ಬಂಟಕಲ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ‘ಉದ್ಯಮ ಶೀಲತೆ ಜಾಗೃತಿ’ ಕಾರ್ಯಾಗಾರ

| Published : Sep 01 2024, 01:53 AM IST

ಸಾರಾಂಶ

ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆಯ ಬಗ್ಗೆ ಅರಿವು ಮೂಡಿಸಲು ‘ಉದ್ಯಮ ಶೀಲತೆ ಜಾಗೃತಿ ಕಾರ್ಯಕ್ರಮ’ ನಡೆಯಿತು.

ಕನ್ನಡಪ್ರಭ ವಾರ್ತೆ ಶಿರ್ವ

ಇಲ್ಲಿನ ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಾಣಿಜ್ಯೋದ್ಯಮ ಅಭಿವೃದ್ಧಿ ಘಟಕವು ಮಂಗಳೂರಿನ ಎಂ.ಎಸ್.ಎಂ.ಇ. ಅಭಿವೃದ್ಧಿ ಸಂಸ್ಥೆಯ ಸಹಯೋಗದೊಂದಿಗೆ ಶುಕ್ರವಾರ ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆಯ ಬಗ್ಗೆ ಅರಿವು ಮೂಡಿಸಲು ‘ಉದ್ಯಮ ಶೀಲತೆ ಜಾಗೃತಿ ಕಾರ್ಯಕ್ರಮ’ವನ್ನು ಆಯೋಜಿಸಿತ್ತು.ಉಡುಪಿ ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘ ಅಧ್ಯಕ್ಷ ಹರೀಶ್ ಕುಂದರ್ ಕಾರ್ಯಕ್ರಮ ಉದ್ಘಾಟಿಸಿ, ಆರ್ಥಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಉದ್ಯಮಶೀಲತೆಯ ಮಹತ್ವದ ಬಗ್ಗೆ ತಿಳಿಸಿದರು. ವಾಣಿಜ್ಯೋದ್ಯಮವು ಹೇಗೆ ಉದ್ಯೋಗವನ್ನು ಸೃಷ್ಟಿಸುತ್ತದೆ ಮತ್ತು ಆರ್ಥಿಕ ಬೆಳವಣಿಗೆ ಮತ್ತು ನಾವಿನ್ಯತೆಯನ್ನು ಹೇಗೆ ಉತ್ತೇಜಿಸುತ್ತದೆ ಎಂಬುದರ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದರು. ಉದ್ಯಮಿಗಳಿಗಿರುವ ಅವಕಾಶಗಳು ಮತ್ತು ಮಾರ್ಗದರ್ಶನ ನೀಡುವಲ್ಲಿ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಪಾತ್ರದ ಬಗ್ಗೆ ಮಾಹಿತಿ ನೀಡಿದರು.ಮುಖ್ಯ ಅತಿಥಿಗಳಾಗಿ ಎಂ.ಎಸ್‌.ಎಂ.ಇ. ಅಭಿವೃದ್ಧಿ ಸಂಸ್ಥೆಯ ಸಹಾಯಕ ನಿರ್ದೇಶಕ ಸುಂದರ್ ಶೇರಿಗಾರ್ ಮಾತನಾಡಿ, ಭಾರತದ ಆರ್ಥಿಕ ಬೆಳವಣಿಗೆಯಲ್ಲಿ ಸಣ್ಣ ಉದ್ಯಮ ಮತ್ತು ಮಧ್ಯಮ ಉದ್ಯಮಗಳ ಪ್ರಾಮುಖ್ಯತೆಯನ್ನು ತಿಳಿಸಿದರು. ಮಹತ್ವಾಕಾಂಕ್ಷಿ ಉದ್ಯಮಿಗಳನ್ನು ಬೆಂಬಲಿಸುವಲ್ಲಿ ಎಂ.ಎಸ್.ಎಂ.ಇ. ಅಭಿವೃದ್ಧಿ ಸಂಸ್ಥೆಯು ನೀಡುವ ಯೋಜನೆಗಳ ಬಗ್ಗೆ ಹಾಗೂ ಮಂಗಳೂರಿನಲ್ಲಿ ಸಣ್ಣ ಉದ್ಯಮಗಳು ಮತ್ತು ಸ್ಟಾರ್ಟ್‌ಅಪ್‌ಗಳಿಗೆ ಲಭ್ಯವಿರುವ ಆರ್ಥಿಕ ನೆರವು ಮತ್ತು ತರಬೇತಿ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು.ಸಂಸ್ಥೆಯ ಪ್ರಾಂಶುಪಾಲ ಡಾ. ತಿರುಮಲೇಶ್ವರ ಭಟ್ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲ ಡಾ. ಗಣೇಶ್ ಐತಾಳ್, ಡೀನ್‌ಗಳು ಮತ್ತು ವಿವಿದ ವಿಭಾಗದ ಮುಖ್ಯಸ್ಥರು, ವಾಣಿಜ್ಯೋದ್ಯಮ ಅಭಿವೃದ್ಧಿ ಘಟಕದ ಸಂಯೋಜಕರಾದ ಡಾ. ಮಧುಕರ್ ನಾಯಕ್ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.