ಚನ್ನರಾಯಪಟ್ಟಣ: ಪಟ್ಟಣದ ಜ್ಞಾನಸಾಗರ ಇಂಟರನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ವಿದ್ಯಾರ್ಥಿಗಳಿಂದ ಅರ್ಥಪೂರ್ಣ ಜಾಗೃತಿ ಕಾರ್ಯಕ್ರಮ ನೆರವೇರಿತು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ನಾಗೇಶ್ ಎಜುಕೇಷನ್ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷರಾದ ಡಾ. ಕೆ. ನಾಗೇಶ್ ರವರು ಮಾತನಾಡಿ ಪ್ರಸ್ತುತ ದಿನದಲ್ಲಿ ಜಾಗತಿಕರಣ, ನಗರೀಕರಣದ ಪ್ರಭಾವದಿಂದಾಗಿ ಅರಣ್ಯ ನಾಶ, ಪರಿಸರ ನಾಶವಾಗುತ್ತಿದೆ. ಶುದ್ಧ ಗಾಳಿ, ಶುದ್ಧ ನೀರು, ಶುದ್ಧ ವಾತಾವರಣದ ಕೊರತೆಯಲ್ಲಿ ಜನರು ಅನೇಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಪರಿಸರವನ್ನು ಉಳಿಸಿ ಆರೋಗ್ಯಯುತ ಸಮಾಜ ನಿರ್ಮಾಣ ಮಾಡುವಲ್ಲಿ ಪ್ರತಿಯೊಬ್ಬರೂ ಸಂಕಲ್ಪಬದ್ಧರಾಗಿ ಮುನ್ನಡೆಯಬೇಕು, ಈ ನಿಟ್ಟಿನಲ್ಲಿ ಸಮಾಜದ ಜನರಿಗೆ, ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಅರಿವು ಮೂಡಿಸುವ ಇಂತಹ ಕಾರ್ಯಕ್ರಮಗಳು ಅವಶ್ಯಕ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ನಾಗೇಶ್ ಸಮೂಹ ಶಿಕ್ಷಣ ಸಂಸ್ಥೆಗಳ ಡೀನ್, ಡಾ. ಸುಜಾ ಪಿಲಿಫ್, ಆಡಳಿತಾಧಿಕಾರಿಗಳಾದ ಪಿಲಿಫ್ ಹಾಗೂ ವಿದ್ಯಾರ್ಥಿಗಳು, ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಜರಿದ್ದರು.