ಪೆರಾಜೆ ಯಲ್ಲಿ ವಿಶ್ವ ಪರಿಸರ ದಿನ ಆಚರಣೆ

| Published : Jul 03 2025, 11:46 PM IST / Updated: Jul 03 2025, 11:47 PM IST

ಸಾರಾಂಶ

ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲ ವತಿಯಿಂದ ವಿಶ್ವ ಪರಿಸರ ದಿನ ಆಚರಣೆಯನ್ನು ಗಿಡ ನೆಡುವ ಮೂಲಕ ಆಚರಿಸಲಾಯಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಪೆರಾಜೆ ಶಕ್ತಿ ಕೇಂದ್ರದಲ್ಲಿ ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲ ವತಿಯಿಂದ ವಿಶ್ವ ಪರಿಸರ ದಿನ ಆಚರಣೆಯನ್ನು ಗಿಡ ನೆಡುವ ಮೂಲಕ ಆಚರಿಸಲಾಯಿತು.

ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಬಿಜೆಪಿ ಶಕ್ತಿ ಕೇಂದ್ರ ಪೆರಾಜೆ ವತಿಯಿಂದ ಮಂಗಳವಾರ ದೇವಸ್ಥಾನದ ಉಳ್ಳಾಕುಲ ಸ್ಥಾನದ ಪರಿಸರದಲ್ಲಿ ಸಾಗುವನಿ , ಮಹಾಗನಿ , ಬಿಲ್ವ ಪತ್ರೆ ಗಿಡ ನಾಟಿಮಾಡಿ ಪರಿಸರದ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರು ಜಿತೇಂದ್ರ ನಿಡ್ಯಮಲೆ, ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ, ಪೆರಾಜೆ ಪಂಚಾಯಿತಿ ಉಪಾಧ್ಯಕ್ಷರಾದ ನಂಜಪ್ಪ ನಿಡ್ಯಮಲೆ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಹಾಜರಿದ್ದರು.