ಸಾರಾಂಶ
ಎಲ್ಲರ ಸಹಕಾರದಿಂದ ಶ್ರೀ ಗುರು ರೇವಣಸಿದ್ದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ರಥೋತ್ಸವ
ಕನ್ನಡಪ್ರಭ ವಾರ್ತೆ, ತರೀಕೆರೆಹಿರಿಯರ ಮಾರ್ಗದರ್ಶನ ಪಡೆದು ಸಮಾಜದ ಅಭಿವೃದ್ಧಿ ಮತ್ತು ಏಳಿಗೆಗೆ ಶ್ರಮಿಸುತ್ತೇನೆ ಎಂದು ಪಟ್ಟಣದ ಶ್ರೀ ಗುರು ರೇವಣ ಸಿದ್ದ ರಾಮೇಶ್ವರಸ್ವಾಮಿ ಕುರುಬ ಸಮಾಜದ ನೂತನ ಅಧ್ಯಕ್ಷ ಟಿ.ಎಸ್.ರಮೇಶ್ ಹೇಳಿದ್ದಾರೆ.ಶುಕ್ರವಾರ ಶ್ರೀ ಗುರು ರೇವಣಸಿದ್ದೇಶ್ವರಸ್ವಾಮಿ ಕುರುಬ ಸಮಾಜದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಶ್ರೀ ಬೀರಲಿಂಗೇಶ್ವರ ಸಮುದಾಯ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಶ್ರೀ ಗುರು ರೇವಣ ಸಿದ್ದ ರಾಮೇಶ್ವರ ಸ್ವಾಮಿ ಆಶೀರ್ವಾದ ಮತ್ತು ಎಲ್ಲರ ಸಹಕಾರದಿಂದ ಪಟ್ಟಣದ ಶ್ರೀ ಗುರು ರೇವಣಸಿದ್ದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ರಥೋತ್ಸವ ನಡೆಸಲಾಗುವುದು. ಶ್ರೀ ಗುರು ಸಿದ್ದರಾಮೇಶ್ವರ ರುದ್ರಭೂಮಿಯಲ್ಲಿ ಇನ್ನೊಂದು ಚಿತಾಗಾರ ಸ್ಥಾಪಿಸಬೇಕು. ಎಲ್ಲ ಸಮಾಜದವರು ಭಾಗಿಯಾಗುವಂತೆ ಸಮಾನತೆ ಕಾಪಾಡಿಕೊಂಡು ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಹೇಳಿದರು.
ಶ್ರೀ ಗುರು ರೇವಣಸಿದ್ದೇಶ್ವರ ಕುರುಬ ಸಮಾಜದ ನಿಕಟಪೂರ್ವ ಅಧ್ಯಕ್ಷ ಡಿ.ವಿ.ಪದ್ಮರಾಜು ಮಾತನಾಡಿ ಸಮಾಜದ ಅಭಿವೃದ್ಧಿ ನಿರಂತರವಾಗಿ ನಡೆಯಬೇಕು, ಸಮಾಜದ ಎಲ್ಲ ಬಂಧುಗಳು ಸಮಾಜದ ಅಭಿವೃದ್ಧಿಗೆ ಸಹಕರಿಸಿದ್ದಾರೆ. ನೂತನ ಅಧ್ಯಕ್ಷ ಟಿ.ಎಸ್.ರಮೇಶ್ ಸಮಾಜದ ಅಭಿವೃದ್ಧಿ ಕಾರ್ಯ ಮುಂದುವರಿಸಲಿದ್ದು ಅವರಿಗೆ ತಾವು ಸಹಕರಿಸುವುದಾಗಿ ಹೇಳಿದರು.ಟಿ.ಎನ್. ಆನಂದ್ ಮಾತನಾಡಿ ಶ್ರೀ ಗುರು ರೇವಣಸಿದ್ದೇಶ್ವರ ಸ್ವಾಮಿ ಕುರುಬ ಸಮಾಜದ ನಿಕಟಪೂರ್ವ ಅಧ್ಯಕ್ಷ ಡಿ.ವಿ.ಪದ್ಮರಾಜು ಅವರು ಸುಮಾರು 9 ವರ್ಷಗಳಲ್ಲಿ ಸ್ಮಶಾನ, ದೇವಸ್ಥಾನ ಅಭಿವೃದ್ದಿ ಇತ್ಯಾದಿ ಅನೇಕ ಅಭಿವೃದ್ದಿ ಕಾರ್ಯಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ ಎಂದು ತಿಳಿಸಿದರು.ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ್ ಮಾತನಾಡಿ 10 ವರ್ಷಗಳಲ್ಲಿ ಅನೇಕ ಬದಲಾವಣೆಗಳಾಗಿದೆ. ಸಮಾಜದ ನಿಕಟಪೂರ್ವ ಅಧ್ಯಕ್ಷ ಡಿ.ವಿ.ಪದ್ಮರಾಜು ಅನೇಕ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸಿದ್ದಾರೆ. ಎಲ್ಲರನ್ನೂ ಒಗ್ಗೂಡಿಸಿ ಕೊಂಡು ಹೋಗಬೇಕು ಎಂದು ಹೇಳಿದರು.ಶ್ರೀ ಗುರು ರೇವಣಸಿದ್ದೇಶ್ವರ ಪ್ರಾ.ಪ.ಸಹಕಾರ ಸಂಘದ ಮಾಜಿ ಅಧ್ಯಕ್ಷ ಸುರೇಶ್ ಮಾತನಾಡಿ ಶ್ರೀ ಗುರು ರೇವಣ ಸಿದ್ದೇಶ್ವರಸ್ವಾಮಿ ದೇವಸ್ಥಾನದಲ್ಲಿ ರಥೋತ್ಸವ ಏರ್ಪಡಿಸಬೇಕು ಎಂದು ತಿಳಿಸಿದರು.ಪುರಸಭೆ ಸದಸ್ಯ ಚೇತನ್, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಲೋಕೇಶ್, ರವಿಕುಮಾರ್ ಮತ್ತಿತರರು ಮಾತನಾಡಿದರು.ಪುರಸಭೆ ಸದಸ್ಯ ಟಿ.ಜಿ.ಶಶಾಂಕ, ಮುಖಂಡರಾದ ಗೋವಿಂದಪ್ಪ, ವಿಜಯಕುಮಾರ್, ಶ್ರೀ ಗುರು ರೇವಣ ಸಿದ್ದೇಶ್ವರ ಕುರುಬ ಸಮಾಜದ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.--6ಕೆಟಿಆರ್.ಕೆ.22ಃತರೀಕೆರೆಯಲ್ಲಿ ಶ್ರೀ ಗುರು ರೇವಣಸಿದ್ದೇಶ್ವರ ಕುರುಬ ಸಮಾಜದ ನೂತನ ಅಧ್ಯಕ್ಷ ಟಿ.ಎಸ್.ರಮೇಶ್ ಸುದ್ದಿಗೋಷ್ಠಿಯಲ್ಲಿ
ಮಾತನಾಡಿದರು. ಶ್ರೀ ಗುರು ರೇವಣಸಿದ್ದೇಶ್ವರ ಕುರುಬ ಸಮಾಜದ ನಿಕಟಪೂರ್ವ ಅಧ್ಯಕ್ಷ ಡಿ.ವಿ.ಪದ್ಮರಾಜು, ಪುರಸಭೆ ಸದಸ್ಯ ಚೇತನ್, ಟಿ.ಎನ್.ಆನಂದ್, ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ್ ಮತ್ತಿತರರು ಇದ್ದರು.