ಸಾರಾಂಶ
ಚನ್ನಪಟ್ಟಣ: ನಗರದ ಬಾಲು ಪಬ್ಲಿಕ್ ಶಾಲೆಯಲ್ಲಿ ಅಂತಾರಾಷ್ಟ್ರೀಯ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ದಿನಾಚರಣೆ ಆಚರಿಸಲಾಯಿತು.
ಚನ್ನಪಟ್ಟಣ: ನಗರದ ಬಾಲು ಪಬ್ಲಿಕ್ ಶಾಲೆಯಲ್ಲಿ ಅಂತಾರಾಷ್ಟ್ರೀಯ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ದಿನಾಚರಣೆ ಆಚರಿಸಲಾಯಿತು.
ಶಾಲೆಯ ವಿದ್ಯಾರ್ಥಿಗಳು ಪ್ಲಾಸ್ಟಿಕ್ ಚೀಲದ ದುಷ್ಪರಿಣಾಮದ ಕುರಿತು ಜಾಗೃತಿ ಮೂಡಿಸಲು ಸಣ್ಣ ಕಿರುಚಿತ್ರವನ್ನು ಪ್ರದರ್ಶಿಸಿದರು. ಭೂಮಿಯನ್ನು ಉಳಿಸಿ, ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ, ಏಕ ಬಳಕೆ ಪ್ಲಾಸ್ಟಿಕ್ ಅನ್ನು ನಿರಾಕರಿಸಿ ಮುಂತಾದ ಘೋಷಣೆಗಳನ್ನು ಹೇಳುವ ಮೂಲಕ ಜಾಗೃತಿ ಮೂಡಿಸಿದರು.ಪ್ಲಾಸ್ಟಿಕ್ ಚೀಲಗಳು ಪರಿಸರ ಮಾಲಿನ್ಯದ ಪ್ರಮುಖ ಮೂಲಗಳಾಗಿವೆ. ಹಾನಿಕಾರಕ ವಾದ ಪ್ಲಾಸ್ಟಿಕ್ ಪರಿಸರದಲ್ಲಿ ಕೊಳೆಯಲು ೧೦೦ ವರ್ಷಗಳನ್ನು ತೆಗೆದುಕೊಳ್ಳುತ್ತದೆ. ಅಲ್ಲದೇ ಹಾನಿಕಾರಕ ಮೈಕ್ರೋಪ್ಲಾಸ್ಟಿಕ್ ಅನ್ನು ಪರಿಸರಕ್ಕೆ ಬಿಡುಗಡೆ ಮಾಡುತ್ತದೆ. ಪ್ಲಾಸ್ಟಿಕ್ ಚೀಲಗಳು ಮಣ್ಣಿನಲ್ಲಿ ಸೇರಿ ಪ್ರಾಣಿಗಳು ಅದನ್ನು ತಿಂದು ಸಾಯುತ್ತವೆ. ಪ್ಲಾಸ್ಟಿಕ್ ವಸ್ತುಗಳು ಸಮುದ್ರ ನದಿಗಳಲ್ಲಿ ಸೇರಿ ಜಲಚರಗಳು ಸಾವನ್ನಪ್ಪುತ್ತಿವೆ. ಇದರಿಂದ ನಮ್ಮ ಪರಿಸರ ವ್ಯವಸ್ಥೆಗೆ ದೀರ್ಘಾವಧಿಯ ಹಾನಿಯುಂಟಾಗುತ್ತಿದೆ. ಪ್ಲಾಸ್ಟಿಕ್ ಚೀಲ ಮುಕ್ತ ಪರಿಸರವನ್ನು ಭವಿಷ್ಯಕ್ಕೆ ನಾವು ಕೊಡುಗೆ ನೀಡಬೇಕಾದರೆ ನಾವು ಪ್ಲಾಸ್ಟಿಕ್ ಅನ್ನು ನಿಷೇಧಿಸಿ ನಮ್ಮ ಭೂಮಿಯನ್ನು ಉಳಿಸಬೇಕಿದೆ ಎಂದು ಸಾರಿದರು.
ಪ್ಲಾಸ್ಟಿಕ್ ಚೀಲಗಳ ಹಾನಿಕಾರಕ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಜತೆಗೆ ಪರಿಸರ ಸ್ನೇಹಿ ಪರ್ಯಾಯ ವಸ್ತುಗಳನ್ನು ಬಳಕೆಯನ್ನು ಉತ್ತೇಜಿಸುವಂತೆ ಕೋರಿದರು.ಪೊಟೋ೪ಸಿಪಿಟಿ೧: ಚನ್ನಪಟ್ಟಣದ ಬಾಲು ಪಬ್ಲಿಕ್ ಶಾಲೆಯಲ್ಲಿ ಅಂತಾರಾಷ್ಟ್ರೀಯ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ದಿನಾಚರಣೆ ಆಚರಿಸಲಾಯಿತು.