ಭದ್ರಾವತಿ: ನಗರದ ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಮಹಿಳಾ ಘಟಕದಿಂದ ಬೈಪಾಸ್ ರಸ್ತೆ, ಮಿಲ್ಟ್ರಿಕ್ಯಾಂಪ್ ಸಮೀಪದ ಕ್ಯಾಥೋಲಿಕ್ ಕ್ರೈಸ್ತರ ಸಮಾಧಿಯಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು. ಸಾರ್ವಜನಿಕರ ಅನುಕೂಲಕ್ಕಾಗಿ ವಿವಿಧ ಜಾತಿಯ ಸುಮಾರು ೫೦ ಸಸಿಗಳು ಹಾಗೂ ತೆಂಗಿನ ಸಸಿಗಳನ್ನು ನೆಡಲಾಯಿತು. ಮಹಿಳಾ ಘಟಕದ ಅಧ್ಯಕ್ಷೆ ಜೆಸ್ಸಿ ಗೊನ್ಸಾಲ್ವಿಸ್ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ, ಯುವ ಮುಖಂಡ ಬಿ.ಎಸ್ ಗಣೇಶ್, ಮಹಿಳಾ ಘಟಕದ ಗೌರವಾಧ್ಯಕ್ಷೆ ಎಲ್ಸಿ ಡಿಸೋಜ, ಧರ್ಮಗುರುಗಳಾದ ಫಾದರ್ ಕ್ರಿಸ್ತರಾಜ, ರೆವರೆಂಡ್ ಪಾಸ್ಟರ್ ಗಿಡಿಯೋನ್ ಹಾಗೂ ಮಹಿಳಾ ಘಟಕದ ಪದಾಧಿಕಾರಿಗಳು, ಕ್ರೈಸ್ತ ಸಮಾಜದ ಪ್ರಮುಖರು ಪಾಲ್ಗೊಂಡಿದ್ದರು.