ಸಾರಾಂಶ
ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ವತಿಯಿಂದ ಕೇಂದ್ರ ಬಜೆಟ್-೨೦೨೫-೨೬ ಕುರಿತು ಒಂದು ದಿನದ ಕಾರ್ಯಾಗಾರವನ್ನು ಶುಕ್ರವಾರ ಹಮ್ಮಿಕೊಳ್ಳಲಾಯಿತು. ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ವಿಜಯಲಕ್ಷ್ಮೀ ಎನ್.ಎಸ್., ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.
ಕನ್ನಡಪ್ರಭ ವಾರ್ತೆ ಪುತ್ತೂರು
ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ವತಿಯಿಂದ ಕೇಂದ್ರ ಬಜೆಟ್-೨೦೨೫-೨೬ ಕುರಿತು ಒಂದು ದಿನದ ಕಾರ್ಯಾಗಾರವನ್ನು ಶುಕ್ರವಾರ ಹಮ್ಮಿಕೊಳ್ಳಲಾಯಿತು.ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ವಿಜಯಲಕ್ಷ್ಮೀ ಎನ್.ಎಸ್., ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಕೇಂದ್ರ ಸರ್ಕಾರದ ಆದಾಯ, ವೆಚ್ಚ, ಕೊರತೆ, ವಿವಿಧ ಯೋಜನೆಗಳ ಕುರಿತು ವಿಚಾರ ಮಂಡನೆ ಮಾಡಿದರು. ಈ ಸಂದರ್ಭ ವಿದ್ಯಾರ್ಥಿಗಳೊಂದಿಗೆ ಸಂವಾದ, ಚರ್ಚೆ ನಡೆಸಲಾಯಿತು.
ಕಾಲೇಜಿನ ಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಕೆ. ಅಧ್ಯಕ್ಷತೆ ವಹಿಸಿ ಮಾತನಾಡಿ, ಬಜೆಟ್ ಎಂಬುದು ಅತ್ಯಂತ ಪ್ರಮುಖವಾದ ವಿಷಯ. ಎಲ್ಲರೂ ಇದರ ಕುರಿತಾದ ತಿಳುವಳಿಕೆ ಹೆಚ್ಚಿಸಿಕೊಳ್ಳಬೇಕು ಎಂದು ತಿಳಿಸಿದರು.ಬಳಿಕ ೮ ಜನ ವಿದ್ಯಾರ್ಥಿಗಳು ೪ ತಂಡಗಳಲ್ಲಿ ಬಜೆಟ್ ಮಂಡನೆ ಮಾಡಿದರು. ನಂತರ ಬಜೆಟ್ ಕುರಿತು ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕ್ಕೊಳ್ಳಲಾಯಿತು.ಕಾಲೇಜಿನ ಅರ್ಥಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಡಾ. ತಿಮ್ಮಯ್ಯ ಎಲ್.ಎಂ. ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ವಿದ್ಯಾರ್ಥಿನಿ ಮಮತಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಚರಣ್ ವಂದಿಸಿದರು.