ಯುವಜನರಲ್ಲಿ ಮೊಬೈಲ್, ಸಾಮಾಜಿಕ ಜಾಲತಾಣಗಳ ಗೀಳು ಹೆಚ್ಚಾಗುತ್ತಿದ್ದು, ಇದರಿಂದ ಅವರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು ಪತ್ರಿಕೆ, ಪುಸ್ತಕ ಓದಿನ ಕಡೆ ಗಮನ ಹರಿಸಬೇಕು.
ಬಳ್ಳಾರಿ: ಮಾಧ್ಯಮ ಸಂಸ್ಥೆಗಳು ಕೇವಲ ನಕಾರಾತ್ಮಕ ಸುದ್ದಿಗಳಿಗೆ ಒತ್ತು ನೀಡದೆ, ಸಕಾರಾತ್ಮಕ, ಸಮಾಜಕ್ಕೆ ಪೂರಕವಾದ ಸುದ್ದಿಗಳಿಗೆ ಆದ್ಯತೆ ನೀಡುವಂತಾಗಬೇಕು ಎಂದು ಮೇಯರ್ ಪಿ.ಗಾದೆಪ್ಪ ಹೇಳಿದರು.
ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ವಾರ್ತಾ ಶಾಖೆ ಗೂಹಾ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಪಂಚಾಯತ್‌ನ ಹಳೆಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಆಯೋಜಿಸಿದ್ದ ವಾರ್ತಾಲಾಪ ಕಾರ್ಯಾಗಾರ ಉದ್ಘಾಟನೆ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಲಿಡ್ಕರ್ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ್, ಪ್ರಸಕ್ತ ಕಾಲಮಾನದ ಯುವಜನರಲ್ಲಿ ಮೊಬೈಲ್, ಸಾಮಾಜಿಕ ಜಾಲತಾಣಗಳ ಗೀಳು ಹೆಚ್ಚಾಗುತ್ತಿದ್ದು, ಇದರಿಂದ ಅವರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು ಪತ್ರಿಕೆ, ಪುಸ್ತಕ ಓದಿನ ಕಡೆ ಗಮನ ಹರಿಸಬೇಕು. ಮಕ್ಕಳು ಸಹ ಪುಸ್ತಕ ಹಾಗೂ ಪತ್ರಿಕೆಗಳನ್ನು ಓದುವಂತೆ ಪೋಷಕರು ಪ್ರೇರೇಪಿಸಬೇಕು ಎಂದರು.
ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎನ್.ವೀರಭದ್ರಗೌಡ ಮಾತನಾಡಿದರು.ಕಲಬುರಗಿಯ ಇಎಸ್‌ಐ ಉಪ ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕ ಯುವರಾಜ್ ಎಸ್.ವಿ. ಅವರು ನೂತನ ಕಾರ್ಮಿಕ ಸಂಹಿತೆಗಳ ಕುರಿತು ವಿವರಿಸಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಯೋಜನೆಗಳ ಅನುಷ್ಠಾನ ಕುರಿತು ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಪಿಎಂ ಸ್ವನಿಧಿ ಯೋಜನೆ ಕುರಿತು ಜಿಲ್ಲಾ ಯೋಜನಾ ವ್ಯವಸ್ಥಾಪಕರಾದ ಡಾ.ಎಸ್. ಸೌಮ್ಯ ಅವರು ಮಾಹಿತಿ ಹಂಚಿಕೊಂಡರು.ಕಾರ್ಯಾಗಾರದ ಎರಡನೇ ಅಧಿವೇಶನದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, ಭಾರತೀಯ ನ್ಯಾಯ ಸಂಹಿತೆ, ಭಾರತೀಯ ಸಾಕ್ಷ್ಯಾ ಅಧಿನಿಯಮ ವಕೀಲ ಬಿ.ರವೀಂದ್ರನಾಥ ತಿಳಿಸಿಕೊಟ್ಟರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರದೀಪ್, ಕೃಷಿ, ತೋಟಗಾರಿಕಾ ವಲಯದ ಯೋಜನೆಗಳ ಅನುಷ್ಠಾನದ ಕುರಿತು ಸಹಾಯಕ ಕೃಷಿ ನಿರ್ದೇಶಕ ಎಸ್.ಬಿ. ಪಾಟೀಲ್, ಹಣಕಾಸು ಸುರಕ್ಷತೆ ಮತ್ತು ಆರ್ಥಿಕ ಸಬಲೀಕರಣದ ಕುರಿತು ಬಳ್ಳಾರಿ ಲೀಡ್ ಬ್ಯಾಂಕ್ ಸಂಯೋಜಕರಾದ ಅವರು ರಾಜಾಸಾಬ್ ಎರಿಮನಿ ಹೆಚ್. ಮಾಹಿತಿ ನೀಡಿದರು. ಭಾರತ ಸರ್ಕಾರದ ವಾರ್ತಾ ಶಾಖೆಯ ಹೆಚ್ಚುವರಿ ಮಹಾನಿರ್ದೇಶಕ ಎಸ್.ಜಿ.ರವೀಂದ್ರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕ ವಿ.ಸಿ.ಗುರುರಾಜ್ ಉಪಸ್ಥಿತರಿದ್ದರು. ಮಾಧ್ಯಮ ಪ್ರತಿನಿಧಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.