ಇಂದು ಮಠದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ

| Published : Oct 01 2024, 01:19 AM IST

ಸಾರಾಂಶ

ದಾವಣಗೆರೆ ನಗರದ ಎಂಸಿಸಿ ಬಿ ಬ್ಲಾಕ್‌ನಲ್ಲಿರುವ ವಾಟರ್ ಟ್ಯಾಂಕ್ ಪಾರ್ಕ್ ಸಮೀಪದ ಶ್ರೀ ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳ ಮಠದಲ್ಲಿ ಅ.1ರಂದು ವಿಶ್ವ ಹಿರಿಯ ನಾಗರಿಕರ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

- ಜಿಲ್ಲಾ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್‌ರಿಂದ ಉದ್ಘಾಟನೆ

- ಕಾರ್ಯಕ್ರಮ ಅಧ್ಯಕ್ಷತೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ - - - ಕನ್ನಡಪ್ರಭ ವಾರ್ತೆ ದಾವಣಗೆರೆ

ನಗರದ ಎಂಸಿಸಿ ಬಿ ಬ್ಲಾಕ್‌ನಲ್ಲಿರುವ ವಾಟರ್ ಟ್ಯಾಂಕ್ ಪಾರ್ಕ್ ಸಮೀಪದ ಶ್ರೀ ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳ ಮಠದಲ್ಲಿ ಅ.1ರಂದು ವಿಶ್ವ ಹಿರಿಯ ನಾಗರಿಕರ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹಿರಿಯ ನಾಗರಿಕರ ಸಂಘ ಹಾಗೂ ಹಿರಿಯ ನಾಗರಿಕರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ.

ಬೆಳಗ್ಗೆ 10.30ಕ್ಕೆ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟನೆ ಮಾಡುವರು. ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ, ಚನ್ನಗಿರಿ ಶಾಸಕ ಬಸವರಾಜು ವಿ. ಶಿವಗಂಗಾ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹರಿಹರ ಶಾಸಕ ಬಿ.ಪಿ.ಹರೀಶ್, ಹೊನ್ನಾಳಿ ಶಾಸಕ ಡಿ.ಜಿ. ಶಾಂತನಗೌಡ, ವಿಧಾನ ಪರಿಷತ್ತು ಸದಸ್ಯರಾದ ಎಸ್.ಎಲ್. ಭೋಜೇಗೌಡ, ಚಿದಾನಂದ ಎಂ. ಗೌಡ, ಡಿ.ಎಸ್.ಅರಣ್, ಕೆ.ಎಸ್. ನವೀನ್, ಕೆ.ಅಬ್ದುಲ್ ಜಬ್ಬಾರ್, ಡಾ.ಧನಂಜಯ್ ಸರ್ಜಿ, ಡಿ.ಟಿ.ಶ್ರೀನಿವಾಸ್, ಮಹಾನಗರ ಪಾಲಿಕೆ ಮಹಾಪೌರರಾದ ಚಮನ್ ಸಾಬ್, ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಪಾಲಿಕೆ ಸದಸ್ಯ ಜಿ.ಎಸ್. ಮಂಜುನಾಥ ಗಡಿಗುಡಾಳು ಭಾಗವಹಿಸುವರು.

ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಜಿಪಂ ಸಿಇಒ ಸುರೇಶ್ ಬಿ. ಇಟ್ನಾಳ್, ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಭಾಗವಹಿಸುವರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್. ಅರುಣ್‌ಕುಮಾರ್ ಹಿರಿಯ ನಾಗರಿಕರಿಗೆ ಕಾನೂನಿನಲ್ಲಿರುವ ಅವಕಾಶಗಳ ಕುರಿತು ಮಾಹಿತಿ ನೀಡುವರು.

ಬೆಳಗ್ಗೆ 9ರಿಂದ ಮಧ್ಯಾಹ್ನ 2 ಗಂಟೆವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಯುಷ್ ಇಲಾಖೆ ಸಹಯೋಗದೊಂದಿಗೆ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿದೆ.

- - - (ಸಾಂದರ್ಭಿಕ ಚಿತ್ರ)