ಬನ್ನಂಗಾಡಿ ಗ್ರಾಮಕ್ಕೂ ನಮ್ಮ ಕುಟುಂಬಕ್ಕೂ ಅವಿನಾಭವ ಸಂಬಂಧವಿದೆ, ನಾನು ಶಾಸಕ, ಸಚಿವನಾಗಿ ಕೆಲಸ ಮಾಡುವಾಗ ಮತ್ತು ನಮ್ಮ ಶ್ರೀಮತಿ ನಾಗಮ್ಮ, ಅಣ್ಣನ ಮಗ ಅಶೋಕ್ ಜಿಪಂ ಸದಸ್ಯರಾಗಿ ಕೆಲಸ ಮಾಡಿ ಈ ಭಾಗದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದೇವೆ.

ಕನ್ನಡಪ್ರಭ ವಾರ್ತೆ ಪಾಂಡವಪುರ

ಗ್ರಾಮೀಣ ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ಹಿರಿಯ ವಿದ್ಯಾರ್ಥಿಗಳು, ಪೋಷಕರು ಹಾಗೂ ಗ್ರಾಮಸ್ಥರು ಶ್ರಮಿಸಬೇಕು ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದರು.

ತಾಲೂಕಿನ ಬನ್ನಂಗಾಡಿ ಗ್ರಾಮದಲ್ಲಿ ನಡೆದ ಸರ್ಕಾರಿ ಶಾಲೆಯ ಶತಮಾನೋತ್ಸವ ಸಂಭ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಇಲ್ಲಿ ಸರ್ಕಾರಿ ಶಾಲೆ ಶತಮಾನೋತ್ಸವ ಪೂರೈಸಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು, ಮುಖಂಡರು, ಹಿರಿಯ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಎಲ್ಲರು ಜತೆಗೂಡಿ ಊರ ಹಬ್ಬದಂತೆ ಸಂಭ್ರಮದಿಂದ ಶತಮಾನೋತ್ಸವ ಆಚರಣೆ ಮಾಡಿರುವುದು ನಿಜಕ್ಕೂ ಶ್ಲಾಘನೀಯ ಎಂದರು.

ಕಾರ್ಯಕ್ರಮದ ನೆರವಿಗಾಗಿ ನಾನು ಸಹ ವೈಯುಕ್ತಿಕವಾಗಿ 2 ಲಕ್ಷ ಆರ್ಥಿಕ ನೆರವು ನೀಡಿದ್ದೇನೆ. ನಮ್ಮ ಗ್ರಾಮಗಳ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸುವುದು ಪ್ರತಿಯೊಬ್ಬರ ಜವಾಬ್ದಾರಿ. ಇಂತಹ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಮಟ್ಟದಲ್ಲಿ ನಡೆಯಬೇಕು ಎಂದರು.

ಬನ್ನಂಗಾಡಿ ಗ್ರಾಮಕ್ಕೂ ನಮ್ಮ ಕುಟುಂಬಕ್ಕೂ ಅವಿನಾಭವ ಸಂಬಂಧವಿದೆ, ನಾನು ಶಾಸಕ, ಸಚಿವನಾಗಿ ಕೆಲಸ ಮಾಡುವಾಗ ಮತ್ತು ನಮ್ಮ ಶ್ರೀಮತಿ ನಾಗಮ್ಮ, ಅಣ್ಣನ ಮಗ ಅಶೋಕ್ ಜಿಪಂ ಸದಸ್ಯರಾಗಿ ಕೆಲಸ ಮಾಡಿ ಈ ಭಾಗದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದೇವೆ ಎಂದರು.

ಶತಮಾನೋತ್ಸವ ಸಂಭ್ರಮದ ನೆನಪಿಗಾಗಿ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರ ಅನುದಾನದಲ್ಲಿ ಕಲಾ ಭವನ ನಿರ್ಮಾಣ ಮಾಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜತೆಗೆ ಶಾಲೆ ನಿರ್ಮಾಣಕ್ಕೆ ಭೂಮಿ ದಾನ ನೀಡಿದ ದಾನಿಗಳ ಹೆಸರು ಶಾಶ್ವತವಾಗಿ ನೆಲೆಸುವಂತಹ ಕೆಲಸವನ್ನು ಗ್ರಾಮಸ್ಥರು ಮಾಡಬೇಕು ಎಂದರು.

