ವಿಶ್ವ ಪರಿಸರ ದಿನಾಚರಣೆ: ಮಡಿಕೇರಿ ನಗರದಲ್ಲಿ ಜಾಗೃತಿ ಜಾಥಾ

| Published : Jun 06 2024, 12:32 AM IST

ವಿಶ್ವ ಪರಿಸರ ದಿನಾಚರಣೆ: ಮಡಿಕೇರಿ ನಗರದಲ್ಲಿ ಜಾಗೃತಿ ಜಾಥಾ
Share this Article
  • FB
  • TW
  • Linkdin
  • Email

ಸಾರಾಂಶ

ವಿಶ್ವ ಪರಿಸರ ದಿನಾಚರಣೆ ಬುಧವಾರ ಮಡಿಕೇರಿ ನಗರದಲ್ಲಿ ಅರ್ಥಪೂರ್ಣವಾಗಿ ಜರುಗಿತು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದ ಬಳಿ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಹೊಸಮನಿ ಪುಂಡಲಿಕ ಪರಿಸರ ಜಾಗೃತಿ ಜಾಥಾಗೆ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ವಿಶ್ವ ಪರಿಸರ ದಿನಾಚರಣೆ ಬುಧವಾರ ನಗರದಲ್ಲಿ ಅರ್ಥಪೂರ್ಣವಾಗಿ ಜರುಗಿತು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದ ಬಳಿ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಹೊಸಮನಿ ಪುಂಡಲಿಕ ಪರಿಸರ ಜಾಗೃತಿ ಜಾಥಾಗೆ ಚಾಲನೆ ನೀಡಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಬಿ.ಜಯಲಕ್ಷ್ಮಿ, ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ, ವಕೀಲರ ಸಂಘದ ಅಧ್ಯಕ್ಷ ಎಂ.ಎ.ನಿರಂಜನ್, ಹೆಚ್ವುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್, ಜಿಲ್ಲಾ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಎಚ್.ಆರ್.ಯೋಗೀಶ್, ನಗರಸಭೆ ಆಯುಕ್ತ ವಿಜಯ್, ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಧಾನ ಜಿಲ್ಲಾ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಎಂ.ಜಿ.ರಘುರಾಮ್, ರಾಷ್ಟ್ರೀಯ ಹಸಿರು ಪಡೆಯ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮ್ ಕುಮಾರ್, ನಗರಸಭೆ ಪರಿಸರ ಎಂಜಿನಿಯರ್ ಸೌಮ್ಯ, ಸ್ಕೌಟ್ಸ್ ಮತ್ತು ಗೈಡ್ಸ್, ಎನ್‌ಸಿಸಿ, ಎನ್‌ಎಸ್‌ಎಸ್ ವಿದ್ಯಾರ್ಥಿಗಳು, ಕ್ಲಬ್ ಮಹೇಂದ್ರದ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

ವಕೀಲರ ಸಂಘದ ಅಧ್ಯಕ್ಷ ಎಂ.ಎ.ನಿರಂಜನ್ ಮಾತನಾಡಿ, ಪರಿಸರ ಉಳಿದಲ್ಲಿ ಮಾತ್ರ ಮಾನವನ ಬದುಕು ಉತ್ತಮವಾಗಿರಲು ಸಾಧ್ಯ. ಆ ನಿಟ್ಟಿನಲ್ಲಿ ಗಿಡ, ಮರಗಳನ್ನು ಯಥೇಚ್ಛವಾಗಿ ಬೆಳೆಸಿ ಪರಿಸರ ಸಂರಕ್ಷಿಸಬೇಕು ಎಂದು ಕರೆ ನೀಡಿದರು.

ವರ್ಷದಿಂದ ವರ್ಷಕ್ಕೆ ವಾತಾವರಣದಲ್ಲಿ ಹವಾಮಾನ ವೈಪರೀತ್ಯ ಕಾಣಬಹುದಾಗಿದೆ. ಆದ್ದರಿಂದ ಪರಿಸರವನ್ನು ಸಂರಕ್ಷಣೆ ಮಾಡುವತ್ತ ಪ್ರತಿಯೊಬ್ಬರೂ ಗಮನಹರಿಸಬೇಕು ಎಂದು ಕೋರಿದರು.

ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಮಾನವ ಸರಪಳಿ ಏರ್ಪಡಿಸಿ ಪರಿಸರದ ಮಹತ್ವ ಕುರಿತು ಸಂದೇಶ ನೀಡಲಾಯಿತು.

ನಂತರ ನಗರದ ಓಂಕಾರೇಶ್ವರ ದೇವಾಲಯ ಬಳಿ ಇರುವ ಗೌರಿ ಕೆರೆಯಲ್ಲಿ ಸ್ವಚ್ಛತಾಕಾರ್ಯ ಕೈಗೊಳ್ಳಲಾಯಿತು. ಸ್ವಚ್ಛತಾ ಕಾರ್ಯದಲ್ಲಿ ಹಲವರು ಪಾಲ್ಗೊಂಡರು.

