ಕೊಡಗು ವಿದ್ಯಾಲಯದಿಂದ ವಿಶ್ವ ಕಲಾ ದಿನಾಚರಣೆ

| Published : Apr 17 2025, 12:04 AM IST

ಸಾರಾಂಶ

ವಿಶ್ವಕಲಾ ದಿನಾಚರಣೆ ಅಂಗವಾಗಿ ನಗರದ ಕೊಡಗು ವಿದ್ಯಾಲಯದ ವತಿಯಿಂದ ರಾಜಾಸೀಟ್‌ನಲ್ಲಿ ಸಮಾಗಮ ಹೆಸರಿನ ಬೇಸಿಗೆ ಶಿಬಿರದ 25 ಶಿಬಿರಾರ್ಥಿಗಳು ಕಲಾ ಶಿಕ್ಷಕರೊಂದಿಗೆ ಸ್ಥಳದಲ್ಲಿಯೇ ಚಿತ್ರ ಬಿಡಿಸುವ ಮೂಲಕ ವಿಶ್ವ ಕಲಾ ದಿನವನ್ನು ಆಚರಿಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ವಿಶ್ವಕಲಾ ದಿನಾಚರಣೆ ಅಂಗವಾಗಿ ನಗರದ ಕೊಡಗು ವಿದ್ಯಾಲಯದ ವತಿಯಿಂದ ರಾಜಾಸೀಟ್‌ನಲ್ಲಿ ಸಮಾಗಮ ಹೆಸರಿನ ಬೇಸಿಗೆ ಶಿಬಿರದ 25 ಶಿಬಿರಾರ್ಥಿಗಳು ಕಲಾ ಶಿಕ್ಷಕರೊಂದಿಗೆ ಸ್ಥಳದಲ್ಲಿಯೇ ಚಿತ್ರ ಬಿಡಿಸುವ ಮೂಲಕ ವಿಶ್ವ ಕಲಾ ದಿನವನ್ನು ಆಚರಿಸಿದರು.ದಿನದ ವಿಶೇಷತೆಯ ಕುರಿತು ಮಾತನಾಡಿದ ಶಿಕ್ಷಕಿ ವಿಶ್ಮ, ಈ ಜಗತ್ತಿನಲ್ಲಿ ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿಯ ಕಲಾವಿದರಾಗಿದ್ದಾರೆ. ಶೈಕ್ಷಣಿಕವಾಗಿ ಕೂಡ ಕಲೆ ಮಕ್ಕಳಲ್ಲಿ ಸೃಜನಶೀಲತೆ ಹಾಗೂ ಭಾವನಾತ್ಮಕ ರೀತಿಯಲ್ಲಿ ಬುದ್ಧಿ ಬೆಳೆಸಲು ಸಹಾಯ ಮಾಡುತ್ತದೆ ಎಂದು ಹೇಳಿದರು.

ಚಿತ್ರ ಕಲಾ ಸಂಪನ್ಮೂಲ ವ್ಯಕ್ತಿಗಳಾದ ಟಿ.ಬಿ. ಪ್ರಸನ್ನ ಕುಮಾರ್, ಪ್ರದೀಪ್ ಪವನ್, ಸಂಜಯ್ ಕೆ. ಮತ್ತು ಗುರು ಹಿರೇಮಠ್ ಈ ಕಾರ್ಯಕ್ರಮಕ್ಕೆ ಮಾರ್ಗದರ್ಶನ ನೀಡಿದರು. ಹೈದರಾಬಾದ್‌ನಿಂದ ಮಡಿಕೇರಿಗೆ ಪ್ರವಾಸ ಬಂದಿದ್ದ ಕಲಾವಿದ ಶರೀಫ್ ಕೂಡ ಈ ಸಮಾರಂಭದಲ್ಲಿ ಪಾಲ್ಗೊಂಡು ತನ್ನ ಕಲೆಯ ಸೊಬಗನ್ನು ಕುಂಚದಲ್ಲಿ ಮೂಡಿಸಿದ್ದು ವಿಶೇಷವಾಗಿತ್ತು. ಕೊಡಗು ವಿದ್ಯಾಲಯ ವತಿಯಿಂದ ಶರೀಫ್ ಅವರನ್ನು ಸನ್ಮಾನಿಸಲಾಯಿತು.

ಶಿಬಿರಾರ್ಥಿಗಳು ಹಾಗೂ ಕಲಾವಿದರು ಸಹ ನೈಸರ್ಗಿಕ ಸೌಂದರ್ಯದ ಮಧ್ಯೆ ಆಸಕ್ತಿಯಿಂದ ಚಿತ್ರ ಕಲಾ ಚಟುವಟಿಕೆಯಲ್ಲಿ ತೊಡಗಿದ್ದರು.

ಆದ್ಯ ಗಂಗಮ್ಮ ಹಾಗೂ ತಂಡದವರು ಪ್ರಾರ್ಥಿಸಿದರು. ದಕ್ಷ ನಿರೂಪಣೆ ಮಾಡಿದರು. ವಿಹಾನ್ ಕಲಾವಿದರನ್ನು ಪರಿಚಯಿಸಿದರು. ಸುದೀಕ್ಷಾ ಸ್ವಾಗತಿಸಿದರು. ತವಷಿ ವಂದಿಸಿದರು.

ಕೊಡಗು ವಿದ್ಯಾಲಯದ ಪ್ರಾಂಶುಪಾಲರಾದ ಸುಮಿತ್ರ ಕೆ.ಎಸ್., ಆಡಳಿತ ನಿರ್ವಹಣಾಧಿಕಾರಿ ರವಿ ಪಿ. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪೋಷಕ ವೃಂದದವರು, ಶಿಬಿರಾರ್ಥಿಗಳು, ಶಿಕ್ಷಕ ವೃಂದದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.