ಕಾರ್ಯಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಸುಬ್ರಹ್ಮಣ್ಯ ಶರ್ಮಾ ರಾಷ್ಟ್ರಧ್ವಜ ಹಾಗೂ ರಾಷ್ಟ್ರಗೀತೆಯ ಬಗ್ಗೆ ಮಾಹಿತಿ ನೀಡುವ ಈ ಕಾರ್ಯಗಾರ ಅತ್ಯಮೂಲ್ಯವಾಗಿದ್ದು, ಪ್ರತಿಯೊಬ್ಬರೂ ಸಹ ರಾಷ್ಟ್ರಧ್ವಜ ರಾಷ್ಟ್ರಗೀತೆಯ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡಿರಬೇಕು. ಭಾರತ ಸೇವಾದಳದವರು ಅತ್ಯುತ್ತಮ ಕಾರ್ಯಕ್ರಮವನ್ನು ನಡೆಸುತ್ತಿದ್ದಾರೆ ಪ್ರತಿ ವರ್ಷವೂ ಸಹ ನಮಗೆ ಮಾಹಿತಿ ನೀಡುತ್ತಿದ್ದಾರೆ ಎಂದು ಆಶಯವನ್ನು ವ್ಯಕ್ತಪಡಿಸಿದರು. ಭಾರತ ಸೇವಾದಳದ ಎಲ್ಲಾ ಕಾರ್ಯಕ್ರಮಗಳಿಗೆ ತಾಲೂಕು ಪಂಚಾಯಿತಿಯಿಂದ ಸಂಪೂರ್ಣ ಸಹಕಾರವಿದೆ ಎಂದು ಸಹ ತಿಳಿಸಿದರು.

ಕನ್ನಡಪ್ರಭ ವಾರ್ತೆ ಆಲೂರು

ಜಿಲ್ಲಾ ಪಂಚಾಯ್ತಿ ಮತ್ತು ಭಾರತ ಸೇವಾದಳ ತಾಲೂಕು ಸಮಿತಿ ಸಹಯೋಗದಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯ ಮಾಹಿತಿಯ ಕಾರ್ಯಾಗಾರ ಆಯೋಜಿಸಲಾಗಿತ್ತು.

ಕಾರ್ಯಾಗಾರದಲ್ಲಿ ರಾಷ್ಟ್ರಧ್ವಜ ನೀತಿ ಸಂಹಿತೆಯ ಪ್ರಕಾರ ರಾಷ್ಟ್ರ ಧ್ವಜ ವಂದನೆ ಮತ್ತು ಧ್ವಜ ಅವರೋಹಣ ಕ್ರಮದ ಸಂಪೂರ್ಣ ಮಾಹಿತಿ ಮತ್ತು ಪ್ರಾತ್ಯಕ್ಷಿಕೆಯನ್ನು ತಿಳಿಸುವುದರೊಂದಿಗೆ ಪ್ರತಿನಿತ್ಯವೂ ಗ್ರಾಮ ಪಂಚಾಯಿತಿನಲ್ಲಿ ರಾಷ್ಟ್ರ ಧ್ವಜ ಹಾರಿಸುವ ಕ್ರಮದ ಬಗ್ಗೆ ಮತ್ತು ಹಳೆಯ ರಾಷ್ಟ್ರ ಧ್ವಜಗಳ ಸಂಸ್ಕಾರಗಳ ಬಗ್ಗೆ ಭಾರತ ಸೇವಾದಳದ ವಲಯ ಸಂಘಟಕರಾದ ರಾಣಿ ವಿ ಅವರು ಸೂಕ್ತ ಮಾಹಿತಿ ನೀಡಿದರು. ವಿವರಣೆಯೊಂದಿಗೆ ತಿಳಿಸಿಕೊಡಲಾಯಿತು. ಕಾರ್ಯಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಸುಬ್ರಹ್ಮಣ್ಯ ಶರ್ಮಾ ರಾಷ್ಟ್ರಧ್ವಜ ಹಾಗೂ ರಾಷ್ಟ್ರಗೀತೆಯ ಬಗ್ಗೆ ಮಾಹಿತಿ ನೀಡುವ ಈ ಕಾರ್ಯಗಾರ ಅತ್ಯಮೂಲ್ಯವಾಗಿದ್ದು, ಪ್ರತಿಯೊಬ್ಬರೂ ಸಹ ರಾಷ್ಟ್ರಧ್ವಜ ರಾಷ್ಟ್ರಗೀತೆಯ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡಿರಬೇಕು. ಭಾರತ ಸೇವಾದಳದವರು ಅತ್ಯುತ್ತಮ ಕಾರ್ಯಕ್ರಮವನ್ನು ನಡೆಸುತ್ತಿದ್ದಾರೆ ಪ್ರತಿ ವರ್ಷವೂ ಸಹ ನಮಗೆ ಮಾಹಿತಿ ನೀಡುತ್ತಿದ್ದಾರೆ ಎಂದು ಆಶಯವನ್ನು ವ್ಯಕ್ತಪಡಿಸಿದರು. ಭಾರತ ಸೇವಾದಳದ ಎಲ್ಲಾ ಕಾರ್ಯಕ್ರಮಗಳಿಗೆ ತಾಲೂಕು ಪಂಚಾಯಿತಿಯಿಂದ ಸಂಪೂರ್ಣ ಸಹಕಾರವಿದೆ ಎಂದು ಸಹ ತಿಳಿಸಿದರು.

ಇದೇ ಸಂದರ್ಭದಲ್ಲಿ ಭಾರತ ಸೇವಾದಳದ ತಾಲೂಕು ಅಧ್ಯಕ್ಷ ಬಾಲಕೃಷ್ಣ ಅವರು ಎಲ್ಲರಿಗೂ ವಂದನೆಯನ್ನು ತಿಳಿಸಿದರು. ಮಗ್ಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಎಲ್ಲರನ್ನೂ ಸ್ವಾಗತಿಸಿದರು .ಇದೇ ಸಂದರ್ಭದಲ್ಲಿ ಮಂಜುಳಾ ಮತ್ತು ಎಲ್ಲಾ ಪಂಚಾಯಿತಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಪ್ರತಿನಿತ್ಯವೂ ಗ್ರಾಮ ಪಂಚಾಯಿತಿನಲ್ಲಿ ಧ್ವಜ ನಿರ್ವಹಣೆ ಮಾಡುವ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.