ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದ ಗುಂಡಿ ಮಹಾದೇವಪ್ಪ ಕಲ್ಯಾಣ ಮಂಟಪದಲ್ಲಿ ಮಾ.4ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಇಂಧನ ಇಲಾಖೆ, ಸಾರಿಗೆ ಇಲಾಖೆ ಮತ್ತು ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಜಿಲ್ಲಾ, ತಾಲೂಕುಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಸಹಯೋಗದಲ್ಲಿ ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಜಿಲ್ಲಾಮಟ್ಟದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.ಬೆಳಗ್ಗೆ 10.30ಕ್ಕೆ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕಾರ್ಯಕ್ರಮವನ್ನು ಉದ್ಟಾಟಿಸಿ, ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಚ್.ಎಂ.ರೇವಣ್ಣ ಉಪಸ್ಥಿತರಿರುವರು.
ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ, ಮಾಯಕೊಂಡ ಶಾಸಕರಾದ ಕೆ.ಎಸ್. ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಹರಿಹರ ಶಾಸಕ ಬಿ.ಪಿ ಹರೀಶ್, ವಿಧಾನ ಪರಿಷತ್ ಸದಸ್ಯ ಕೆ.ಅಬ್ದುಲ್ ಜಬ್ಬಾರ್, ಎಚ್.ಬಿ. ಮಂಜಪ್ಪ, ವಡ್ನಾಳ್ ಜಗದೀಶ್, ಜಿ.ಎಚ್. ಮರಿಯೋಜಿ ರಾವ್, ದಿನೇಶ್ ಕೆ. ಶೆಟ್ಟಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಮನೂರು ಟಿ. ಬಸವರಾಜ್, ಡಾ.ಶಮ್ಲಾ ಇಕ್ಬಾಲ್, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಜಿಪಂ ಸಿಇಒ ಗಿತ್ತೆ ಮಾಧವ್ ವಿಠ್ಠಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎಚ್.ಟಿ. ಶೇಖರ್ ಭಾಗವಹಿಸುವರು.