ಸಾರಾಂಶ
ರಾಯಚೂರು ಕೃಷಿ ವಿಜ್ಞಾನಗಳ ವಿವಿಯ ಆಡಳಿತ ಭವನದ ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ವಿಷಯಗಳ ಕುರಿತ ಇದೇ ಆ.1 ಮತ್ತು 2 ರಂದು ನಡೆಯಲಿರುವ ಎರಡು ದಿನದ ಕಾರ್ಯಗಾರ ಪೂರ್ವಭಾವಿ ಸಭೆ ನಡೆಯಿತು.
ಕನ್ನಡಪ್ರಭ ವಾರ್ತೆ ರಾಯಚೂರು
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ವಿಷಯಗಳ ಕುರಿತು ಎರಡು ದಿನದ ಕಾರ್ಯಗಾರವನ್ನು ಆ.1ಮತ್ತು 2ರಂದು ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದು, ಕಾರ್ಯಗಾರಂದ ಯಶಸ್ವಿಗೆ ಅಗತ್ಯ ಕ್ರಮಕೈಗೊಳ್ಳುವುದರ ಜೊತೆಗೆ ಎಲ್ಲರೂ ಶ್ರಮಿಸಬೇಕು ಎಂದು ವಿವಿ ಕುಲಪತಿ ಡಾ.ಎಂ.ಹನುಮಂತಪ್ಪ ತಿಳಿಸಿದರು.ಸ್ಥಳೀಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಭವನದ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಬುಧವಾರ ಮಾತನಾಡಿ, ಕಾರ್ಯಾಗಾರವನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಬೇಕು. ಅಲ್ಲದೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಕಾರ್ಯಕ್ರಮಕ್ಕೆ ಗಣ್ಯಮಾನ್ಯರ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಿ, ಸಂಬಂಧಿಸಿದ ಗಣ್ಯರಿಗೆ ಆಹ್ವಾನ ಪತ್ರಿಕೆ ತಲುಪಿಸುವ ಕೆಲಸ ಮಾಡಬೇಕು ಎಂದರು.
ಕಾರ್ಯಾಗಾರದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ವಿಷಯಗಳ ಕುರಿತು ವಿವಿಧ ಅಭಿವೃದ್ಧಿ ವಿಷಯಗಳ ಮಂಡನೆ ಹಿನ್ನೆಲೆ ಮಂಡನೆ ಮಾಡಿದ ಎಲ್ಲಾ ವಿಷಯಗಳನ್ನು ಡಾಕುಮೆಂಟರಿಯಾಗಿ ಸಂಗ್ರಹಿಸುವ ಕಾರ್ಯವಾಗಬೇಕು. ಕಾರ್ಯಾಗಾರವನ್ನು ಅಚ್ಚುಕಟ್ಟಾಗಿ ನಡೆಯಲು ಒಟ್ಟು ಆರು ಸಮಿತಿ ನೇಮಿಸಲಾಗಿದ್ದು, ಸಮಿತಿಯಲ್ಲಿರುವ ಪ್ರತಿಯೊಬ್ಬರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ ಕಾರ್ಯಕ್ರಮದ ಯಶಸ್ವಿಗೆ ಪ್ರತಿಯೊಬ್ಬರು ಶ್ರಮಿಸಬೇಕೆಂದು ಹೇಳಿದರು.ಸಭೆಯಲ್ಲಿ ಗುಲ್ಬರ್ಗಾ ವಿವಿಯ ಹೈಕ ಅಧ್ಯಯನ ಪೀಠದ ಹೈಕ ಪ್ರದೇಶದ ಇತಿಹಾಸ ರಚನಾ ಸಮಿತಿಯ ಸದಸ್ಯ ಲಕ್ಷ್ಮಣ ದಸ್ತಿ, ವಿವಿಯ ವಿಸ್ತರಣಾ ನಿರ್ದೇಶಕ ಎಸ್.ಬಿ ಗೌಡರ, ಆಡಳಿತಾಧಿಕಾರಿ ಡಾ. ಜಾಗೃತಿ ದೇಶಿಮನಿ, ಸ್ನಾತಕೋತ್ತರ ಡೀನ್ ಡಾ.ಗುರುರಾಜ್, ವಿವಿಯ ಆಸ್ತಿ ಅಧಿಕಾರಿ ರವಿ ಮೇಸ್ತಿ ಸೇರಿ ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿ ಇದ್ದರು.