ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಕುಂದಾಪುರ ಇದರ ಎಂಬಿಎ ಮತ್ತು ಎಂಸಿಎ ವಿಭಾಗ ವತಿಯಿಂದ ‘ಆರ್ಟಿಫಿಶಿಯಲ್ ಇಂಟಲಿಜೆನ್ಸ್ : ಬ್ರಿಡ್ಜ್ಯಿಂಗ್ ಮ್ಯಾನೇಜ್ ಮೆಂಟ್ ಆ್ಯಂಡ್ ಕಂಪ್ಯೂಟರ್ ಅಪ್ಲಿಕೇಶನ್’ ಎಂಬ ವಿಷಯ ಕುರಿತ ಕಾರ್ಯಾಗಾರವನ್ನು ಜು.10ರಂದು ಆಯೋಜಿಸಲಾಯಿತು.

ಕನ್ನಡಪ್ರಭ ವಾರ್ತೆ ಕುಂದಾಪುರ

ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಕುಂದಾಪುರ ಇದರ ಎಂಬಿಎ ಮತ್ತು ಎಂಸಿಎ ವಿಭಾಗ ವತಿಯಿಂದ ‘ಆರ್ಟಿಫಿಶಿಯಲ್ ಇಂಟಲಿಜೆನ್ಸ್ : ಬ್ರಿಡ್ಜ್ಯಿಂಗ್ ಮ್ಯಾನೇಜ್ ಮೆಂಟ್ ಆ್ಯಂಡ್ ಕಂಪ್ಯೂಟರ್ ಅಪ್ಲಿಕೇಶನ್’ ಎಂಬ ವಿಷಯ ಕುರಿತ ಕಾರ್ಯಾಗಾರವನ್ನು ಜು.10ರಂದು ಆಯೋಜಿಸಲಾಯಿತು. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಸಂಸ್ಥೆಯ ಪ್ರಾಧ್ಯಾಪಕರು ಹಾಗೂ ಸಂಶೋಧನಾ ಡೀನ್ ಡಾ. ವಿನೋದ್ ಕುಮಾರ್ ಭಾಗವಹಿಸಿ, ಕೃತಕ ಬುದ್ದಿಮತ್ತೆ (ಆರ್ಟಿಫಿಶಿಯಲ್ ಇಂಟಲಿಜೆನ್ಸ್-ಎಐ) ಅಗತ್ಯತೆ, ನಿರ್ವಹಣಾ ಕ್ಷೇತ್ರ ಹಾಗೂ ಕಂಪ್ಯೂಟರ್ ಅನ್ವಯಿಕೆಗಳಲ್ಲಿ ಅದರ ಬಳಕೆ, ಉದ್ಯೋಗಾವಕಾಶಗಳು ಮತ್ತು ಭವಿಷ್ಯದ ತಂತ್ರಜ್ಞಾನಗಳ ಕುರಿತು ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ ನೀಡಿದರು ಮತ್ತು ಎಐ ತಂತ್ರಜ್ಞಾನವು ವಿವಿಧ ಕ್ಷೇತ್ರಗಳಲ್ಲಿ ಉಂಟು ಮಾಡುತ್ತಿರುವ ಪರಿವರ್ತನೆಗಳನ್ನು ಉದಾಹರಣೆಗಳೊಂದಿಗೆ ವಿವರಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ರಾಮಕೃಷ್ಣ ಹೆಗಡೆ ವಹಿಸಿದ್ದರು. ವೇದಿಕೆಯಲ್ಲಿ ಎಂಬಿಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರಾ ಪೂಜಾರಿ ಹಾಗೂ ಎಂಸಿಎ ವಿಭಾಗದ ಮುಖ್ಯಸ್ಥೆ ಡಾ. ನಂದಿನಿ ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ಎಂಬಿಎ ಹಾಗೂ ಎಂಸಿಎ ವಿಭಾಗದ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು. ಎಂಬಿಎ ವಿದ್ಯಾರ್ಥಿನಿ ರಕ್ಷಿತಾ ಆರ್. ಕಾರ್ಯಕ್ರಮ ನಿರೂಪಿಸಿದರು.