ಸಾರಾಂಶ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ‘ವಿಶ್ವ ಪ್ರವಾಸೋದ್ಯಮ ದಿನಾಚರಣೆ’ ಅಂಗವಾಗಿ ಶುಕ್ರವಾರ ಕೋಡಿ ಕನ್ಯಾನ (ಡೆಲ್ಟಾ ಬೀಚ್) ಬೀಚ್‌ನಲ್ಲಿ ನಡೆದ ಬೀಚ್ ಸ್ವಚ್ಛತಾ ಕಾರ್ಯಕ್ರಮಕ್ಕೆ ಡಾ.ಕೆ.ವಿದ್ಯಾಕುಮಾರಿ ಚಾಲನೆ ನೀಡಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ‘ವಿಶ್ವ ಪ್ರವಾಸೋದ್ಯಮ ದಿನಾಚರಣೆ’ ಅಂಗವಾಗಿ ಶುಕ್ರವಾರ ಕೋಡಿ ಕನ್ಯಾನ (ಡೆಲ್ಟಾ ಬೀಚ್) ಬೀಚ್‌ನಲ್ಲಿ ನಡೆದ ಬೀಚ್ ಸ್ವಚ್ಛತಾ ಕಾರ್ಯಕ್ರಮಕ್ಕೆ ಡಾ.ಕೆ.ವಿದ್ಯಾಕುಮಾರಿ ಚಾಲನೆ ನೀಡಿದರು.ಈ ಸಂದರ್ಭ ಮಾತನಾಡಿದ ಅವರು, ಪ್ರವಾಸೋದ್ಯಮಕ್ಕೆ ಪೂರಕವಾಗುವ ಚಟುವಟಿಕೆಗಳನ್ನು ಕೈಗೊಳ್ಳುವ ಜೊತೆಗೆ ಸ್ಥಳೀಯ ಜನರಿಗೆ ಉದ್ಯೋಗ ಅವಕಾಶಗಳು ದೊರೆಯುವಂತೆ ಯೋಜನೆಗಳನ್ನು ರೂಪಿಸಬೇಕು. ಜಿಲ್ಲೆಯ ಪ್ರವಾಸಿ ತಾಣಗಳತ್ತ ಪ್ರವಾಸಿಗರ ಆಕರ್ಷಿತರಾಗುವಂತೆ ಪ್ರವಾಸೋದ್ಯಮವನ್ನು ಇನ್ನಷ್ಟು ಅಭಿವೃದ್ಧಿಗೊಳಿಸಬೇಕು ಎಂದರು.ಹೊಸ ಬೀಚಿನ ಅಭಿವೃದ್ಧಿಯ ದೃಷ್ಟಿಕೋನದೊಂದಿಗೆ ಕೋಡಿ ಕನ್ಯಾನ ಬೀಚಿನಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಮುಖ್ಯವಾಗಿ ಮಳೆಗಾಲದ ನಂತರ ಹೆಚ್ಚು ತ್ಯಾಜ್ಯಗಳು ಕಡಲತೀರದ ಬಳಿ ಸೇರಿಕೊಂಡಿದೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬೀಚ್‌ಗೆ ಆಗಮಿಸುವುದರಿಂದ ಬೀಚ್‌ಗಳ ಸ್ವಚ್ಛತೆಗೆ ಪ್ರತಿಯೊಬ್ಬರೂ ಮೊದಲ ಆದ್ಯತೆ ನೀಡಿ, ಜಲಚರಗಳ ರಕ್ಷಣೆಗೆ ಮುಂದಾಗಬೇಕು. ಜೊತೆಗೆ ಪರಿಸರ ಸ್ಚಚ್ಛವಾಗಿ ಇರಿಸಿಕೊಳ್ಳುವುದರಿಂದ ನಮ್ಮ ಆರೋಗ್ಯವೂ ಸಹ ಉತ್ತಮವಾಗಿರುತ್ತದೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ., ಅಬಕಾರಿ ಕಮೀಷನರ್ ಬಿಂದುಶ್ರೀ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಸಿ.ಯು., ಕರಾವಳಿ ಪ್ರವಾಸೋದ್ಯಮ ಅಸೋಸಿಯೇಷನ್ ಅಧ್ಯಕ್ಷ ಮನೋಹರ್ ಶೆಟ್ಟಿ, ಕೋಟ ಪಂಚವರ್ಣ ಯುವಕ ಮಂಡಲದ ಸದಸ್ಯರು, ವಿವಿಧ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.