ನರೇಗಾ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಹೃದಯಾಘಾತದಿಂದ ಕಾರ್ಮಿಕ ಸಾವು

| Published : May 30 2024, 12:45 AM IST

ನರೇಗಾ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಹೃದಯಾಘಾತದಿಂದ ಕಾರ್ಮಿಕ ಸಾವು
Share this Article
  • FB
  • TW
  • Linkdin
  • Email

ಸಾರಾಂಶ

ಲಿಂಗಸುಗೂರು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಯಾದವ ಹಾಗೂ ಅಭಿವೃದ್ಧಿ ಅಧಿಕಾರಿ ಪ್ರವೀಣ ಕುಮಾರ ಪಾಟೀಲ್ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ

ಮುದಗಲ್: ರಾಷ್ಟ್ರೀಯ ಮಹಾತ್ಮಾಗಾಂಧೀಜಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ಹೃದಯಾಘಾತದಿಂದ ಕೃಷಿ ಕೂಲಿ ಕಾರ್ಮಿಕನೊಬ್ಬ ಸಾವನಪ್ಪಿರುವ ಘಟನೆ ಬುಧವಾರ ನಡೆದಿದೆ.

ನಾಗರಾಳ ಗ್ರಾಮದ ನಿವಾಸಿ ಕೃಷಿ ಕೂಲಿ ಕಾರ್ಮಿಕ ಮಹಾಂತೇಶ ಈಚನಾಳ (34) ಮೃತಪಟ್ಟ ದುರ್ದೈವಿಯಾಗಿದ್ದಾನೆ. ಮುದಗಲ್ ಸಮೀಪದ ನಾಗರಾಳ ಗ್ರಾಪಂ ವ್ಯಾಪ್ತಿಗೆ ಬರುವ ನಾಗರಾಳ ಗ್ರಾಮದ ಹತ್ತಿರದ ಕೃಷ್ಣಾ ನದಿ ದಂಡೆಯಲ್ಲಿ ಕೆರೆ ನಿರ್ಮಾಣಕ್ಕಾಗಿ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿ ಹಮ್ಮಿಕೊಳ್ಳಲಾಗಿತ್ತು. ಈ ಕೆಲಸಕ್ಕೆ ಮೃತ ಮಹಾಂತೇಶ ಈಚನಾಳ ಎನ್ನುವ ಯುವಕ ಕೂಡ ಕಾರ್ಮಿಕನಾಗಿ ನೋಂದಾಯಿತನಾಗಿದ್ದನು. ಕಾಮಗಾರಿ ಕೆಲಸ ನಿರ್ವಹಿಸುತ್ತಿರುವಾಗ ತೀವ್ರ ಹೃದಯಾಘಾತಕ್ಕೊಳಗಾಗಿದ್ದರಿಂದ ಎಚ್ಛೆತ್ತ ಉಳಿದ ಕಾರ್ಮಿಕರು ಲಿಂಗಸುಗೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಮಾರ್ಗ ಮಧ್ಯದಲ್ಲಿಯೇ ಕೊನೆಯುಸಿರೆಳೆದಿದ್ದಾನೆ.

ಈ ಮಾಹಿತಿ ಪಡೆದ ಲಿಂಗಸುಗೂರು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಯಾದವ ಹಾಗೂ ಅಭಿವೃದ್ಧಿ ಅಧಿಕಾರಿ ಪ್ರವೀಣ ಕುಮಾರ ಪಾಟೀಲ್ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನೋಂದಾಯಿತ ಕಾರ್ಮಿಕನಾಗಿರುವದರಿಂದ ಸರಕಾರದ ನಿಯಮಾನುಸಾರ ಬರುವ ಸೌಲಭ್ಯ ಕಲ್ಪಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಅಭಿವೃದ್ಧಿ ಅಧಿಕಾರಿ ಪ್ರವೀಣಕುಮಾರ ಪಾಟೀಲ್. ಯಮನೂರಪ್ಪ, ಗದ್ದೆಪ್ಪ ಸೇರಿ ಇತರರು ಇದ್ದರು.