ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಮಾತನಾಡಿ, ಕಳೆದ ಎರಡು ಅವಧಿಯಲ್ಲಿ ತಮ್ಮನ್ನು ಆಯ್ಕೆ ಮಾಡಿದ ಪದವೀಧರ ಮತದಾರರು ಹಾಗೂ ಪಕ್ಷದ ಕಾರ್ಯಕರ್ತರ ಬಗ್ಗೆ ಕೃತಜ್ಞತೆ ವ್ಯಕ್ತಪಡಿಸಿದರು. ಈ ಬಾರಿಯ ಚುನಾವಣೆಯಲ್ಲಿಯೂ ತಮ್ಮನ್ನು ಬೆಂಬಲಿಸಿ ಆಯ್ಕೆ ಮಾಡುವಂತೆ ಮನವಿ ಮಾಡಿದರು.
ಕಾರವಾರ: ಪಶ್ಚಿಮ ಪದವೀಧರ ಮತಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತಗಳನ್ನು ಕೊಡಿಸಿ ಗೆಲ್ಲಿಸಲು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ರೂಪಾಲಿ ಎಸ್. ನಾಯ್ಕ ಕರೆ ನೀಡಿದರು.ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ವಿಧಾನಪರಿಷತ್ ಚುನಾವಣೆಯ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದ ಅಭ್ಯರ್ಥಿ ಸಂಕನೂರ ಅವರ ಗೆಲುವಿಗಾಗಿ ಪ್ರತಿಯೊಬ್ಬ ಕಾರ್ಯಕರ್ತರೂ ಸಂಘಟಿತವಾಗಿ ಕಾರ್ಯನಿರ್ವಹಿಸಬೇಕು. ಸಂಕನೂರ ಅವರನ್ನು ಗೆಲ್ಲಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕು ಎಂದರು.ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಮಾತನಾಡಿ, ಕಳೆದ ಎರಡು ಅವಧಿಯಲ್ಲಿ ತಮ್ಮನ್ನು ಆಯ್ಕೆ ಮಾಡಿದ ಪದವೀಧರ ಮತದಾರರು ಹಾಗೂ ಪಕ್ಷದ ಕಾರ್ಯಕರ್ತರ ಬಗ್ಗೆ ಕೃತಜ್ಞತೆ ವ್ಯಕ್ತಪಡಿಸಿದರು. ಈ ಬಾರಿಯ ಚುನಾವಣೆಯಲ್ಲಿಯೂ ತಮ್ಮನ್ನು ಬೆಂಬಲಿಸಿ ಆಯ್ಕೆ ಮಾಡುವಂತೆ ಮನವಿ ಮಾಡಿದರು.ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಮಾತನಾಡಿ, ಸಂಕನೂರ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಬೆಂಬಲಿಸುವಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ವಿಧಾನಪರಿಷತ್ ಸದಸ್ಯ ಲಿಂಗರಾಜ ಪಾಟೀಲ್ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸುವ ನಿಟ್ಟಿನಲ್ಲಿ ಸಂಕನೂರ ಅವರನ್ನು ಬೆಂಬಲಿಸಬೇಕು ಎಂದರು.ಸಭೆಯ ಆರಂಭದಲ್ಲಿ ಭಾರತ ಮಾತೆಗೆ ಪುಷ್ಪನಮನ ಸಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಲಿಂಗರಾಜ ಪಾಟೀಲ್ ಹಾಗೂ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ರೂಪಾಲಿ ಎಸ್. ನಾಯ್ಕ ಸನ್ಮಾನಿಸಿದರು.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಹೆಗಡೆ, ಜಿಲ್ಲಾ ಉಪಾಧ್ಯಕ್ಷ ಸಂಜಯ ಸಾಳುಂಕೆ, ಗ್ರಾಮೀಣ ಪ್ರಭಾರಿ ಗಜಾನನ ಗುನಗಾ, ನಗರ ಪ್ರಭಾರಿ ರಾಜು ಭಂಡಾರಿ, ಮಾಧ್ಯಮ ಸಹ ಸಂಚಾಲಕ ಕಿಶನ್ ಕಾಂಬಳೆ, ರಾಜ್ಯ ಪ್ರಕೋಷ್ಟದ ಸುನಿಲ್ ಸೋನಿ, ರವಿರಾಜ್ ಅಂಕೋಲೆಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ನಾಗೇಶ್ ಕುರಡೇಕರ್ ಸ್ವಾಗತಿಸಿದರು. ಸುಭಾಷ್ ಗುನಗಿ ವಂದಿಸಿದರು. ಉದಯ ನಾಯ್ಕ ಕಾರ್ಯಕ್ರಮ ನಿರೂಪಿಸಿದರು.ವಿಶೇಷ ಪೂಜೆ
ಕಾರ್ಯಕರ್ತರು ಹಾಗೂ ಮುಖಂಡರು ನಗರದ ಬಾಡ ಮಹಾದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರ ಗೆಲುವು ಹಾಗೂ ಎಲ್ಲರ ಒಳಿತಿಗಾಗಿ ಪ್ರಾರ್ಥಿಸಿದರು.