ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಿ

| Published : Aug 04 2024, 01:17 AM IST / Updated: Aug 04 2024, 01:18 AM IST

ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಯಾವುದೇ ಲೋಪದೋಷಗಳಿಲ್ಲದೆ ಆಯಾ ಇಲಾಖೆ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಹನೂರುಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಯಾವುದೇ ಲೋಪದೋಷಗಳಿಲ್ಲದೆ ಆಯಾ ಇಲಾಖೆ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.

ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದಲ್ಲಿ ಕರೆಯಲಾಗಿದ್ದ ರಾಷ್ಟ್ರೀಯ ಹಬ್ಬಗಳ ಆಚರಣೆ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಹನೂರು ವಿಧಾನಸಭಾ ಕ್ಷೇತ್ರ ಗುಡ್ಡಗಾಡು, ದಟ್ಟಾರಣ್ಯಗಳಿಂದ ಕೂಡಿರುವ ಶೇ.70 ರಷ್ಟು ಅರಣ್ಯ ಪ್ರದೇಶವೇ ಇರುವುದರಿಂದ ಅರಣ್ಯ ಇಲಾಖೆ ಮುಖ್ಯವಾಗಿ ಮೂರು ವಿಭಾಗಗಳ ಹಿರಿಯ ಅಧಿಕಾರಿಗಳು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ವಾತಂತ್ರ ದಿನಾಚರಣೆ ಯಶಸ್ವಿಗೊಳಿಸಬೇಕು. ಜೊತೆಗೆ ಆಯಾ ಇಲಾಖೆ ತಮಗೆ ವಹಿಸಿದ ಜವಾಬ್ದಾರಿ ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷ ಬಾರದಂತೆ ಕ್ರಮ ಕೈಗೊಳ್ಳುವ ಮೂಲಕ ಅಧಿಕಾರಿ, ಸಿಬ್ಬಂದಿ ವರ್ಗದವರು ಕ್ರಮ ಕೈಗೊಳ್ಳಬೇಕು. ವಿದ್ಯುತ್ ಇಲಾಖೆ ಕಾರ್ಯಕ್ರಮದ ದಿನ ವಿದ್ಯುತ್ ದೀಪ ಅಲಂಕಾರ ಮಾಡಿ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಬೇಕು. ಮಕ್ಕಳಿಗೆ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯುವುದರಿಂದ ಯಾವುದೇ ಸಮಸ್ಯೆಗಳು ಆಗದಂತೆ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಜೊತೆಗೆ ತಾತ್ಕಾಲಿಕ ಶೌಚಾಲಯ ವ್ಯವಸ್ಥೆ ಸಹ ಮಾಡಬೇಕಾಗಿದೆ. ಒಟ್ಟಾರೆ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮವನ್ನು ಹಬ್ಬದಂತೆ ಆಚರಿಸಲು ಪ್ರತಿಯೊಬ್ಬ ಇಲಾಖೆ ಅಧಿಕಾರಿ, ಸಿಬ್ಬಂದಿ ವರ್ಗ ಶಿಸ್ತಿನಿಂದ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.

ತಹಸೀಲ್ದಾರ್ ಗುರುಪ್ರಸಾದ್ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ ಯಶಸ್ವಿಗೊಳಿಸಲು ಎಲ್ಲ ಇಲಾಖೆ ಅಧಿಕಾರಿ, ಸಿಬ್ಬಂದಿ ವರ್ಗ ತಪ್ಪದೆ ಕಾರ್ಯಕ್ರಮಕ್ಕೆ ಭಾಗವಹಿಸುವ ಮೂಲಕ ಅಚ್ಚುಕಟ್ಟಾಗಿ ತಮಗೆ ವಹಿಸಿದ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ತಾಪಂ ಇಒ ಉಮೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ನಂಜಮಣಿ, ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ, ಇನ್ಸ್‌ಪೆಕ್ಟರ್ ಶಶಿಕುಮಾರ್, ಸಬ್ ಇನ್ಸ್‌ಪೆಕ್ಟರ್ ಮಂಜುನಾಥ್ ಪ್ರಸಾದ್ , ಕೃಷಿ ಇಲಾಖೆ ಅಧಿಕಾರಿ ನಾಗೇಂದ್ರ ,ಶೇಷಣ್ಣ, ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.