ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ಬಳಿ ಸುಮಾರು 2.50 ಕೋಟಿ ರೂ. ವೆಚ್ಚದಲ್ಲಿ ಬಾಲಕಿಯರ ನೂತನ ಕ್ರೀಡಾ ವಸತಿ ನಿಲಯ ನಿರ್ಮಾಣಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಸೋಮವಾರ ಭೂಮಿಪೂಜೆ ನೆರವೇರಿಸಿದರು.

ಮಡಿಕೇರಿ: ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ಬಳಿ ಸುಮಾರು 2.50 ಕೋಟಿ ರೂ. ವೆಚ್ಚದಲ್ಲಿ ಬಾಲಕಿಯರ ನೂತನ ಕ್ರೀಡಾ ವಸತಿ ನಿಲಯ ನಿರ್ಮಾಣಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಸೋಮವಾರ ಭೂಮಿಪೂಜೆ ನೆರೆವೇರಿಸಿದರು.

ಶಾಸಕ ಡಾ. ಮಂತರ್ ಗೌಡ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್. ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷೆ ಪಿ. ಕಲಾವತಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಟಿ.ಎಂ. ಧರ್ಮಜ ಉತ್ತಪ್ಪ, ಮಡಿಕೇರಿ‌ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್, ಜಿಪಂ ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಎಸ್‌ ಪಿ ಬಿಂದುಮಣಿ ಆರ್.ಎನ್., ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.