ಸಾರಾಂಶ
ಕಾರ್ಯಕ್ರಮವನ್ನು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ಡಾ. ಜಿ ಶಂಕರ್ ಉದ್ಘಾಟಿಸಲಿದ್ದಾರೆ. ಸೇವಾ ಭಾರತಿ ಕನ್ಯಾಡಿ ಅಧ್ಯಕ್ಷ ಸ್ವರ್ಣಗೌರಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಿಬಿರದಲ್ಲಿ ಫಲಾನುಭವಿಗಳಿಗೆ ಉಚಿತ ವೈದ್ಯಕೀಯ ತಪಾಸಣೆಯ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಅವರಿಗೆ ಯೋಗ, ಪ್ರಾಣಾಯಾಮ, ಒತ್ತಡ ಗಾಯ ನಿರ್ವಹಣೆ, ಆಪ್ತ ಸಮಾಲೋಚನೆ, ಮನೋರಂಜನಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ.
ಕನ್ನಡಪ್ರಭ ವಾರ್ತೆ ಉಡುಪಿ
ಸೇವಾಭಾರತಿಯ ಸೇವಾಧಾಮ, ಉಡುಪಿ ಜಿಲ್ಲಾ ದಿವ್ಯಾಂಗ ರಕ್ಷಣಾ ಸಮಿತಿಗಳ ಆಶ್ರಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿಶೇಷಚೇತನರ ಸಬಲೀಕರಣ ಇಲಾಖೆಗಳ ಸಹಕಾರದಲ್ಲಿ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆ ಅಂಗವಾಗಿ ಸೆ.3, 4 ಮತ್ತು 5ರಂದು ಉಡುಪಿಯ ಜಿಲ್ಲಾಸ್ಪತ್ರೆಯಲ್ಲಿ ಮೂರು ದಿನಗಳ ಉಚಿತ ವೈದ್ಯಕೀಯ ತಪಾಸಣೆ, ಮಾಹಿತಿ, ಜಾಗೃತಿ ಶಿಬಿರವನ್ನು ಆಯೋಜಿಸಲಾಗಿದೆ.ಈ ಬಗ್ಗೆ ಶನಿವಾರ ಸಂಘಟಕ ವಿಜಯ್ ಕುಮಾರ್ ಕೊಡವೂರು ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಕಾರ್ಯಕ್ರಮವನ್ನು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ಡಾ. ಜಿ ಶಂಕರ್ ಉದ್ಘಾಟಿಸಲಿದ್ದಾರೆ. ಸೇವಾ ಭಾರತಿ ಕನ್ಯಾಡಿ ಅಧ್ಯಕ್ಷ ಸ್ವರ್ಣಗೌರಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಿಬಿರದಲ್ಲಿ ಫಲಾನುಭವಿಗಳಿಗೆ ಉಚಿತ ವೈದ್ಯಕೀಯ ತಪಾಸಣೆಯ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಅವರಿಗೆ ಯೋಗ, ಪ್ರಾಣಾಯಾಮ, ಒತ್ತಡ ಗಾಯ ನಿರ್ವಹಣೆ, ಆಪ್ತ ಸಮಾಲೋಚನೆ, ಮನೋರಂಜನಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿಗಳಿಗೆ ಗಾಲಿಕುರ್ಚಿ, ಮೆಡಿಕಲ್ ಕಿಟ್‌ಗಳು ಹಾಗೂ ನೀರಿನ ಹಾಸಿಗೆಗಳನ್ನು ಹಸ್ತಾಂತರಿಸಲಾಗುತ್ತದೆ.ಕಾರ್ಯಾಗಾರದ ಕೊನೆಯ ದಿನ ಸೆ.5ರಂದು ಬೆನ್ನುಹುರಿ ಅಪಘಾತಕ್ಕೊಳಗಾಗಿ ಹಾಸಿಗೆ ಹಿಡಿರುವ ದಿವ್ಯಾಂಗರನ್ನು ಮುಖ್ಯವಾಹಿನಿಗೆ ಬರುವಂತೆ ಮಾಡಿ, ಈ ಮೂಲಕ ಅವರಿಗೆ ಎಲ್ಲರಂತೆ ಬದುಕಲು ಧೈರ್ಯ ತುಂಬುವುದರ ಜೊತೆಗೆ ಜನ ಸಾಮಾನ್ಯರಿಗೆ ಬೆನ್ನುಹುರಿ ಅಪಘಾತದ ಬಗ್ಗೆ ಜಾಗೃತಿ ಮೂಡಿಸಲು ಗಾಲಿಕುರ್ಚಿ ರ್‍ಯಾಲಿಯನ್ನು ಬೆಳಗ್ಗೆ 10 ಗಂಟೆಗೆ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಿಂದ ಜಿಲ್ಲಾಸ್ಪತ್ರೆ ವರೆಗೆ ಆಯೋಜಿಸಲಾಗುತ್ತದೆ ಎಂದರು.ಸುದ್ದಿಗೋಷ್ಠಿಯಲ್ಲಿ ಸಂಘಟನಾ ಸಮಿತಿಯ ಪ್ರಮುಖರಾದ ಸರ್ವೋತ್ತಮ, ಅಖಿಲೇಶ್, ನಾಗಾರ್ಜುನ, ಚರಣ್ ಕುಮಾರ್ ಉಪಸ್ಥಿತರಿದ್ದರು.