ಮಹಿಳಾ ಆರ್ಥಿಕ ಶಕ್ತಿ ವೃದ್ಧಿಸುವ ಕೆಲಸವಾಗುತ್ತಿದೆ

| Published : Oct 02 2024, 01:07 AM IST

ಮಹಿಳಾ ಆರ್ಥಿಕ ಶಕ್ತಿ ವೃದ್ಧಿಸುವ ಕೆಲಸವಾಗುತ್ತಿದೆ
Share this Article
  • FB
  • TW
  • Linkdin
  • Email

ಸಾರಾಂಶ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳಾ ಸ್ವಸಹಾಯ ಗುಂಪುಗಳ ಆರ್ಥಿಕ ಶಕ್ತಿಯನ್ನು ವೃದ್ಧಿಸುವ ಜತೆಗೆ ಇತರೆ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲೂ ಸಹ ತಮ್ಮದೇಯಾದ ನಿಸ್ವಾರ್ಥ ಸೇವೆ ಸಲ್ಲಿಸುತ್ತದೆ. ಒಕ್ಕೂಟದ ಎಲ್ಲಾ ಹಂತದ ಪದಾಧಿಕಾರಿಗಳು ಪ್ರಾಮಾಣಿಕ, ದಕ್ಷ ಸೇವೆಯಿಂದ ಸಮಾಜದ ಏಳಿಗೆಗೆ ಶ್ರಮಿಸುವ ಸಂಕಲ್ಪ ಮಾಡಬೇಕೆಂದು ಚಿತ್ರದುರ್ಗ ಪ್ರಾದೇಶಿಕ ವಿಭಾಗದ ನಿರ್ದೇಶಕಿ ಬಿ. ಗೀತಾ ತಿಳಿಸಿದರು.

ಕನ್ನಡಪ್ರಭ ವಾರ್ತೆ ಚಳ್ಳಕೆರೆ

ಅವರು, ನಗರದ ಆದಿನಾಥ ಜೈನ ಭವನದಲ್ಲಿ ತಾಲೂಕು ಮಟ್ಟದ ಮಹಿಳಾ ಸ್ವಸಹಾಯ ಗುಂಪುಗಳ ಒಕ್ಕೂಟದ ಪದಾಧಿಕಾರಿಗಳ ಸಮಾವೇಶವನ್ನು ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಈ ಹಿಂದೇ ಕೆಲವು ಪ್ರದೇಶ, ಕೆಲ ವ್ಯಕ್ತಿಗಳಿಗೆ ಮಾತ್ರ ಸೀಮಿತವಾಗಿದ್ದ ಸೇವಾ ಚಟುವಟಿಕೆ, ಇಂದು ನಗರ ಹಾಗೂ ಗ್ರಾಮೀಣ ಪ್ರದೇಶದ ಸಾರ್ವಜನಿಕರ ಆರ್ಥಿಕ ಶಕ್ತಿಯನ್ನು ತುಂಬುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಿದೆ ಎಂದು ತಿಳಿಸಿದರು.

ಮಹಿಳಾ ಸ್ವಸಹಾಯಕ ಗುಂಪು ಸೇರಿದಂತೆ ರೈತರು, ಕಾರ್ಮಿಕರು, ಪುರಾತನ ದೇವಸ್ಥಾನಗಳ ಜೀರ್ಣೋದ್ದಾರಕ್ಕೆ ಸಂಸ್ಥೆ ನೆರವಾಗುತ್ತಿದೆ. ಒಕ್ಕೂಟದ ಪದಾಧಿಕಾರಿಗಳು ಆತ್ಮವಿಶ್ವಾಸದಿಂದ ಸಂಸ್ಥೆಯ ಅಭಿವೃದ್ಧಿಗೆ ದುಡಿಯಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷೆ ವಹಿಸಿದ್ದ ಜಿಲ್ಲಾ ಜನಜಾಗೃತಿ ವೇದಿಕೆ ನಿರ್ದೇಶಕ ಕೆ.ಎಂ. ತಿಪ್ಪೇಸ್ವಾಮಿ ಮಾತನಾಡಿ, ಇಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕಿನ ಪುಟ್ಟ ಗ್ರಾಮ, ಪುಟ್ಟ ಓಣಿಯಿಂದ ಹಿಡಿದು ನಗರ ಪ್ರದೇಶದವರೆಗೂ ವಿಸ್ತಾರವಾಗಿದೆ. ಮಹಿಳೆಯನ್ನು ಸ್ವಾವಲಂಭಿಯಾಗಿ ದುಡಿಯುವ ಮಾರ್ಗವನ್ನು ಈ ಸಂಸ್ಥೆ ಕಲ್ಪಿಸಿದೆ. ಒಕ್ಕೂಟದ ಪದಾಧಿಕಾರಿಗಳು ಸಹ ಸಂಸ್ಥೆಯ ಸರ್ವತೋಮುಖ ಅಭಿವೃದ್ಧಿಗೆ ಕಂಕಣಬದ್ಧರಾಗಿ ದುಡಿಯಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನಾಯಕನಹಟ್ಟಿ ಯೋಜನಾಧಿಕಾರಿ ಅಣ್ಣಪ್ಪ, ಎಂ.ಎನ್. ಮೃತ್ಯುಂಜಯ, ಎಂ. ವೈಟಿಸ್ವಾಮಿ, ಬ್ಯಾಂಕ್ ಆಫ್ ಬರೋಡ ಜಂಟಿ ಸಹಾಯಕ ವ್ಯವಸ್ಥಾಪಕ ಮಂಜಪ್ಪಕಂಪ್ಲಿ, ಜಿಲ್ಲಾ ನಿರ್ದೇಶಕ ಎನ್. ಜನಾರ್ಧನ್, ಲೆಕ್ಕ ಪರಿಶೋಧನಾ ವಿಭಾಗದ ಅಧಿಕಾರಿ ರವಿ ಹಿತ್ತಲಮನಿ, ರತ್ನಮೈಪಾಲ್, ಅಶ್ವತ್ಥ ಮುಂತಾದವರು ಪಾಲ್ಗೊಂಡಿದ್ದರು.