ಸಾರಾಂಶ
ಸುರಪುರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಪ್ರಧಾನಮಂತ್ರಿಗಳ ಕೈ ಬಲಪಡಿಸುವ ಕೆಲಸವಾಗಬೇಕು. ಪಕ್ಷದ ಕಾರ್ಯಕರ್ತರು ಉತ್ಸಾಹದಿಂದ ಕಾರ್ಯನಿರ್ವಹಿಸಿ ಕೇಂದ್ರದ ಸಾಧನೆಗಳನ್ನು ಮನೆಮನೆಗೆ ತಿಳಿಸಿ ಮತವಾಗಿ ಪರಿವರ್ತಿಸಬೇಕು ಎಂದು ಕಲಬುರಗಿ ವಿಭಾಗೀಯ ಪ್ರಭಾರಿ ಈಶ್ವರಸಿಂಗ್ ಠಾಕೂರ್ ಹೇಳಿದರು.
ನಗರದ ಬಿಜೆಪಿ ಕಚೇರಿ ಮತ್ತು ಮಾಜಿ ಸಚಿವರ ಕಾರ್ಯಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಫಲಾನುಭವಿಗಳ ಪ್ರಮುಖರ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದರು.ಕೇಂದ್ರ ಸರ್ಕಾರ ದೇಶದ ಅಭಿವೃದ್ಧಿಯಲ್ಲಿ ಪ್ರಮುಖಪಾತ್ರವಹಿಸಿದೆ. ರೈತರು, ಕೈಗಾರಿಕೆಗಳು, ವಿಜ್ಞಾನ ತಂತ್ರಜ್ಞಾನ ಸೇರಿದಂತೆ ಮೂಲಸೌಲಭ್ಯಗಳನ್ನು ಒದಗಿಸಿದೆ. ಹಲವಾರು ಯೋಜನೆಗಳನ್ನು ಜಾರಿಗೆ ತಂದು ಜನರನ್ನು ಹಾಗೂ ದೇಶವನ್ನು ಸದೃಢಗೊಳಿಸಿದೆ ಎಂದರು.
ಮಾಜಿ ಸಚಿವ ನರಸಿಂಹ ನಾಯಕ (ರಾಜೂಗೌಡ) ಮಾತನಾಡಿ, ಕೇಂದ್ರ ಸರ್ಕಾರ ದೇಶದ ಅಭಿವೃದ್ಧಿ ನಿಟ್ಟಿನಲ್ಲಿ ಮಹತ್ತರ ಪಾತ್ರವಹಿಸಿದೆ. ಪ್ರಧಾನಮಂತ್ರಿ ಸ್ವಾಸ್ಥ್ಯ ಸುರಕ್ಷಾ ನಿಧಿ, ಆಯುಷ್ಮಾನ್ ಭಾರತ್, ಇಂದ್ರಧನುಷ್, ಕೌಶಲ್ ವಿಕಾಸ ಯೋಜನೆ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಯೋಜನೆಗಳು, ಸರಳ ಜೀವನ ಬಿಮಾ ಸೇರಿದಂತೆ ಅಪಾರ ಕೊಡುಗೆಗಳನ್ನು ನೀಡಿದೆ. ಇದರ ಸದುಪಯೋಗ ಪಡೆದ ಜನರು ಬಿಜೆಪಿ ಬೆಂಬಲಿಸಬೇಕು ಎಂದು ಮನವಿ ಮಾಡಿದರು.ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರಾಜಾ ಹನಮಪ್ಪ ನಾಯಕ, ಬಿಜೆಪಿ ಜಿಲ್ಲಾಧ್ಯಕ್ಷ ಅಮೀನರಡ್ಡಿ ಪಾಟೀಲ್ ಯಾಳಗಿ, ಯಾದಗಿರಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪರಶುರಾಮ, ಮೇಲಪ್ಪ ಗುಳಗಿ, ಗುರು ಕಾಮ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಎಚ್.ಸಿ.ಪಾಟೀಲ್, ಯಲ್ಲಪ್ಪ ಕುರಕುಂದಿ, ಮುಖಂಡರಾದ ರಾಜಾ ಮುಕುಂದ ನಾಯಕ, ಮುಖಂಡರಾದ ಮಾನಪ್ಪ ಸಾಹುಕಾರ ಆಲ್ದಾಳ, ಎಪಿಎಂಸಿ ಮಾಜಿ ಸದಸ್ಯ ದುರ್ಗಪ್ಪ ಗೋಗಿಕೇರಿ ಸೇರಿದಂತೆ ಇತರರಿದ್ದರು.