ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ವಿಶ್ವಪರಿಸರ ದಿನಾಚರಣೆ

| Published : Jun 08 2025, 02:35 AM IST

ಸಾರಾಂಶ

ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದ ಎಂಬಿಎ ವಿಭಾಗದ ವತಿಯಿಂದ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಖ್ಯಾತ ಪರಿಸರಪ್ರೇಮಿ, ಕೋಟೇಶ್ವರದ ಸರ್ಕಾರಿ ಪ್ರೌಢಶಾಲೆಯ ಗಣಿತ ಶಿಕ್ಷಕ ಶ್ರೀಕಾಂತ ವಡೇರಹೋಬಳಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಪರಿಸರದ ಬಗ್ಗೆ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಕುಂದಾಪುರ

ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದ ಎಂಬಿಎ ವಿಭಾಗದ ವತಿಯಿಂದ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಖ್ಯಾತ ಪರಿಸರಪ್ರೇಮಿ, ಕೋಟೇಶ್ವರದ ಸರ್ಕಾರಿ ಪ್ರೌಢಶಾಲೆಯ ಗಣಿತ ಶಿಕ್ಷಕ ಶ್ರೀಕಾಂತ ವಡೇರಹೋಬಳಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ, ಪ್ರತಿ ವಿದ್ಯಾರ್ಥಿ ಒಂದು ಗಿಡವನ್ನಾದರೂ ಬೆಳೆಸಿ ಪರಿಸರ ಸಂರಕ್ಷಣೆಗೆ ತಮ್ಮ ಕೈಲಾಗುವ ಸೇವೆ ಮಾಡಬೇಕು. ಪ್ಲಾಸ್ಟಿಕ್ ಅನ್ನು ಮರುಬಳಕೆ ಮಾಡುವುದರ ಮೂಲಕ ಪರಿಸರ ಹಾನಿಯನ್ನು ಕಡಿಮೆಗೊಳಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪ ಪ್ರಾಂಶುಪಾಲ ಡಾ. ಮೇಲ್ವಿನ್ ಡಿಸೋಜ ವಹಿಸಿಕೊಂಡಿದ್ದು, ಪ್ರತಿಯೊಬ್ಬರೂ ಪರಿಸರವನ್ನು ಸಂರಕ್ಷಿಸಿದಾಗ ಮಾತ್ರ ನಮ್ಮ ಆರೋಗ್ಯವನ್ನು ಕಾಪಾಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.ಈ ಕಾರ್ಯಕ್ರಮದಲ್ಲಿ ಎಂಬಿಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರಾ ಪೂಜಾರಿ ಮತ್ತು ಇತರ ಉಪನ್ಯಾಸಕರು ಉಪಸ್ಥಿತರಿದ್ದರು. ಶಾಂಭವಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಸಹಾಯಕ ಪ್ರಾಧ್ಯಾಪಕಿ ಪ್ರೊ. ತಿಲಕಾಲಕ್ಷ್ಮೀ ಈ ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದರು.ಸಭಾ ಕಾರ್ಯಕ್ರಮದ ನಂತರ ಕಾಲೇಜಿನ ಆವರಣದಲ್ಲಿ ಗಿಡಗಳನ್ನು ನೆಟ್ಟು ಅದನ್ನು ವಿದ್ಯಾರ್ಥಿಗಳು ದತ್ತು ಪಡೆಯುವ ಮೂಲಕ ಪ್ರತಿ ದಿನವನ್ನ ಪರಿಸರ ದಿನವನ್ನಾಗಿಸುವ ಸಂಕಲ್ಪವನ್ನು ಹೊಂದಲಾಯಿತು.