ಮತಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವೆ: ಶಾಸಕ ನಾಯಕ

| Published : Jun 19 2024, 01:07 AM IST

ಮತಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವೆ: ಶಾಸಕ ನಾಯಕ
Share this Article
  • FB
  • TW
  • Linkdin
  • Email

ಸಾರಾಂಶ

ಕೊಡೇಕಲ್ ಸಮೀಪದ ಕೃಷ್ಣಾ ಭಾಗ್ಯ ಜಲ ನಿಗಮದ ನಿರೀಕ್ಷಣಾ ಮಂದಿರದಲ್ಲಿ ಸುರಪುರ ಮತಕ್ಷೇತ್ರದ ನೂತನ ಶಾಸಕ ರಾಜಾ ವೇಣುಗೋಪಾಲ ನಾಯಕ ಅವರನ್ನು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸನ್ಮಾನಿಸಿದರು.

ಕನ್ನಡಪ್ರಭ ವಾರ್ತೆ ಕೊಡೇಕಲ್

ಸಮೀಪದ ನಾರಾಯಣಪುರದ ಕೃಷ್ಣಾ ಭಾಗ್ಯ ಜಲ ನಿಗಮದ ನಿರೀಕ್ಷಣಾ ಮಂದಿರದಲ್ಲಿ (ಐಬಿ) ಸುರಪುರ ನೂತನ ಶಾಸಕ ರಾಜಾ ವೇಣುಗೋಪಾಲ ನಾಯಕ ಅವರನ್ನು ಸ್ಥಳೀಯರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ್ದ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಮಂಗಳವಾರ ಸನ್ಮಾನಿಸಿದರು.

ಈ ವೇಳೆ ಮಾತನಾಡಿದ ಶಾಸಕ ರಾಜಾ ವೇಣುಗೋಪಾಲ ನಾಯಕ ಅವರು, ಮತಕ್ಷೇತ್ರ ವ್ಯಾಪ್ತಿಯ ಹುಣಸಗಿ ಮತ್ತು ಸುರಪುರ ತಾಲೂಕುಗಳ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು. ನನ್ನನ್ನು ಬಹುಮತದಿಂದ ಗೆಲ್ಲಿಸಿ ಆಶೀರ್ವದಿಸುವಲ್ಲಿ ಶ್ರಮವಹಿಸಿದ ನಮ್ಮ ತಂದೆ ದಿ. ರಾಜಾ ವೆಂಕಟಪ್ಪ ನಾಯಕ ಅವರ ಅಪಾರ ಅಭಿಮಾನಿಗಳಿಗೆ, ಎಲ್ಲಾ ನನ್ನ ಕಾಂಗ್ರೆಸ್ ಪಕ್ಷದ ಮುಖಂಡರಿಗೆ, ಕರ‍್ಯಕರ್ತರಿಗೆ ಹೃದಯಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಪ್ರಮುಖರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್, ರಾಜಾ ಸಂತೋಷನಾಯಕ, ಸುರಪುರ, ಹುಣಸಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಗಣ್ಣ ಬಾಚಿಮಟ್ಟಿ, ಚಂದ್ರಶೇಖರ ದಂಡಿನ್, ಯಂಕೂಬ ಯಾದವ, ಮೇಲಿನಗಡ್ಡಿ, ಜಂಗಿನಗಡ್ಡಿ (ದೇವರಗಡ್ಡಿ), ಹನುಮನಗರ (ಐಬಿ ತಾಂಡಾ) ಹಾಗೂ ಜೊಗುಂಡಭಾವಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಕೆಬಿಜೆಎನ್‌ಎಲ್ ಅಧಿಕಾರಿಗಳು ಉಪಸ್ಥಿತರಿದ್ದರು.

ಸುರಪುರ ಡಿವೈಎಸ್‌ಪಿ ಜಾವೀದ್ ಇನಾಮದಾರ, ಪಿಐ ಆನಂದ ವಾಗ್ಮೋರೆ, ಹುಣಸಗಿ ಸಿಪಿಐ ಸಚೀನ್ ಚಲವಾದಿ ಅವರು ಸೇರಿದಂತೆ ವಿವಿಧ ಠಾಣೆಗಳ ಪಿಎಸ್‌ಐಗಳ ನೇತೃತ್ವದಲ್ಲಿ ಸೂಕ್ತ ಬಂದೋಬಸ್ತ್ ಒದಗಿಸಲಾಗಿತ್ತು.