ಬಾಲ್ಯವಿವಾಹ ತಡೆಗೆ ಶ್ರಮಿಸಿ: ಬಿಇಒ ಎಂ.ಎಫ್. ಬಾರ್ಕಿ

| Published : Jul 19 2025, 01:00 AM IST

ಬಾಲ್ಯವಿವಾಹ ತಡೆಗೆ ಶ್ರಮಿಸಿ: ಬಿಇಒ ಎಂ.ಎಫ್. ಬಾರ್ಕಿ
Share this Article
  • FB
  • TW
  • Linkdin
  • Email

ಸಾರಾಂಶ

ಇತ್ತೀಚಿನ ದಿನಗಳಲ್ಲಿ ಪೋಕ್ಸೊ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿರುವುದು ವಿಷಾದಕರ ಸಂಗತಿ. ಬಾಲ್ಯವಿವಾಹ ನಿಷೇಧ ಕಾಯ್ದೆ ಬಗ್ಗೆ ಅರಿವು ಹೊಂದಿದ್ದರೂ ಸಾರ್ವಜನಿಕರು ಗೌಪ್ಯವಾಗಿ ಬಾಲ್ಯವಿವಾಹ ಮಾಡುತಿದ್ದು, ಇದರ ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಾಗುತ್ತಿದೆ.

ಹಾವೇರಿ: ಬಾಲ್ಯವಿವಾಹ ಹಾಗೂ ಪೋಕ್ಸೊ ಪ್ರಕರಣ ತಡೆಗೆ ಎಲ್ಲರೂ ಶ್ರಮಿಸಬೇಕು ಎಂದು ಸವಣೂರು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಫ್. ಬಾರ್ಕಿ ತಿಳಿಸಿದರು.ಸವಣೂರು ತಾಲೂಕಿನ ಹೂವಿನಶಿಗ್ಲಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಬಾಲ್ಯವಿವಾಹ ಕಾಯ್ದೆ, ಪೋಕ್ಸೊ ಕಾಯ್ದೆ, ಬಾಲಗರ್ಭಿಣಿ, ಮಕ್ಕಳ ಕಾವಲು ಸಮಿತಿ ಹಾಗೂ ಮಕ್ಕಳ ಹಕ್ಕುಗಳ ಕಾಯ್ದೆಗಳ ಕುರಿತು ಆಯೋಜಿಸಿದ್ದ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಇತ್ತೀಚಿನ ದಿನಗಳಲ್ಲಿ ಪೋಕ್ಸೊ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿರುವುದು ವಿಷಾದಕರ ಸಂಗತಿ. ಬಾಲ್ಯವಿವಾಹ ನಿಷೇಧ ಕಾಯ್ದೆ ಬಗ್ಗೆ ಅರಿವು ಹೊಂದಿದ್ದರೂ ಸಾರ್ವಜನಿಕರು ಗೌಪ್ಯವಾಗಿ ಬಾಲ್ಯವಿವಾಹ ಮಾಡುತಿದ್ದು, ಇದರ ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಾಗುತ್ತಿದೆ. ಮಕ್ಕಳ ಹಕ್ಕುಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಮಾ ಕೆ.ಎಸ್. ಮಾತನಾಡಿ, ಸರ್ಕಾರ ಅನೇಕ ಸೌಲಭ್ಯಗಳನ್ನು ಜಾರಿಗೆ ತಂದಿದ್ದರೂ ಪಾಲಕರು ಹಲವಾರು ಕಾರಣಗಳಿಂದ ಬಾಲ್ಯವಿವಾಹ ಮಾಡುತ್ತಿದ್ದಾರೆ. ಪಾಲಕರು ಹಾಗೂ ಪೋಷಕರು ತಮ್ಮ ಮಕ್ಕಳ ಮುಂದಿನ ಭವಿಷ್ಯದ ಬಗ್ಗೆ ಯೋಚನೆ ಮಾಡಿ, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಉಜ್ವಲ ಭವಿಷ್ಯ ರೂಪಿಸಬೇಕು ಎಂದರು. ವೈದ್ಯಾಧಿಕಾರಿ ಡಾ. ಚಂದ್ರಕಲಾ ಜೆ. ಮಾತನಾಡಿ, ಆಸ್ಪತ್ರೆಯಲ್ಲಿ ಬಾಲಗರ್ಭಿಣಿಯರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದರಿಂದ ಮಕ್ಕಳ ಆರೋಗ್ಯದ ಬಗ್ಗೆ ತುಂಬಾ ಅಡ್ಡ ಪರಿಣಾಮಗಳು ಉಂಟಾಗುತ್ತದೆ ಹಾಗೂ ಜನಿಸಿದ ಮಗುವು ಅಪೌಷ್ಟಿಕದಿಂದ ಬಳಲುತ್ತದೆ. ಪೋಷಕರು ಬಾಲ್ಯವಿವಾಹ ನಿಷೇಧ, ಪೋಕ್ಸೊ, ಮಕ್ಕಳ ಕಾವಲು ಸಮಿತಿ ಹಾಗೂ ಮಕ್ಕಳ ಹಕ್ಕುಗಳ ಕಾಯ್ದೆಗಳ ಕುರಿತು ತಿಳಿದುಕೊಳ್ಳಬೇಕು ಹಾಗೂ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು ಎಂದರು. ಹೂವಿನಶಿಗ್ಲಿ ಗ್ರಾಪಂ ಅಧ್ಯಕ್ಷೆ ಲಕ್ಷ್ಮವ್ವ ಗಡ್ಡಣ್ಣನವರ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಸದಸ್ಯ ನಿಂಗಪ್ಪ ಸೊರಟೂರ, ಎಸ್‌ಡಿಎಂಸಿ ಅಧ್ಯಕ್ಷ ದುಂಡಪ್ಪ ಗುಡಗೇರಿ ಎಎಸ್‌ಐ ಗೀತಾ ತಿರುಮಲೆ, ಮುಖ್ಯೋಪಾಧ್ಯಾಯ ಪಿ.ವಿ. ಗುತ್ತಲ, ಡಿಸಿಪಿ ಜಗದೀಶ ವಡಕಣ್ಣನವರ, ಹಾಗೂ ಕೃಷ್ಣ ಹುರಳಿಕುಪ್ಪಿ ಇತರರು ಪಾಲ್ಗೊಂಡಿದ್ದರು.