ವಿಶ್ವ ಹೃದಯ ದಿನದ ಅಂಗವಾಗಿ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ, ಕಾರ್ಕಳದ ವತಿಯಿಂದ ರೋಟರಿ ಕ್ಲಬ್ ಕಾರ್ಕಳ ರಾಕ್‌ಸಿಟಿ, ರೋಟರ್ಯಾಕ್ಟ್ ಕ್ಲಬ್ ಶ್ರೀ ಭುವನೇಂದ್ರ ಕಾಲೇಜು ಹಾಗೂ ರೋಟರ್ಯಾಕ್ಟ್ ಕ್ಲಬ್ ಸರ್ಕಾರಿ ಪಾಲಿಟೆಕ್ನಿಕ್ ಸಹಯೋಗದಲ್ಲಿ ಭಾನುವಾರ ಬೃಹತ್ ವಾಕ್‌ಥಾನ್ ನಡೆಯಿತು. 500ಕ್ಕೂ ಹೆಚ್ಚು ಮಂದಿ ಪಾಲ್ಗೊಂಡು ಹೃದಯದ ಆರೋಗ್ಯದ ಕುರಿತು ಜಾಗೃತಿ ಮೂಡಿಸಿದರು.
ಕಾರ್ಕಳ : ವಿಶ್ವ ಹೃದಯ ದಿನದ ಅಂಗವಾಗಿ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ, ಕಾರ್ಕಳದ ವತಿಯಿಂದ ರೋಟರಿ ಕ್ಲಬ್ ಕಾರ್ಕಳ ರಾಕ್‌ಸಿಟಿ, ರೋಟರ್ಯಾಕ್ಟ್ ಕ್ಲಬ್ ಶ್ರೀ ಭುವನೇಂದ್ರ ಕಾಲೇಜು ಹಾಗೂ ರೋಟರ್ಯಾಕ್ಟ್ ಕ್ಲಬ್ ಸರ್ಕಾರಿ ಪಾಲಿಟೆಕ್ನಿಕ್ ಸಹಯೋಗದಲ್ಲಿ ಭಾನುವಾರ ಬೃಹತ್ ವಾಕ್‌ಥಾನ್ ನಡೆಯಿತು. 500ಕ್ಕೂ ಹೆಚ್ಚು ಮಂದಿ ಪಾಲ್ಗೊಂಡು ಹೃದಯದ ಆರೋಗ್ಯದ ಕುರಿತು ಜಾಗೃತಿ ಮೂಡಿಸಿದರು.
ಅನಂತಶಯನ ವೃತ್ತದಿಂದ ಬೆಳಿಗ್ಗೆ 7.30ಕ್ಕೆ ಆರಂಭಗೊಂಡ ವಾಕ್‌ಥಾನ್‌ಗೆ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಚಾಲನೆ ನೀಡಿದರು. ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು, ಉಪನ್ಯಾಸಕರು, ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ, ರೋಟರಿ-ರೋಟರ್ಯಾಕ್ಟ್ ಸದಸ್ಯರು ಭಾಗವಹಿಸಿದರು. ಹೃದಯದ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಬೀದಿನಾಟಕವೂ ಗಮನ ಸೆಳೆಯಿತು.ನಂತರ ಆಸ್ಪತ್ರೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ವೈದ್ಯ ಡಾ. ಕಾರ್ತಿಕ್ ರಾವ್ ಮಾತನಾಡಿ, ಹೃದಯ ಸಂಬಂಧಿ ಕಾಯಿಲೆಗಳ ತಡೆಗಟ್ಟುವಿಕೆಗೆ ಆರೋಗ್ಯಕರ ಜೀವನಶೈಲಿ ಅಗತ್ಯ ಎಂದರು.ರೋಟರಿ ಅಸಿಸ್ಟೆಂಟ್ ಗವರ್ನರ್ ರೋಟೇರಿಯನ್ ಸುರೇಶ್ ನಾಯಕ್ ಮಾತನಾಡಿ, ಹೃದಯ ಕಾಯಿಲೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ವಾಕ್‌ಥಾನ್‌ನ ಪ್ರಮುಖ ಉದ್ದೇಶವಾಗಿದೆ ಎಂದರು.ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕ್ರಿಯೇಟಿವ್ ಪಿಯು ಕಾಲೇಜು, ಶ್ರೀ ಭುವನೇಂದ್ರ ಕಾಲೇಜು, ಎಂ.ಪಿ.ಎಂ. ಕಾಲೇಜು, ಸರ್ಕಾರಿ ಪಾಲಿಟೆಕ್ನಿಕ್ ಹಾಗೂ ಸರ್ಕಾರಿ ನರ್ಸಿಂಗ್ ಕಾಲೇಜು ಸೇರಿದಂತೆ ವಿವಿಧ ಸಂಸ್ಥೆಗಳು ಹಲವು ವಿಭಾಗಗಳಲ್ಲಿ ಪ್ರಶಸ್ತಿ ಪಡೆದವು.ಮುಖ್ಯ ವೈದ್ಯಾಧಿಕಾರಿ ಡಾ. ಸಂಜಯ್ ಕುಮಾರ್, ರೋಟರಿ ಕ್ಲಬ್ ಕಾರ್ಕಳ ರಾಕ್‌ಸಿಟಿ ಅಧ್ಯಕ್ಷ ರೋಟೇರಿಯನ್ ಮಂಜುನಾಥ್ ಹೆಗ್ಡೆ, ರೋಟರ್ಯಾಕ್ಟ್ ಅಧ್ಯಕ್ಷರಾದ ಸುಜನ್ ಹಾಗೂ ಶ್ರೀನಿವಾಸ್ ಭಟ್ ಸೇರಿದಂತೆ ಮತ್ತಿತರರಿದ್ದರು.