ರಾಷ್ಟ್ರೀಯ ಬಸವ ಸೈನ್ಯದಿಂದ ವಿಶ್ವ ಪರಿಸರ ದಿನಾಚರಣೆ

| Published : Jun 06 2024, 12:32 AM IST

ರಾಷ್ಟ್ರೀಯ ಬಸವ ಸೈನ್ಯದಿಂದ ವಿಶ್ವ ಪರಿಸರ ದಿನಾಚರಣೆ
Share this Article
  • FB
  • TW
  • Linkdin
  • Email

ಸಾರಾಂಶ

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ನಮಗೆ ಇರುವುದೊಂದೇ ಭೂಮಿ. ಅದರ ರಕ್ಷಣೆಯು ನಮ್ಮೆಲ್ಲರ ಹೊಣೆಗಾರಿಕೆ ಎಂಬುದು ಸಾರ್ವತ್ರಿಕವಾದ ಆಶಯ ಎಂದು ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಹೇಳಿದರು.

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ

ನಮಗೆ ಇರುವುದೊಂದೇ ಭೂಮಿ. ಅದರ ರಕ್ಷಣೆಯು ನಮ್ಮೆಲ್ಲರ ಹೊಣೆಗಾರಿಕೆ ಎಂಬುದು ಸಾರ್ವತ್ರಿಕವಾದ ಆಶಯ ಎಂದು ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಹೇಳಿದರು.

ಪಟ್ಟಣದ ಬಸವೇಶ್ವರ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಆವರಣದಲ್ಲಿ ರಾಷ್ಟ್ರೀಯ ಬಸವ ಸೈನ್ಯ ಸಂಘಟನೆಯ ನೇತೃತ್ವದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿಗಳನ್ನು ನೆಟ್ಟು ಮಾತನಾಡಿದ ಅವರು, ಪರಿಸರ ಮಾಲಿನ್ಯ ಜಗತ್ತನ್ನು ಅತ್ಯಂತ ತೀವ್ರವಾಗಿ ಕಾಡುತ್ತಿರುವ ಈ ಸಂದರ್ಭದಲ್ಲಿ ಪ್ರಕೃತಿಯನ್ನು ಉಳಿಸಿಕೊಳ್ಳುವುದೇ ಮಹತ್ವದ ಕರ್ತವ್ಯವಾಗಿದೆ. ಈ ಆಶಯದೊಂದಿಗೆ ಜನಜಾಗೃತಿ ಅಭಿಯಾನಕ್ಕೆ ಪ್ರತಿವರ್ಷ ಜೂನ್ 5ರಂದು ಆಚರಣೆಯಾಗುವ ವಿಶ್ವ ಪರಿಸರ ದಿನವೂ ನಮ್ಮೆಲ್ಲರಿಗೂ ಸ್ಪೂರ್ತಿಯಾಗಿದೆ. ದಿನದಿಂದ ದಿನಕ್ಕೆ ಜಾಗತಿಕ ತಾಪಮಾನ ಹೆಚ್ಚುತ್ತಿರುವ ಸಂದರ್ಭದಲ್ಲಿ ಗಿಡಮರಗಳನ್ನು ಬೆಳೆಸುವುದರ ಮೂಲಕ ಸುಂದರವಾದ ಪರಿಸರವನ್ನು ಬೆಳೆಸುವುದು ಹಾಗೂ ಉಳಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ರಾಷ್ಟ್ರೀಯ ಬಸವ ಸೈನ್ಯದ ಮುಖಂಡರಾದ ಶ್ರೀಕಾಂತ್ ಕೊಟ್ರಶೆಟ್ಟಿ, ಸಂಜು ಬಿರಾದಾರ, ಜಟ್ಟಿಂಗರಾಯ ಮಾಲಗಾರ, ಮನ್ನಾನ ಶಾಬಾದಿ, ಮಂಜು ಜಾಲಗೇರಿ, ವೀರೇಶ ಗಬ್ಬೂರ, ಮಂಜುನಾಥ ಚಿಕ್ಕೊಂಡ, ಮಹಾಂತೇಶ ಹೆಬ್ಬಾಳ ಇತರರು ಇದ್ದರು.