ಕಾರ್ಮಿಕರು ಉಚಿತ ಆರೋಗ್ಯ ತಪಾಸಣಾ ಶಿಬಿರದ ಪ್ರಯೋಜನ ಪಡೆದುಕೊಳ್ಳಿ

| Published : Feb 07 2024, 01:54 AM IST

ಕಾರ್ಮಿಕರು ಉಚಿತ ಆರೋಗ್ಯ ತಪಾಸಣಾ ಶಿಬಿರದ ಪ್ರಯೋಜನ ಪಡೆದುಕೊಳ್ಳಿ
Share this Article
  • FB
  • TW
  • Linkdin
  • Email

ಸಾರಾಂಶ

ಕಾರ್ಮಿಕ ಇಲಾಖೆಯು ಕಟ್ಟಡ ಕಾರ್ಮಿಕರು, ಇತರೆ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಸರ್ಕಾರ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿದ್ದು, ಕಾರ್ಮಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ ಹೇಳಿದರು.

ಲಕ್ಷ್ಮೇಶ್ವರ: ಕಾರ್ಮಿಕ ಇಲಾಖೆಯು ಕಟ್ಟಡ ಕಾರ್ಮಿಕರು, ಇತರೆ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಸರ್ಕಾರ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿದ್ದು, ಕಾರ್ಮಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ ಹೇಳಿದರು. ಪಟ್ಟಣದ ಜ.ವೀರಗಂಗಾಧರ ಸಮುದಾಯ ಭವನದಲ್ಲಿ ಕಾರ್ಮಿಕ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸರ್ಕಾರ ಕಟ್ಟಡ ಕಾರ್ಮಿಕರು ಬಿಸಿಲು ಮಳೆ ಚಳಿ ಎನ್ನದೆ ತಮ್ಮ ಆರೋಗ್ಯ ಲೆಕ್ಕಿಸದೆ ಕೆಲಸದಲ್ಲಿ ನಿರತರಾಗಿರುತ್ತಾರೆ. ಇದು ಅವರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಹೆಚ್ಚಾಗಿರುತ್ತದೆ. ಕಾರ್ಮಿಕರ ಆರೋಗ್ಯದಲ್ಲಿ ಏರು ಪೇರಾಗುವ ಸಂಭವ ಹೆಚ್ಚಾಗಿರುತ್ತದೆ. ಆದ್ದರಿಂದ ಕಟ್ಟಡ ಮತ್ತು ಇತರೆ ನೊಂದಾಯಿತ ಕಾರ್ಮಿಕರಿಗಾಗಿ ಸರ್ಕಾರ ಆಯೋಜಿಸಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರದ ಸದುಪಯೋಗಪಡಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳುವ ಕಾರ್ಯ ಮಾಡಬೇಕು. ಸರ್ಕಾರ ಲಕ್ಷಾಂತರ ರು.ಗಳನ್ನು ವೆಚ್ಚ ಮಾಡಿ ನಿಯಮಿತವಾಗಿ ಆರೋಗ್ಯ ಶಿಬಿರಗಳನ್ನು ಏರ್ಪಡಿಸುತ್ತಿದ್ದು, ಅದರ ಸದುಪಯೋಗ ಪಡಿಸಿಕೊಳ್ಳುವ ಕಾರ್ಯವನ್ನು ಮಾಡಬೇಕು ಎಂದು ಹೇಳಿದರು.

ಈ ವೇಳೆ ಲಕ್ಷ್ಮೇಶ್ವರ ತಾಲೂಕು ಕಾರ್ಮಿಕ ಇಲಾಖೆಯ ಅಧಿಕಾರಿ ಉಮೇಶ ಹುಲ್ಲಣ್ಣವರ ಮಾತನಾಡಿ, ಕಾರ್ಮಿಕ ಇಲಾಖೆಯು ಕಟ್ಟಡ ಕಾರ್ಮಿಕರ ಆರೋಗ್ಯದ ಕಡೆಗೆ ಹೆಚ್ಚಿನ ಕಾಳಜಿ ವಹಿಸುವ ಮೂಲಕ ಅವರ ಆರೋಗ್ಯವು ಉತ್ತಮವಾಗಿರುವಂತೆ ನೋಡಿಕೊಳ್ಳುವ ದೃಷ್ಟಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜನೆ ಮಾಡುತ್ತಿದೆ. ಆದ್ದರಿಂದ ಕಟ್ಟಡ ಕಾರ್ಮಿಕರು ಹಾಗೂ ಇತರೆ ಕಾರ್ಮಿಕರು ಶಿಬಿರದ ಲಾಭ ಪಡೆದುಕೊಂಡು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವ ಕಾರ್ಯ ಮಾಡಬೇಕು ಎಂದು ಅವರು ಹೇಳಿದರು.

ಈ ವೇಳೆ ಮೌನೇಶ ಬಾಲೆಹೊಸೂರ, ದುರ್ಗಪ್ಪ ಬಿಂಜಡಗಿ, ಮನೋಹರ ಚಾವಡಿ, ಮಹ್ಮದ್ ಗೌಸ್ ಹುಲಗೂರ, ಯಲ್ಲಮ್ಮ ಹುಲಗೂರ ಇದ್ದರು.