ಚನ್ನಪಟ್ಟಣ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಂಘದ ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪತ್ರಕರ್ತರ ಭವನ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಸಂಘದ ರಾಜ್ಯ ಉಪಾಧ್ಯಕ್ಷ ಮತ್ತೀಕೆರೆ ಜಯರಾಮು ಸಲಹೆ ನೀಡಿದರು
ಚನ್ನಪಟ್ಟಣ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಂಘದ ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪತ್ರಕರ್ತರ ಭವನ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಸಂಘದ ರಾಜ್ಯ ಉಪಾಧ್ಯಕ್ಷ ಮತ್ತೀಕೆರೆ ಜಯರಾಮು ಸಲಹೆ ನೀಡಿದರು.
ನಗರದಲ್ಲಿ ಆಯೋಜಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಂಘದಲ್ಲಿ ಯಾವುದೇ ಸಣ್ಣಪುಟ್ಟ ಭಿನ್ನಾಭಿಪ್ರಾಯವಿದ್ದರೂ ಅದನ್ನು ಮರೆತು ಎಲ್ಲರೂ ಸಂಘದ ಅಭಿವೃದ್ಧಿಗೆ ಒಂದಾಗಿ ಕಾರ್ಯನಿರ್ವಹಿಸಬೇಕು. ಸುಸಜ್ಜಿತ ಪತ್ರಕರ್ತರ ಭವನ ನಿರ್ಮಾಣಕ್ಕೆ ಶೀಘ್ರ ಅಡಿಗಲ್ಲು ಹಾಕಬೇಕು ಎಂದರು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ವಿಭೂತಿಕೆರೆ ಶಿವಲಿಂಗಯ್ಯ ಮಾತನಾಡಿ, ಸಂಘಕ್ಕೆ ಆಯ್ಕೆಯಾಗಿರುವ ನೂತನ ಪದಾಧಿಕಾರಿಗಳು ಸಂಘದ ಬೆಳವಣಿಗೆಗೆ ಶ್ರಮಿಸಬೇಕು. ಸಂಘದ ನಿವೇಶನದಲ್ಲಿ ಭವನ ನಿರ್ಮಾಣ ಮಾಡುವ ಜವಾಬ್ದಾರಿಯನ್ನು ನೂತನ ಪದಾಧಿಕಾರಿಗಳು ತೆಗೆದುಕೊಂಡು ಗುದ್ದಲಿಪೂಜೆ ಮಾಡಬೇಕು ಎಂದರು.
ಹಿರಿಯ ಪತ್ರಕರ್ತ ಸು.ತ.ರಾಮೇಗೌಡ ಮಾತನಾಡಿ, ಸಂಘ-ಸಂಸ್ಥೆಗಳಲ್ಲಿ ಸಣ್ಣಪುಟ್ಟ ವ್ಯತ್ಯಾಸಗಳು ಇರುವುದು ಸಾಮಾನ್ಯ. ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ತಾಳ್ಮೆಯಿಂದ ತಾವು ವಹಿಸಿಕೊಂಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕು. ತಾಲೂಕು ಸಂಘದಲ್ಲಿರುವ ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆಕೊಂಡು ಸಂಘವನ್ನು ಮುನ್ನಡೆಸಿಕೊಂಡು ಹೋಗಬೇಕು ಎಂದು ತಿಳಿಸಿದರು.ಇದೇ ವೇಳೆ ನೂತನ ಅಧ್ಯಕ್ಷರಾಗಿ ಡಿ.ಎಂ.ಮಂಜುನಾಥ್, ಪ್ರಧಾನಕಾರ್ಯದರ್ಶಿಯಾಗಿ ಅಕ್ಕೂರು ರಮೇಶ್, ಖಜಾಂಚಿಯಾಗಿ ಮಹೇಶ್ ಕೆ., ಉಪಾಧ್ಯಕ್ಷರಾಗಿ ಅರ್ಕೇಶ್, ಬಿ.ಪಿ.ಚಿನ್ನಗಿರಿಗೌಡ, ಕಾರ್ಯದರ್ಶಿಗಳಾಗಿ ಚೇತನ್ ಚಕ್ಕೆರೆ, ವಿನ್ಸೆಂಟ್ ವಿಜಯ್ , ನಿರ್ದೇಶಕ ಕುಮಾರ್, ಪದಗ್ರಹಣ ಮಾಡಿದರು.
ರಾಜ್ಯ ಸಮಿತಿ ಸದಸ್ಯ ಶಿವಮಾದಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಕಾರ್ಯದರ್ಶಿ ಕೇಶವಮೂರ್ತಿ, ಜಿಲ್ಲಾ ನಿರ್ದೇಶಕರಾದ ಹುಚ್ಚಯ್ಯನದೊಡ್ಡಿ ರಮೇಶ್, ತಿಲಕ್‌ರಾಜ್, ಸಾಧು ರಮೇಶ್ ಇತರರಿದ್ದರು.ಪೊಟೋ೩೧ಸಿಪಿಟಿ೧:
ಚನ್ನಪಟ್ಟಣ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಿತು.