ಮರದಿಂದ ಬಿದ್ದು ಕಾರ್ಮಿಕ ಸಾವು

| Published : Mar 26 2025, 01:36 AM IST

ಸಾರಾಂಶ

ಮರದಿಂದ ಬಿದ್ದು ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಇಲ್ಲಿಗೆ ಸಮೀಪದ ನೆಲಜಿ ಗ್ರಾಮದಲ್ಲಿ ನಡೆದಿದೆ.

ನಾಪೋಕ್ಲು: ಮರದಿಂದ ಬಿದ್ದು ಕಾರ್ಮಿಕನೊಬ್ಬ ಮೃತ ಪಟ್ಟ ಘಟನೆ ಇಲ್ಲಿಗೆ ಸಮೀಪದ ನೆಲಜಿ ಗ್ರಾಮದಲ್ಲಿ ನಡೆದಿದೆ.

ಅಸ್ಸಾಂ ಮೂಲದ ನಿವಾಸಿ ವಾಜಿದ್ ಅಲಿ (28) ಮೃತ ಪಟ್ಟ ದುರ್ದೈವಿ.

ಎಮ್ಮೆಮಾಡು ಕೂರುಳಿ ಗ್ರಾಮದಲ್ಲಿ ವಾಸವಾಗಿದ್ದ ವಾಜಿದ್ ಕೂಲಿ ಕೆಲಸಕ್ಕೆ ತೆರಳುತ್ತಿದ್ದು ಮಂಗಳವಾರ ನೆಲಜಿ ಗ್ರಾಮದ ಕಲ್ಲೇಂಗಡ ಸೋಮಣ್ಣ ಎಂಬುವರ ತೋಟದಲ್ಲಿ ಮರ ಕಪಾತು ಮಾಡುವ ಕೆಲಸಕ್ಕೆ ತೆರಳಿದ್ದಾಗ ಆಕಸ್ಮಿಕವಾಗಿ ಮರದಿಂದ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾನೆ.

ಮರದಿಂದ ಬಿದ್ದ ವಾಜಿದ್ ನನ್ನು ಮಾಲೀಕ ಸೋಮಣ್ಣ ಹಾಗೂ ಇತರು ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆ ತಂದಿದ್ದು ಆಸ್ಪತ್ರೆಯಲ್ಲಿ ಪರಿಶೀಲಿಸಿದ ವಾಜಿದ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.