ವಿಶ್ವ ಕಿಡ್ನಿ ದಿನಾಚರಣೆ: ಉಚಿತ ಆರೋಗ್ಯ ತಪಾಸಣೆ, ಮಾಹಿತಿ ಕಾರ್ಯಕ್ರಮ

| Published : Mar 18 2025, 12:38 AM IST

ವಿಶ್ವ ಕಿಡ್ನಿ ದಿನಾಚರಣೆ: ಉಚಿತ ಆರೋಗ್ಯ ತಪಾಸಣೆ, ಮಾಹಿತಿ ಕಾರ್ಯಕ್ರಮ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ಆಸ್ಪತ್ರೆ ಎನ್.ಸಿ.ಡಿ. ವಿಭಾಗ, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ಜಿಲ್ಲಾ ಗುಣಮಟ್ಟ ಖಾತ್ರಿ ವಿಭಾಗ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಕಿಡ್ನಿ ದಿನಾಚರಣೆಯ ಅಂಗವಾಗಿ ಜಿಲ್ಲಾ ಆಸ್ಪತ್ರೆಯ ನೌಕರರಿಗೆ ಉಚಿತ ಆರೋಗ್ಯ ತಪಾಸಣಾ ಮತ್ತು ಮಾಹಿತಿ ಕಾರ್ಯಕ್ರಮ ಇತ್ತೀಚೆಗೆ ನಗರದ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ಆಸ್ಪತ್ರೆ ಎನ್.ಸಿ.ಡಿ. ವಿಭಾಗ, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ಜಿಲ್ಲಾ ಗುಣಮಟ್ಟ ಖಾತ್ರಿ ವಿಭಾಗ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಕಿಡ್ನಿ ದಿನಾಚರಣೆಯ ಅಂಗವಾಗಿ ಜಿಲ್ಲಾ ಆಸ್ಪತ್ರೆಯ ನೌಕರರಿಗೆ ಉಚಿತ ಆರೋಗ್ಯ ತಪಾಸಣಾ ಮತ್ತು ಮಾಹಿತಿ ಕಾರ್ಯಕ್ರಮ ಇತ್ತೀಚೆಗೆ ನಗರದ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಎಚ್. ಅಶೋಕ್ ಮಾತನಾಡಿ, ಪ್ರತಿಯೊಬ್ಬರೂ ಆರೋಗ್ಯ ತಪಾಸಣೆಯನ್ನು ನಿರಂತರವಾಗಿ ಮಾಡಿಸುವುದರ ಮೂಲಕ ಉತ್ತಮ ಆರೋಗ್ಯ ಹೊಂದಬೇಕು ಎಂದ ಅವರು, ಕಿಡ್ನಿಯ ಆರೈಕೆ ಹಾಗೂ ಜೀವನ ಶೈಲಿಯ ಬದಲಾವಣೆ ಕುರಿತು ಮಾಹಿತಿ ನೀಡಿದರು.

ಮೂತ್ರಪಿಂಡ ತಜ್ಞೆ ಡಾ. ಮೇಘ ಪೈ, ಕಿಡ್ನಿ ಕಾಯಿಲೆಯ ಲಕ್ಷಣಗಳು, ತಡೆಗಟ್ಟುವಿಕೆ ಮತ್ತು ಅದರ ಆರೈಕೆಯ ಬಗ್ಗೆ ಮಾಹಿತಿ ನೀಡಿದರು.ಇದೇ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರೂಪ್ ಡಿ, ನಾನ್ ಕ್ಲಿನಿಕ್ ಸಿಬ್ಬಂದಿ, ಶುಶ್ರೂಷಾಧಿಕಾರಿ, ವೈದ್ಯಾಧಿಕಾರಿ ಹಾಗೂ ಆಸ್ಪತ್ರೆಯ ಎಲ್ಲ ಸಿಬ್ಬಂದಿಗೆ ಕಿಡ್ನಿಗೆ ಸಂಬಂಧಿಸಿದ ರಕ್ತ ಪರೀಕ್ಷೆ ತಪಾಸಣಾಗಳನ್ನುಲುಚಿತವಾಗಿ ನಡೆಸಲಾಯಿತು.ಕಾರ್ಯಕ್ರಮದಲ್ಲಿ ಜಿಲ್ಲಾ ಆಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ. ವಾಸುದೇವ್, ವೈದ್ಯಕೀಯ ತಜ್ಞೆ ಡಾ. ದಯಾಮಣಿ, ಎನ್.ಸಿ.ಡಿ. ಘಟಕದ ಜಿಲ್ಲಾ ಸಮಾಲೋಚಕಿ ಡಾ.ಅಂಜಲಿ, ಜಿಲ್ಲಾ ಗುಣಮಟ್ಟ ಖಾತ್ರಿ ವಿಭಾಗದ ಮ್ಯಾನೇಜರ್ ಡಾ.ದಿವ್ಯ, ಆಪ್ತ ಸಮಾಲೋಚಕ ಮನು ಎಸ್.ಬಿ., ಆಸ್ಪತ್ರೆಯ ವೈದ್ಯಾಧಿಕಾರಿಗಳು, ಸಿಬ್ಬಂದಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.