ಕರ್ನಾಟಕ ಸುವರ್ಣ ಸಂಭ್ರಮ ಕಾಯಕ್ರಮ ಯಶಸ್ವಿಗೆ ಶ್ರಮಿಸಿ

| Published : Aug 06 2024, 12:37 AM IST

ಕರ್ನಾಟಕ ಸುವರ್ಣ ಸಂಭ್ರಮ ಕಾಯಕ್ರಮ ಯಶಸ್ವಿಗೆ ಶ್ರಮಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಕರ್ನಾಟಕ ಸುವರ್ಣ ಸಂಭ್ರಮದ ನಿಮಿತ್ತ ಗಡಿನಾಡಿನ ಕನ್ನಡಿಗರನ್ನು ಪ್ರೋತ್ಸಾಹಿಸುವ ಸಲುವಾಗಿ ಮಹಾರಾಷ್ಟ್ರದ ಗುಡ್ಡಾಪುರ ಸುಕ್ಷೇತ್ರದಲ್ಲಿ ಬೃಹತ್‌ ಕಾರ್ಯಕ್ರಮ ಯೋಜಿಸಲಾಗಿದೆ. ಕಾರ್ಯಕ್ರಮದ ಯಶಸ್ವಿಗೆ ಕನ್ನಡಪರ ಸಂಘಟನೆಗಳು, ಈ ಭಾಗದ ಜನಪ್ರತಿನಿಧಿಗಳು ಹಾಗೂ ಕನ್ನಡ ಪ್ರೇಮಿಗಳು ಶ್ರಮಿಸಬೇಕು ಎಂದು ಕರ್ನಾಟಕ ಗಡಿ ಪ್ರದೇಶ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಚಡಚಣ

ಕರ್ನಾಟಕ ಸುವರ್ಣ ಸಂಭ್ರಮದ ನಿಮಿತ್ತ ಗಡಿನಾಡಿನ ಕನ್ನಡಿಗರನ್ನು ಪ್ರೋತ್ಸಾಹಿಸುವ ಸಲುವಾಗಿ ಮಹಾರಾಷ್ಟ್ರದ ಗುಡ್ಡಾಪುರ ಸುಕ್ಷೇತ್ರದಲ್ಲಿ ಬೃಹತ್‌ ಕಾರ್ಯಕ್ರಮ ಯೋಜಿಸಲಾಗಿದೆ. ಕಾರ್ಯಕ್ರಮದ ಯಶಸ್ವಿಗೆ ಕನ್ನಡಪರ ಸಂಘಟನೆಗಳು, ಈ ಭಾಗದ ಜನಪ್ರತಿನಿಧಿಗಳು ಹಾಗೂ ಕನ್ನಡ ಪ್ರೇಮಿಗಳು ಶ್ರಮಿಸಬೇಕು ಎಂದು ಕರ್ನಾಟಕ ಗಡಿ ಪ್ರದೇಶ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರ ಮನವಿ ಮಾಡಿದರು.