ಬಳಿಕ ಆಂಜನೇಯ ದೇವಾಲಯ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.

ಪರಿಸರ ಜಾಥಾ: ನಗರಸಭೆಯ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ಪರಿಸರ ಕಾರ್ಯಕ್ರಮಕ್ಕೆ ಪ್ರಧಾನ ಜಿಲ್ಲಾ ನ್ಯಾಯಾಧೀಶ ಹೊಸಮನಿ ಪುಂಡಲಿಕ ಚಾಲನೆ ನೀಡಿದರು.

ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಬಿ.ಜಯಲಕ್ಷ್ಮಿ, ಡಿಸಿಎಫ್ ಬಿ.ಭಾಸ್ಕರ್, ವಕೀಲರ ಸಂಘದ ಅಧ್ಯಕ್ಷ ಎಂ.ಎ.ನಿರಂಜನ್, ಪರಿಸರ ಅಧಿಕಾರಿ ಎಂ.ಜಿ.ರಘುರಾಮ್, ಕೆ.ಟಿ.ಬೇಬಿ ಮ್ಯಾಥ್ಯೂ, ಎಸಿಎಫ್ ಮೊಹಿಸಿನ್, ಆರ್‌ಎಫ್‌ಒ ಪೂಜಾಶ್ರೀ, ರಾಷ್ಟ್ರೀಯ ಹಸಿರು ಪಡೆಯ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್, ಆಯುಕ್ತ ವಿಜಯ್ ಇತರರು ಇದ್ದರು.

ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಿಂದ ಆರಂಭಗೊಂಡ ಜಾಥಾಕ್ಕೆ ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ಹೊಸಮನಿ ಪುಂಡಲಿಕ ಚಾಲನೆ ನೀಡಿದರು.

ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ ಕುರಿತ ಭಿತ್ತಿಫಲಕಗಳನ್ನು ಹಿಡಿದು ಗಿಡನೆಟ್ಟು ಬೆಳೆಸಿ ಪರಿಸರ ಸಂರಕ್ಷಿಸಿ, ಪ್ಲಾಸ್ಟಿಕ್ ಬಳಕೆ ತ್ಯಜಿಸಿ ಮಾಲಿನ್ಯ ತಡೆಯಿರಿ, ಹಸಿರೇ ಉಸಿರು- ಜಲವೇ ಜೀವಜಾಲ ಎಂಬಿತ್ಯಾದಿ ಪರಿಸರ ಘೋಷಣೆಗಳನ್ನು ಪ್ರಚುರಪಡಿಸುವ ಮೂಲಕ ಸಮುದಾಯದಲ್ಲಿ ಪರಿಸರ ಜಾಗೃತಿ ಮೂಡಿಸಿದರು.

ಪರಿಸರ ಸಂರಕ್ಷಣೆ ಕುರಿತ ಪ್ರತಿಜ್ಞಾ ವಿಧಿ ಬೋಧಿಸಿದ ರಾಷ್ಟ್ರೀಯ ಹಸಿರು ಪಡೆಯ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್, ಪ್ರತಿಯೊಬ್ಬರೂ ಉತ್ತಮ ಭವಿಷ್ಯಕ್ಕಾಗಿ ಪರಿಸರ ಸಂರಕ್ಷಣೆಗೆ ಪಣ ತೊಡಬೇಕು ಎಂದರು.

ಜಿಲ್ಲಾ ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕ ಎಚ್.ಆರ್.ಯೋಗೀಶ್, ಡಿಡಿಪಿಐ ಎಂ.ಚಂದ್ರಕಾಂತ್, ಡಿವೈಪಿಸಿ ಎಂ.ಕೃಷ್ಣಪ್ಪ, ಮಡಿಕೇರಿ ಬಿಇಓ ಡಾ ಬಿ.ಸಿ.ದೊಡ್ಡೇಗೌಡ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ರಾಣಿ ಮಾಚಯ್ಯ, ಜಿಲ್ಲಾ ಸ್ಕೌಟ್ಸ್ ಆಯುಕ್ತ ಜಿಮ್ಮಿ ಸಿಕ್ವೇರಾ, ಸ್ಥಾನಿಕ ಆಯುಕ್ತ ಎಚ್.ಆರ್.ಮುತ್ತಪ್ಪ ಮತ್ತಿತರರಿದ್ದರು. ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲಾ ಸಂಸ್ಥೆಯ ಕಾರ್ಯಾಧ್ಯಕ್ಷ ಕೆ..ಎ.ದೇವಯ್ಯ ಅಧ್ಯಕ್ಷತೆ ವಹಿಸಿದ್ದರು.

ಸಂಸ್ಥೆಯ ಆಡಳಿತಾಧಿಕಾರಿ ಎನ್.ಎ.ಪೊನ್ನಮ್ಮ, ಶಾಲೆಯ ಪ್ರಿನ್ಸಿಪಾಲ್ ಎಂ.ಜಿ.ಸವಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಆಡಳಿತ ಸಹಾಯಕ ಬಿ.ಎಸ್.ಜೋಯಪ್ಪ ಇತರರು ಇದ್ದರು.