ವಿಶ್ವ ಒಕ್ಕಲಿಗರ ಮಠದ ಪೀಠಾಧ್ಯಕ್ಷ ಡಾ.ನಿಶ್ಚಲಾನಂದನಾಥ ಸ್ವಾಮೀಜಿ ಮಾತನಾಡಿ, ಸರ್ಕಾರ ಶಾಲೆಗಳು ಮುಚ್ಚುತ್ತಿರುವ ದಿನಗಳಲ್ಲಿ ಬನ್ನಂಗಾಡಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು, ಹಳೇ ವಿದ್ಯಾರ್ಥಿಗಳು ಸೇರಿ ವಿಜೃಂಭಣೆಯಿಂದ ಶತಮಾನೋತ್ಸವ ಆಚರಣೆ ಮಾಡಿರುವುದು ಸಂತಸದ ಸಂಗತಿ ಎಂದರು.

ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿಬಂದವು. ಸಮಾರಂಭದಲ್ಲಿ ತಾಪಂ ಮಾಜಿ ಅಧ್ಯಕ್ಷ ಬಿ.ಡಿ.ಹುಚ್ಚೇಗೌಡ, ತಾಪಂ ಮಾಜಿ ಸದಸ್ಯ ಬಿ.ಪಿ.ಶ್ರೀನಿವಾಸ್, ನಿವೃತ್ತ ಶಿಕ್ಷಕ ಶಿವೇಗೌಡ, ಜಿಲ್ಲಾ ಕುರುಬ ಸಮಾಜದ ಉಪಾಧ್ಯಕ್ಷ ಬಿ.ಕೆ.ರೇವಣ್ಣ, ಸಾಹಿತಿ ಸಿದ್ದಲಿಂಗಪ್ಪ, ಮುಖ್ಯಶಿಕ್ಷಕಿ ಸುಲೋಚನ, ಡೈರಿ ಅಧ್ಯಕ್ಷ ಧನಂಜಯ್ಯ, ಯಾ.ಕರೀಗೌಡ, ಬಿ.ಜಿ.ಪ್ರಕಾಶ್, ಲೋಕೇಶ್, ರಾಮೇಗೌಡ, ಗ್ರಾಪಂ ಮಾಜಿ ಅಧ್ಯಕ್ಷರಾದ ಪ್ರಭಾಕರ್, ಗಾಡಿಯೋಗಣ್ಣ, ಸಿಡಿಸಿ ಉಪಾಧ್ಯಕ್ಷ ಬಿ.ಕೆ.ಶ್ರೀನಿವಾಸ್, ಮುಂಖಡರಾದ ಬಿ.ಆರ್.ಪ್ರಸನ್ನ, ಅಂಗಡಿ ಅಣ್ಣಯ್ಯ, ಮೆಡಿಕಲ್ ವಿಶ್ವ, ದೇವರಾಜು, ಧನಂಜಯ, ಸರ್ವೆಸುರೇಶ್, ಬಿ.ಜೆ.ಸ್ವಾಮಿ, ವಿ.ಎ.ದಿನೇಶ್, ಐ.ಸಿ.ಪ್ರಸನ್ನ, ನಂದಿಶ್, ಕೇಬಲ್‌ರವಿ, ವಾಸು, ಸಂತು, ಪದ್ದಿ, ಹಾಗೂ ಎಲ್ಲಾ ಸಂಘ ಸಂಸ್ಥೆಯ ಪದಾಧಿಕಾರಿಗಳು ಎಸ್.ಡಿ.ಎಂ.ಸಿ.ಅಧ್ಯಕ್ಷರು, ಸದಸ್ಯರು, ಗ್ರಾಮದ ಯಾಜಮನರು, ಯುವಕರು ಸೇರಿದಂತೆ ಹಾಜರಿದರು.