ಬೆಂಗಳೂರು : ಕಾವೇರಿ ನದಿ ರಕ್ಷಣಾ ಸಮಿತಿಯ ವತಿಯಿಂದ ಏ.5ರಂದು ನೀರಿನ ಹಕ್ಕಿಗಾಗಿ ಕಾರ್ಯಾಗಾರ

| N/A | Published : Mar 29 2025, 12:33 AM IST / Updated: Mar 29 2025, 01:25 PM IST

ಬೆಂಗಳೂರು : ಕಾವೇರಿ ನದಿ ರಕ್ಷಣಾ ಸಮಿತಿಯ ವತಿಯಿಂದ ಏ.5ರಂದು ನೀರಿನ ಹಕ್ಕಿಗಾಗಿ ಕಾರ್ಯಾಗಾರ
Share this Article
  • FB
  • TW
  • Linkdin
  • Email

ಸಾರಾಂಶ

ಕಾವೇರಿ ನದಿ ರಕ್ಷಣಾ ಸಮಿತಿಯ ವತಿಯಿಂದ ಬೆಂಗಳೂರಿನಲ್ಲಿ ಏಪ್ರಿಲ್ 5ರಂದು ನ್ಯಾಯಯುತ ನೀರಿನ ಹಕ್ಕಿಗಾಗಿ ಒಂದು ದಿನದ ಕಾರ್ಯಾಗಾರ ಹಾಗೂ ವಿಚಾರ ಸಂಕಿರಣ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಕೆ ಟಿ ಚಂದ್ರು ತಿಳಿಸಿದರು.

 ಕುಶಾಲನಗರ : ಕಾವೇರಿ ನದಿ ರಕ್ಷಣಾ ಸಮಿತಿಯ ವತಿಯಿಂದ ಬೆಂಗಳೂರಿನಲ್ಲಿ ಏಪ್ರಿಲ್ 5ರಂದು ನ್ಯಾಯಯುತ ನೀರಿನ ಹಕ್ಕಿಗಾಗಿ ಒಂದು ದಿನದ ಕಾರ್ಯಾಗಾರ ಹಾಗೂ ವಿಚಾರ ಸಂಕಿರಣ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಕೆ ಟಿ ಚಂದ್ರು ತಿಳಿಸಿದರು.

ಅವರು ಕುಶಾಲನಗರದ ಗೌಡ ಯುವಕ ಸಂಘ ಸಭಾಂಗಣದಲ್ಲಿ ಕಾರ್ಯಕ್ರಮದ ಆಹ್ವಾನ ಪತ್ರಿಕೆ ವಿತರಿಸಿ ಮಾತನಾಡಿ, ಏ.5 ರಂದು ಬೆಂಗಳೂರಿನ ಕೆ ಆರ್ ರಸ್ತೆಯ ಕುವೆಂಪು ಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಾಗಾರವನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಶ್ರೀ ಡಾ ನಿರ್ಮಲಾನಂದ ಮಹಾ ಸ್ವಾಮೀಜಿ ಉದ್ಘಾಟಿಸಲಿದ್ದಾರೆ ಎಂದರು.

ಸಿದ್ದಗಂಗಾ ಮಹಾಸಂಸ್ಥಾನದ ಮಠಾಧೀಶ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸುವುದರೊಂದಿಗೆ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಸಮಿತಿಯ ಉಪಾಧ್ಯಕ್ಷ ಯಶೋಧ ರಾಜಣ್ಣ ಪ್ರಾಸ್ತಾವಿಕವಾಗಿ ಮಾತನಾಡಿ ಸಮಿತಿಯ ಧ್ಯೇಯೋದ್ದೇಶಗಳ ಬಗ್ಗೆ ಮಾಹಿತಿ ಒದಗಿಸಿದರು.

ಕಾವೇರಿ ನದಿ ಸ್ವಚ್ಛತಾ ಆಂದೋಲನದ ರಾಜ್ಯ ಸಂಚಾಲಕ ಎಂ ಎನ್ ಚಂದ್ರಮೋಹನ್ ಕಾವೇರಿ ನದಿ ನೀರಿನ ಹಕ್ಕಿಗಾಗಿ ಹೋರಾಡುವುದರ ಜೊತೆಗೆ ದಕ್ಷಿಣ ಭಾರತದ ಜೀವನಾಡಿಯಾದ ಕಾವೇರಿಯನ್ನು ಸಂರಕ್ಷಣೆ ಮಾಡುವ ಯೋಜನೆಗಳನ್ನು ರೂಪಿಸುವ ನಿಟ್ಟಿನಲ್ಲಿ ಸಮಿತಿ ಮೂಲಕ ಸರ್ಕಾರಗಳ ಗಮನ ಸೆಳೆಯುವಂತೆ ಮನವಿ ಮಾಡಿದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಕೆ ಪಿ ಚಂದ್ರಕಲಾ ಮಾತನಾಡಿ, ಹಿಂದಿನ ಮುಖ್ಯಮಂತ್ರಿ ಎಸ್‌ ಎಂ ಕೃಷ್ಣ ಅವಧಿಯಲ್ಲಿ ತಲಕಾವೇರಿ ಮೂಲ ಕಾವೇರಿಯ ಉಳಿವು, ಅಭಿವೃದ್ಧಿಗಾಗಿ ಶ್ರಮಿಸಿದ ಬಗ್ಗೆ ಮಾಹಿತಿ ಒದಗಿಸಿದರು.

ಕಾವೇರಿ ನದಿ ರಕ್ಷಣಾ ಸಮಿತಿಯ ಕಾರ್ಯದರ್ಶಿ ಎಚ್ ಕೆ ರಾಮು ಮಾತನಾಡಿ, ರಾಜ್ಯದ ಎಂಟು ಜಿಲ್ಲೆಗಳಿಂದ ಈ ಕಾರ್ಯಾಗಾರದಲ್ಲಿ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.

ಗೌಡ ಯುವಕ ಸಂಘದ ಪ್ರಮುಖರಾದ ಎನ್ ಈ ಶಿವಪ್ರಸಾದ್ ಮತ್ತು ಯುವಕ ಸಂಘದ ನಿರ್ದೇಶಕರು, ಗೌಡ ಸಮಾಜದ ವಿವಿಧ ಘಟಕಗಳ ಪ್ರಮುಖರು, ಸದಸ್ಯರು ಇದ್ದರು.