ಸಮೀಪದ ಗುಡ್ಡಾಪುರ ಸುಕ್ಷೇತ್ರದಲ್ಲಿ ಸೋಮವಾರ ಆಯೋಜಿಸಲಾದ ಗಡಿನಾಡ ಚೇತನ ಪ್ರಶಸ್ತಿ ಪ್ರದಾನ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ -೫೦ ಕನ್ನಡ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಬೃಹತ್‌ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸೇರಿದಂತೆ ಸರ್ಕಾರ ಸಚಿವರು ಆಗಮಿಸಲಿದ್ದಾರೆ. ಗಡಿನಾಡ ಮಹಾರಾಷ್ಟ್ರದಲ್ಲಿ ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿ ಹೊರಹೊಮ್ಮಲಿದೆ. ಗಡಿ ಮಹಾರಾಷ್ಟ್ರದ ಕನ್ನಡ ಶಾಲೆಗಳು ಬೆಳೆಸಲು ಹಾಗೂ ಪ್ರೋತ್ಸಾಹಿಸಲು ಈ ಕಾರ್ಯಕ್ರಮದಲ್ಲಿ ನಲಿಕಲಿ ಸಾಮಗ್ರಗಳು ವಿತರಿಸಲಿದ್ದೇವೆ. ಅಲ್ಲದೇ ಇದೇ ಸಂದಭದಲ್ಲಿ ಕನ್ನಡಕ್ಕಾಗಿ ಶ್ರಮಿಸಿದ ಮೂವರನ್ನು ಗಡಿನಾಡ ಚೇತನ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಈ ಭಾಗದ ಶಾಸಕರು, ಎಲ್ಲ ಕನ್ನಡ ಪರ ಸಂಘಟನೆಯವರು, ಕನ್ನಡ ಪ್ರೇಮಿಗಳು, ಕನ್ನಡ ಶಾಲೆಗಳ ಶಿಕ್ಷಕರು, ಶಿಕ್ಷಕರ ಸಂಘಟನೆಯವರು ಸೇರಿದಂತೆ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಸಹಕರಿಸಬೇಕು ಎಂದು ಕೋರಿದರು.ಕರ್ನಾಟಕ ಗಡಿ ಪ್ರದೇಶ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತಿಹಳ್ಳಿ ಪ್ರಾಸ್ಥಾವಿಕವಾಗಿ ಮಾತನಾಡಿ, ಗಡಿ ಮಹಾರಾಷ್ಟ್ರದ ಕನ್ನಡ ಶಾಲೆಗಳು ಬೆಳೆಸಲು ಪಣತೊಟ್ಟ ಗಡಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರ ಅವರು ಗಡಿ ಭಾಗದ ಮಹಾರಾಷ್ಟ್ರದ ಸೂಕ್ಷೇತ್ರ ಗುಡ್ಡಾಪುರದಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮ ಮಾಡಲು ಮುಂದಾಗಿರುವುದು ಶ್ಲಾಘನೀವಾದುದು ಎಂದರು. ಶಾಸಕ ವಿಕ್ರಮದಾದಾ ಚಾಳುಂಖೆ ಮಾತನಾಡಿ, ನಮ್ಮ ಭಾಗದಲ್ಲಿ ಅತೀ ಹೆಚ್ಚು ಕನ್ನಡ ಶಾಲೆಗಳಿವೆ. ಕರ್ನಾಟಕ ಸುವರ್ಣ ಸಂಭ್ರಮದ ನಿಮಿತ್ತ ಆಯೋಜಿಸಲಾದ ಕರ್ನಾಟಕ ಸರ್ಕಾರಿ ಕಾರ್ಯಕ್ರಮಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಕಾಯಕ್ರಮದ ಯಶಸ್ವಿಗೆ ನಾನು ಹಾಗೂ ನಮ್ಮ ಭಾಗದ ಕನ್ನಡಪರ ಸಂಘಟನೆಯವರು, ಕನ್ನಡ ಶಾಲೆಯ ಅಧಿಕಾರಿಗಳು ಹಾಗೂ ವಿವಿಧ ಕನ್ನಡಪರ ಸಂಘಟನೆಯವರು ಸಹಕರಿಸುತ್ತೇವೆ ಎಂದರು.

ಸಭೆಯಲ್ಲಿ ಗಡಿ ಪ್ರಾಧಿಕಾರದ ನಿರ್ದೇಶಕರಾದ ಡಾ.ಎಂ.ಎಸ್.ಮದಭಾವಿ, ಶಿವರೆಡ್ಡಿ ಕ್ಯಾಡರ್, ಡಾ.ಸಂಜೀವ ಅತವಾಳೆ, ಭಗತರಾಜ ನಿಜವಂಕರ, ಅಶೋಕ ಚಲವಾದಿ, ಧಾನಮ್ಮ ದೇವಿ ಟ್ರಸ್ಟ್ ಉಪಾಧ್ಯಕ್ಷ ಚಂದ್ರಶೇಖರ, ಮುಖಂಡರಾದ ಬಾಬಾಸಾಬ ಸಲಗರ, ಸುಭಾಸ ಪಾಟೀಲ, ರೇಶ್ಮಾ ಹೋರ್ತಿಕರ, ಕನ್ನಡ ಮತ್ತು ಸಂಸ್ಕೃತಿ ಸಹಾಯಕ ನಿರ್ದೇಶಕ ಸಂತೋಶ, ಅರಕೇರಿ, ಸಾಹಿತಿ ಬಸವರಾಜ ಯಂಕಂಚಿ, ಎಸ್.ಎಸ್.ಹಾವಿನಾಳ, ರವಿಗೌಡ ಬಿರಾದಾರ, ಜಿ.ಬಿ.ಕೋರಿ, ರಮೇಶ ಮಲ್ಲಾಡಿ ಸೇರಿದಂತೆ ಕನ್ನಡ ಪರ ಸಂಘಟನೆಯ ಸದಸ್ಯರು, ಶಿಕ್ಷಕರು, ವಿವಿಧ ಸಂಘಟನೆಯ ಆಡಳಿತ ಮಂಡಳಿ ಉಪಸ್ಥಿತರಿದ್ದರು.