ಸಾರಾಂಶ
ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಶಿಕ್ಷಣದಿಂದ ಮಾತ್ರ ಬದಲಾವಣೆಯಾಗಲು ಸಾಧ್ಯ.
ಸಿಂಧನೂರು: ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಶಿಕ್ಷಣದಿಂದ ಮಾತ್ರ ಬದಲಾವಣೆಯಾಗಲು ಸಾಧ್ಯ. ಯಾವುದೇ ಕಾರಣಕ್ಕೂ ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಬೇಡಿ ಎಂದು ಪ್ರಧಾನ ಸಿವಿಲ್ ನ್ಯಾ.ಕೋಟೆಪ್ಪ ಕಾಂಬ್ಳೆ ಸಲಹೆ ನೀಡಿದರು.
ಜವಳಗೇರಾ ಗ್ರಾಮದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ನ್ಯಾಯವಾದಿಗಳ ಸಂಘ, ಎಚ್.ಮರಿಯಪ್ಪ ವಕೀಲರು ಹೆಡಗಿಬಾಳ ಚಾರಿಟೆಬಲ್ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನ ನಿಮಿತ್ತ ಹಮ್ಮಿಕೊಂಡಿದ್ದ ಕಾನೂನು ಅರಿವು ನೆರವು ಉದ್ಘಾಟಿಸಿ ಮಾತನಾಡಿದರು.ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುವುದರ ಜೊತೆಗೆ ಪ್ರತಿಯೊಬ್ಬರಿಗೂ ಸಾಮಾನ್ಯ ಕಾನೂನಿನ ತಿಳಿವಳಿಕೆ ಅಗತ್ಯ ಎಂದರು.
ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಆನಂದಪ್ಪ.ಎಂ, ಎರಡನೇ ಹೆಚ್ಚುವರಿ ಸಿವಿಲ್ ನ್ಯಾ.ಆಚಪ್ಪ ದೊಡ್ಡಬಸವರಾಜ, ಕ್ರೈಸ್ತ ಧರ್ಮಗುರು ಫಾದರ ಅಮಲ್, ಸಹಕಾರಿ ಬ್ಯಾಂಕ್ ಅಧ್ಯಕ್ಷ ಬಸವರಾಜ ನಾಡಗೌಡ, ಬಳಗಾನೂರು ಠಾಣೆಯ ಆರಕ್ಷಕ ಉಪನಿರೀಕ್ಷಕ ದಾದಾವಲಿ, ವಕೀಲರ ಸಂಘದ ಖಜಾಂಚಿ ಶರಣಬಸವ ಉಮಲೂಟಿ, ವಕೀಲರಾದ, ಪಂಪಾಪತಿ, ಆಸೀಫ್, ಗ್ರಾಪಂ ಅಧ್ಯಕ್ಷ ಶ್ರೀನಿವಾಸ, ಮಾಜಿ ಅಧ್ಯಕ್ಷ ಜಾನಪ್ಪ ದೊಡ್ಡಮನಿ, ರಂಗಪ್ಪ ದೊಡ್ಡಮನಿ ಇದ್ದರು. ದಲಿತ ಮುಖಂಡ ಚೌರಪ್ಪ ಅಧ್ಯಕ್ಷತೆವಹಿಸಿದ್ದರು.ಶೇಖರಪ್ಪ ಧುಮತಿ ವಕೀಲರು ವಿಶ್ವ ಸಾಮಾಜಿಕ ನ್ಯಾಯದಿನ ಕುರಿತು ಉಪನ್ಯಾಸ ನೀಡಿದರು. ಎಚ್.ಮರಿಯಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಹನುಮಂತ ನಿರೂಪಿಸಿದರು.