ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿ ದೊರೆಯಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ.ತಿಮ್ಮಾಪೂರ ಹೇಳಿದರು. ಕುಂಬಾರಹಳ್ಳ ಗ್ರಾಮದಲ್ಲಿ ಜಿಲ್ಲಾ ಆಡಳಿತ, ಜಿಪಂ, ಶಾಲಾ ಶಿಕ್ಷಣ ಇಲಾಖೆಯಿಂದ ನೂತನವಾಗಿ ನಿರ್ಮಿಸಿದ್ದ ಆರ್‌ಎಂಎಸ್‌ಎ ಸರ್ಕಾರಿ ಪೌಢ ಶಾಲೆಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಜಮಖಂಡಿ

ಖಾಸಗಿ ಶಾಲೆಗಳಿಗಿಂತ ಉತ್ತಮ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿ ದೊರೆಯಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ.ತಿಮ್ಮಾಪೂರ ಹೇಳಿದರು. ಕುಂಬಾರಹಳ್ಳ ಗ್ರಾಮದಲ್ಲಿ ಜಿಲ್ಲಾ ಆಡಳಿತ, ಜಿಪಂ, ಶಾಲಾ ಶಿಕ್ಷಣ ಇಲಾಖೆಯಿಂದ ನೂತನವಾಗಿ ನಿರ್ಮಿಸಿದ್ದ ಆರ್‌ಎಂಎಸ್‌ಎ ಸರ್ಕಾರಿ ಪೌಢ ಶಾಲೆಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ಸರ್ಕಾರ ಕೊಡುವಷ್ಟು ಸಂಬಳವನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಕೊಡುವುದಿಲ್ಲ. ಆದರೂ, ಫಲಿತಾಂಶ ಮತ್ತು ಕಲಿಸುವಿಕೆ ಉತ್ತಮವಾಗಿರುತ್ತದೆ. ಅದರಂತೆ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಬೇಕು. ಅದಕ್ಕೆ ಶಿಕ್ಷಕರು ತಮ್ಮ ಜವಾಬ್ದಾರಿ ಅರಿತು ಸಂಬಳಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡಿ ಎಂದರು.

ಮುಧೋಳದ ವಿದ್ಯಾರ್ಥಿನಿ ಹತ್ತನೇ ತರಗತಿಯ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ಹೆಮ್ಮೆಯ ವಿಷಯ. ಅದರಂತೆಯೇ ಎಲ್ಲ ಸರ್ಕಾರಿ ಶಾಲೆಗಳು ಉತ್ತಮ ಫಲಿತಾಂಶ ತರಬೇಕೆಂದರು.

ಬಡವರ ಮಕ್ಕಳು ಓದುವ ಸರ್ಕಾರಿ ಶಾಲೆಗಳಲ್ಲಿ ಖಾಸಗಿ ಶಾಲೆಗಳ ಮಾದರಿಯಲ್ಲಿ ಶಿಕ್ಷಣ ದೊರೆತು ಎಲ್ಲರೂ ಸರ್ಕಾರಿ ಶಾಲೆಯ ಪ್ರವೇಶ ಪಡೆಯಬೇಕು. ಬಡವರ ಮಕ್ಕಳಿಗೆ ನ್ಯಾಯ ಸಿಗಬೇಕಿದ್ದು, ಶಿಕ್ಷಕರು ಪ್ರಾಮಾಣಿಕತೆಯಿಂದ ಸೇವೆ ಮಾಡುವಂತೆ ಸೂಚಿಸಿದರು.

ಹರ್ಷಾನಂದ ಸ್ವಾಮಿಗಳು, ಶಾಸಕ ಜಗದೀಶ ಗುಡಗುಂಟಿ, ಜಗದೀಶಯ್ಯ ಮಠಪತಿ ಶ್ರೀಗಳು, ಜಿಲ್ಲಾಧಿಕಾರಿ ಜಾನಕಿ.ಕೆ.ಎಂ. ಜಿಪಂ ಸಿಇಒ ಶಶಿಧರ ಕುರೇರ, ಎಸ್‌.ಪಿ.ಅಮರನಾಥ ರೆಡ್ಡಿ. ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ತಹಸೀಲ್ದಾರ್‌ ಸದಾಶಿವ ಮಕ್ಕೊಜಿ, ಸಿಪಿಐ ಮಲ್ಲಪ್ಪ ಮಡ್ಡಿ, ಶಿಕ್ಷಣ ಇಲಾಖೆಯ ಬಿ.ಕೆ.ನಂದನೂರ, ಬಿಇಒ ಎ.ಕೆ.ಬಸಣ್ಣವರ, ಮುಖ್ಯೋಪಾಧ್ಯಾಯ ನಾರಾಯಣ ಶಾಸ್ತ್ರಿ, ಗ್ರಾಪಂ ಅಧ್ಯಕ್ಷೆ ಶಾಂತವ್ವ ಐನಾಪೂರ ಮುಂತಾದವರಿದ್ದರು.