ಮಳವಳ್ಳಿ ಟಿಎಪಿಸಿಎಂಎಸ್ ಚುನಾವಣೆಗೆ ಒಗ್ಗಟ್ಟಿನಿಂದ ಕೆಲಸ ಮಾಡಿ: ಸಿ.ಪಿ.ರಾಜು

| Published : Sep 04 2025, 01:00 AM IST

ಮಳವಳ್ಳಿ ಟಿಎಪಿಸಿಎಂಎಸ್ ಚುನಾವಣೆಗೆ ಒಗ್ಗಟ್ಟಿನಿಂದ ಕೆಲಸ ಮಾಡಿ: ಸಿ.ಪಿ.ರಾಜು
Share this Article
  • FB
  • TW
  • Linkdin
  • Email

ಸಾರಾಂಶ

ಶಾಸಕ ಪಿ.ಎಂ.ನರೇಂದ್ರಸ್ವಾಮಿ ನೇತೃತ್ವದಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಯಾರೇ ಅಭ್ಯರ್ಥಿಗಳಾದರೂ ಅವರನ್ನು ಗೆಲ್ಲಿಸಲು ಮುಂದಾಗಬೇಕು. ಭಿನ್ನಾಭಿಪ್ರಾಯಗಳಿದ್ದರೆ ಕುಳಿತು ಬಗೆಹರಿಸಿಕೊಂಡು ಚುನಾವಣೆಯನ್ನು ಒಗ್ಗಟ್ಟಿನಿಂದ ಎದುರಿಸಬೇಕು. ಆಕಾಂಕ್ಷಿತರ ಪಟ್ಟಿಯನ್ನು ಶಾಸಕರಿಗೆ ನೀಡಿ ಅಂತಿಮ ಪಟ್ಟಿ ಪ್ರಕಟಿಸಲಾಗುವುದು.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿ ಪಕ್ಷ ಮತ್ತೊಮ್ಮೆ ಅಧಿಕಾರ ಹಿಡಿಯುಲು ಶ್ರಮಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು ತಿಳಿಸಿದರು.

ಪಟ್ಟಣದ ರೈತ ಸಮುದಾಯ ಭವನದಲ್ಲಿ ಸೆ.28ರಂದು ನಡೆಯಲಿರುವ ಟಿಎಪಿಸಿಎಂಎಸ್ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಶಾಸಕ ಪಿ.ಎಂ.ನರೇಂದ್ರಸ್ವಾಮಿ ನೇತೃತ್ವದಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಯಾರೇ ಅಭ್ಯರ್ಥಿಗಳಾದರೂ ಅವರನ್ನು ಗೆಲ್ಲಿಸಲು ಮುಂದಾಗಬೇಕೆಂದು ಹೇಳಿದರು.

ಭಿನ್ನಾಭಿಪ್ರಾಯಗಳಿದ್ದರೆ ಕುಳಿತು ಬಗೆಹರಿಸಿಕೊಂಡು ಚುನಾವಣೆಯನ್ನು ಒಗ್ಗಟ್ಟಿನಿಂದ ಎದುರಿಸಬೇಕು. ಆಕಾಂಕ್ಷಿತರ ಪಟ್ಟಿಯನ್ನು ಶಾಸಕರಿಗೆ ನೀಡಿ ಅಂತಿಮ ಪಟ್ಟಿ ಪ್ರಕಟಿಸಲಾಗುವುದು. ಟಿಎಪಿಸಿಎಂಎಸ್ ಅಧಿಕಾರ ಹಿಡಿಯುವುದೇ ನಮ್ಮ ಧ್ಯೇಯವಾಗಿರಬೇಕೆಂದು ಸಲಹೆ ನೀಡಿದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಚಿಕ್ಕಲಿಂಗಯ್ಯ ಮಾತನಾಡಿ, ಟಿಎಪಿಸಿಎಂಎಸ್ ಚುನಾವಣೆ ಕಾಂಗ್ರೆಸ್ ಪಕ್ಷಕ್ಕೆ ಪ್ರತಿಷ್ಠೆಯಾಗಿದೆ. ಅಭ್ಯರ್ಥಿಗಳನ್ನು ಗೆಲ್ಲಿಸಲು ಪ್ರತಿಯೊಬ್ಬರು ಶ್ರಮಿಸಬೇಕು. ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಶಾಸಕರ ಜೊತೆಗೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಕೈಜೋಡಿಸಬೇಕೆಂದರು.

ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಡಯ್ಯ, ಕಾರ್ಯಾಧ್ಯಕ್ಷ ಶಿವಮಾದೇಗೌಡ, ಮನ್ಮುಲ್ ನಿರ್ದೇಶಕರಾದ ಆರ್.ಎನ್ ವಿಶ್ವಾಸ್, ಕೃಷ್ಣೇಗೌಡ, ಟಿಎಪಿಸಿಎಂಎಸ್ ಅಧ್ಯಕ್ಷ ಟಿ.ಸಿ ಚೌಡಯ್ಯ, ಜಿಪಂ ಮಾಜಿ ಸದಸ್ಯ ರಾಮಚಂದ್ರಯ್ಯ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಮಾದೇಶ್, ತಾಪಂ ಮಾಜಿ ಅಧ್ಯಕ್ಷ ಪ್ರಕಾಶ್, ಯುವ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಶ್ರೀಕಾಂತ್, ಮುಖಂಡರಾದ ಕೆ.ಜೆ ದೇವರಾಜು, ಅಂಬರೀಷ್, ನರೇಂದ್ರ ಕೆ.ಎಂ ಪುಟ್ಟು ಸೇರಿದಂತೆ ತಾಲೂಕಿನ ಎಲ್ಲಾ ಹೋಬಳಿ ಮುಖಂಡರು ಇದ್ದರು.

ಇಂದು ಹಲವೆಡೆ ವಿದ್ಯುತ್ ವ್ಯತ್ಯಯ

ಮದ್ದೂರು: ತಾಲೂಕಿನ ಕೆಸ್ತೂರು ಸಮೀಪದ ದುಂಡನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಸೆ.4ರಂದು ಎರಡನೇ ಬಾರಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ವಿತರಣಾ ಕೇಂದ್ರ ವ್ಯಾಪ್ತಿಯ ಮಲ್ಲನಕುಪ್ಪೆ, ದುಂಡನಹಳ್ಳಿ, ಕೆಸ್ತೂರು, ತೊರೆ ಶೆಟ್ಟಿಹಳ್ಳಿ, ಆತಗೂರು, ಕದಲೂರು, ಅಡಗನಹಳ್ಳಿ, ಹೂತಗೆರೆ ಹಾಗೂ ಹೆಮ್ಮನಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸಂಪರ್ಕ ಸ್ಥಗಿತಗೊಳ್ಳಲಿದೆ ಎಂದು ಚೆಸ್ಕಾಂ ಗ್ರಾಮಾಂತರ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಜಿ.ಮೋಹನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.