ಬಿಡದಿಯಲ್ಲಿ 3.32 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ

| Published : Mar 27 2025, 01:02 AM IST

ಬಿಡದಿಯಲ್ಲಿ 3.32 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ
Share this Article
  • FB
  • TW
  • Linkdin
  • Email

ಸಾರಾಂಶ

ಬಿಡದಿ ಪುರಸಭೆ ವ್ಯಾಪ್ತಿಯಲ್ಲಿ ಸುಮಾರು 3.32 ಕೋಟಿ ರು. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಾ.27ರಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಪುರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸಿ.ಉಮೇಶ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ರಾಮನಗರ

ಬಿಡದಿ ಪುರಸಭೆ ವ್ಯಾಪ್ತಿಯಲ್ಲಿ ಸುಮಾರು 3.32 ಕೋಟಿ ರು. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಾ.27ರಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಪುರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸಿ.ಉಮೇಶ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಡದಿ ಪುರಸಭೆಯ 1-14ನೇ ವಾರ್ಡುಗಳಲ್ಲಿ ರಸ್ತೆ, ಚರಂಡಿ, ಶೌಚಾಲಯ, ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಕಾಮಗಾರಿಗಳಿಗೆ ಶಾಸಕರು ಭೂಮಿಪೂಜೆ ನೆರವೇರಿಸಲಿದ್ದಾರೆ.

ಪುರಸಭೆಯ ಎಸ್‌ಎಫ್‌ಸಿ ಅನುದಾನ, ಸಿಎಸ್‌ಆರ್ ಅನುದಾನ ಸೇರಿದಂತೆ ವಿವಿಧ ಶೀರ್ಷಿಕೆಗಳ ಅನುದಾನದಡಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಸಿಸಿ ಚರಂಡಿ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿಗಳು, ಶೌಚಾಲಯ ಮತ್ತು ಕಾಂಪೌಂಡ್ ನಿರ್ಮಾಣ, ಕೆಂಚನಕುಪ್ಪೆ ಗೇಟ್ ಹತ್ತಿರ ರಸ್ತೆ ಡಾಂಬರೀಕರಣ, ವಾಟರ್ ಫಿಲ್ಟರ್, ಆವರಗೆರೆ ಅಂಗನವಾಡಿ ಕೇಂದ್ರ ಉದ್ಘಾಟನೆ ಸೇರಿದಂತೆ 18 ವಿವಿಧ ಅಭಿವೃದ್ಧಿ ಕಾಮಗಾರಿಗಳು ಲೋಕಾರ್ಪಣೆಯಾಗಲಿವೆ.

ಸಿಲ್ಕ್ ಫಾರಂನಲ್ಲಿ ಇ-ಖಾತಾ ಆಂದೋಲನಾ ಕಾರ್ಯಕ್ರಮ ಮತ್ತು 2024-25ನೇ ಸಾಲಿನ ಪುರಸಭಾ ನಿಧಿ ಮತ್ತು ಎಸ್‌ಎಫ್‌ಸಿ ಮುಕ್ತನಿಧಿಯಡಿ ಪರಿಶಿಷ್ಟ ಪಂಗಡದ ಮಕ್ಕಳಿಗೆ ಹಾಗೂ ಅಂಗವಿಕಲರಿಗೆ ಜೀವ ವಿಮಾ ಬಾಂಡ್‌ಗಳನ್ನು ವಿತರಣೆ ಹಾಗೂ ಘನತ್ಯಾಜ್ಯ ವಾಹನಗಳಿಗೆ ಪೂಜಾ ಕಾರ್ಯ ನೆರವೇರಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷ ಹರಿಪ್ರಸಾದ್, ಉಪಾಧ್ಯಕ್ಷೆ ಮಂಜುಳಾ ಗೋವಿಂದಯ್ಯ, ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಜಿ.ಲೋಹಿತ್ ಕುಮಾರ್, ಆಯುಕ್ತ ಕೆ.ಜಿ.ರಮೇಶ್ ಹಾಗೂ ಎಲ್ಲ ಸದಸ್ಯರು, ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಉಮೇಶ್ ತಿಳಿಸಿದರು.------------

ಪಟ್ಟಣದ ವಾರ್ಡುಗಳಲ್ಲಿ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಕಾಮಗಾರಿಗಳಿಗೆ ಚಾಲನೆ ನೀಡಿ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಶಾಸಕರು ಶ್ರಮಿಸುತ್ತಿದ್ದಾರೆ. ಶಾಸಕರಾಗಿ ಆಯ್ಕೆಯಾದ ಮೇಲೆ ಬಾಲಕೃಷ್ಣ ಅವರು ಜನಪರ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು ನೀಡುತ್ತಿದ್ದು, ಪುರಸಭೆ ವ್ಯಾಪ್ತಿಯ ಎಲ್ಲಾ ವಾರ್ಡುಗಳಿಗೂ ಆದ್ಯತೆ ನೀಡಿ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡುತ್ತಿದ್ದಾರೆ. ಇದು ಅವರ ಜನಪರ ಆಡಳಿತಕ್ಕೆ ಸಾಕ್ಷಿ.

-ಸಿ.ಉಮೇಶ್, ಮಾಜಿ ಅಧ್ಯಕ್ಷ, ಪುರಸಭೆ ಸ್ಥಾಯಿ ಸಮಿತಿ