ಸಾರಾಂಶ
ಯಕ್ಷಿಂತಿ ಗ್ರಾಮದಲ್ಲಿ ನರೇಗಾ ಕೂಲಿಕಾರ್ಮಿಕರಿಂದ ನಾಲಾ ಹೂಳೆತ್ತುವ ಕಾಮಗಾರಿಯ ಸ್ಥಳದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಕಾರ್ಮಿಕರ ದಿನಾಚರಣೆ
ಕನ್ನಡಪ್ರಭ ವಾರ್ತೆ ಯಾದಗಿರಿ
ಕೂಲಿ ಕಾರ್ಮಿಕರೇ ನಮ್ಮ ದೇಶದ ನಿಜವಾದ ಶ್ರಮಜೀವಿಗಳು. ಮೇ 7 ರಂದು ನಡೆಯುವ ಚುನಾವಣೆಯಲ್ಲಿ ಪ್ರತಿಯೊಬ್ಬರು ತಪ್ಪದೆ ಮತದಾನ ಮಾಡಬೇಕೆಂದು ವಡಗೇರಾ ತಾಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ ಸಂಗ್ವಾರ ಹೇಳಿದರು.ಜಿಲ್ಲೆಯ ವಡಗೇರಾ ತಾಲೂಕಿನ ಹಯ್ಯಾಳ ಬಿ. ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಯಕ್ಷಿಂತಿ ಗ್ರಾಮದಲ್ಲಿ ನರೇಗಾ ಕೂಲಿಕಾರ್ಮಿಕರಿಂದ ನಾಲಾ ಹೂಳೆತ್ತುವ ಕಾಮಗಾರಿಯ ಸ್ಥಳದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ನರೇಗಾ ಕೂಲಿಕಾರ್ಮಿಕರಿಗೆ ಸನ್ಮಾನಿಸಿ ಸಿಹಿ ತಿನಿಸಿ ಅವರು ಮಾತನಾಡಿದರು.
ನರೇಗಾ ಕೆಲಸಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬಂದಿರುವುದು ತುಂಬಾ ಸಂತೋಷ. ಹಳ್ಳಿಯಿಂದ ಪಟ್ಟಣಕ್ಕೆ ವಲಸೆ ಹೋಗಬಾರದೆಂಬ ಉದ್ದೇಶದಿಂದ ನರೇಗಾ ಯೋಜನೆಯಡಿ ಪ್ರತಿ ಕುಟುಂಬಕ್ಕೆ ನೂರು ದಿನಗಳವರೆಗೆ ಕೆಲಸ ನೀಡುತ್ತಿದ್ದೇವೆ. ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಂದು ನರೇಗಾ ಯೋಜನೆ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.ಸಿದ್ದಣ್ಣ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಸಿದ್ದವೀರಪ್ಪ, ಈರಣ್ಣ ಸಾಹುಕಾರ, ರಾಕೇಶ್ ಗೌಡ, ಅಯ್ಯಪ್ಪ ಹೊರಪೇಟ, ಹಣಮಂತ ಕಡಿಮನಿ, ನಿಂಗಣ್ಣ ದೊರೆ, ಗಿರೆಪ್ಪ ಹೊರಪೇಟ, ಹಣಮಂತ ದೊಡ್ಮನಿ ಇತರರಿದ್ದರು. ನಿಂಗಣ್ಣ ಕರಡಿ ನಿರೂಪಿಸಿ, ವಂದಿಸಿದರು.