ಡಿ.ನಾಗರಾಜ್‌ಗೆ ವಿಶ್ವ ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿ
KannadaprabhaNewsNetwork | Published : Oct 06 2023, 01:13 AM IST
ಡಿ.ನಾಗರಾಜ್‌ಗೆ ವಿಶ್ವ ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿ
ಸಾರಾಂಶ
ಬೆಂಗಳೂರಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.ನಾಗರಾಜ್ ಅವರಿಗೆ ಪ್ರಶಸ್ತಿ
ಭದ್ರಾವತಿ: ನಗರದ ವಿವೇಕಾನಂದ ಯೋಗ ಶಿಕ್ಷಣ ಟ್ರಸ್ಟ್ ಛೇರ್ಮನ್, ಅಂತರರಾಷ್ಟ್ರೀಯ ಯೋಗಪಟು ಡಿ. ನಾಗರಾಜ್ ರವರಿಗೆ ವಿಶ್ವ ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿ ಲಭಿಸಿದೆ. ಬೆಂಗಳೂರಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.ನಾಗರಾಜ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸರ್ಕಾರದ ಕಾರ್ಯದರ್ಶಿ ಡಾ. ಜಿ.ಸಿ. ಪ್ರಕಾಶ್ ಮತ್ತು ಇಲಾಖೆ ನಿರ್ದೇಶಕ ಎಂ. ಸಿದ್ದೇಶ್ವರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 4 ದಶಕಗಳಿಂದ ಯೋಗ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ನಾಗರಾಜ್ ಅವರು ಇದುವರೆಗೂ ಅಂತರ ರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ 31, ರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ 54 ಹಾಗೂ ರಾಜ್ಯಮಟ್ಟದ ಯೋಗ ಸ್ಪರ್ಧೆಯಲ್ಲಿ 45 ಚಿನ್ನದ ಪದಕಗಳನ್ನು ಪಡೆದುಕೊಂಡಿದ್ದಾರೆ. ನಾಗರಾಜ್ ಅವರು ರಾಜ್ಯಾದ್ಯಂತ ಪ್ರವಾಸ ಮಾಡಿ ಜೇಸೀಸ್, ರೋಟರಿ, ಲಯನ್ಸ್ ಸೇರಿದಂತೆ ಅನೇಕ ಸಂಘ-ಸಂಸ್ಥೆಗಳ ನೆರವಿನೊಂದಿಗೆ 10 ದಿನಗಳ ಅವಧಿಯ 441 ಯೋಗ ಶಿಬಿರಗಳನ್ನು ಯಶಸ್ವಿಯಾಗಿ ನಡೆಸಿದ್ದು, ಅಲ್ಲದೆ ವಿದ್ಯಾರ್ಥಿಗಳಿಗೆ 1 ಗಂಟೆ ಅವಧಿಯ 720ಕ್ಕೂ ಹೆಚ್ಚು ಯೋಗ ಉಪನ್ಯಾಸ ಹಾಗೂ ಯೋಗ ಪ್ರದರ್ಶನ ನೀಡಿ ಯೋಗದ ಬಗ್ಗೆ ಅರಿವು ಮೂಡಿಸಿದ್ದಾರೆ. ರಾಜ್ಯ ಸರ್ಕಾರ ಇವರ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡಿದೆ. ಕರ್ನಾಟಕ ರಾಜ್ಯ ಯೋಗ ಸಂಸ್ಥೆ ಅಧ್ಯಕ್ಷ ಡಾ. ರಾಮಮೂರ್ತಿ, ಕಾರ್ಯದರ್ಶಿ ಡಾ. ಡಿ.ಪುಟ್ಟೇಗೌಡ ಹಾಗೂ ಯೋಗಪಟುಗಳು ಡಿ. ನಾಗರಾಜ್ ಅವರನ್ನು ಅಭಿನಂದಿಸಿದ್ದಾರೆ. - - - -ಡಿ5-ಬಿಡಿವಿಟಿ2: ಭದ್ರಾವತಿ ವಿವೇಕಾನಂದ ಯೋಗ ಶಿಕ್ಷಣ ಟ್ರಸ್ಟ್ ಛೇರ್ಮನ್, ಅಂತರ ರಾಷ್ಟ್ರೀಯ ಯೋಗಪಟು ಡಿ. ನಾಗರಾಜ್ ಅವರಿಗೆ ವಿಶ್ವ ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿ ಲಭಿಸಿದೆ.