ಸಾರಾಂಶ
ಕನ್ನಡಪ್ರಭ ವಾರ್ತೆ ಕುಶಾಲನಗರ ವಿಶ್ವ ಆನೆ ದಿನಾಚರಣೆ ಅಂಗವಾಗಿ ಕುಶಾಲನಗರ ಸಮೀಪದ ಹಾರಂಗಿ ಆನೆ ಶಿಬಿರದಲ್ಲಿ ಸರಳ ಕಾರ್ಯಕ್ರಮ ನಡೆಯಿತು. ಮಡಿಕೇರಿ ವನ್ಯಜೀವಿ ವಿಭಾಗದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಶಿಬಿರದ ಲಕ್ಷ್ಮಣ, ಏಕದಂತ, ರಾಮ, ವಿಕ್ರಮ, ಈಶ್ವರ ಆನೆಗಳಿಗೆ ಸಿಂಗರಿಸಿ ಹಣ್ಣು ಹಂಪಲು ತಿನಿಸುವ ಮೂಲಕ ಆನೆ ದಿನ ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ವನ್ಯಜೀವಿ ಮಂಡಳಿಯ ಸದಸ್ಯರಾದ ಮೇರಿಯಂಡ ಸಂಕೇತ್ ಪೂವಯ್ಯ ಪಾಲ್ಗೊಂಡು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ವನ್ಯಜೀವಿ ವಿಭಾಗದ ಉಪ ಸಂರಕ್ಷಣಾಧಿಕಾರಿ ಕೆ ಎ ನೆಹರು, ಮಡಿಕೇರಿ ವಿಭಾಗದ ಉಪ ಸಂರಕ್ಷಣಾಧಿಕಾರಿ ಅಭಿಷೇಕ್, ಆನೆ ತಜ್ಞರಾದ ಡಾ ಚಿಟ್ಟಿಯಪ್ಪ, ವನ್ಯಜೀವಿ ತಜ್ಞರಾದ ಕೆ ಕೆ ಭುವನೇಶ್, ವನ್ಯಜೀವಿ ವಿಭಾಗದ ಮಡಿಕೇರಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಾರಿಯಪ್ಪ, ಪುಷ್ಪಗಿರಿ ವಲಯದ ಅರಣ್ಯ ಅಧಿಕಾರಿ ಕೆ ದಿನೇಶ್ ಮತ್ತಿತರರು ಇದ್ದರು. ಈ ಸಂದರ್ಭ ಆನೆಗಳ ಪ್ರಾಮುಖ್ಯತೆ ಸಂರಕ್ಷಣೆ ಬಳಕೆ ಬಗ್ಗೆ ಶಾಲಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. ಸಂಪನ್ಮೂಲ ವ್ಯಕ್ತಿಗಳಾದ ವನ್ಯಜೀವಿ ತಜ್ಞ ಕೆ ಕೆ ಭುವನೇಶ್, ಪಶು ವೈದ್ಯರಾದ ಡಾ ಚಿಟ್ಟಿಯಪ್ಪ ಸಂಪನ್ಮೂಲ ವ್ಯಕ್ತಿಗಳಾಗಿ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಆನೆ ದಿನದ ಮಹತ್ವ ಹಾಗೂ ಸಂರಕ್ಷಣೆ ಮತ್ತಿತರ ವಿಷಯಗಳ ಬಗ್ಗೆ ಮಾಹಿತಿ ಒದಗಿಸಿದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್, ಕುಶಾಲನಗರ ವಲಯ ಅರಣ್ಯ ಅಧಿಕಾರಿ ರಕ್ಷಿತ್, ತಲಕಾವೇರಿಯ ವನ್ಯಜೀವಿ ವಿಭಾಗದ ಅಧಿಕಾರಿ ತ್ಯಾಗರಾಜ್ , ಉಪವಲಯ ಅರಣ್ಯ ಅಧಿಕಾರಿ ಕನ್ನಂಡ ರಂಜನ್ ಮತ್ತಿತರರು ಇದ್ದರು.