21ರಿಂದ ರಾಘವೇಂದ್ರ ಸ್ವಾಮಿಗಳ ಆರಾಧನೆ

| Published : Aug 18 2024, 01:46 AM IST

ಸಾರಾಂಶ

21ರಿಂದ ರಾಘವೇಂದ್ರ ಸ್ವಾಮಿಗಳ ಆರಾಧನೆ

ಗುಬ್ಬಿ: ಪಟ್ಟಣದ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಆ.21 ನೇ ಬುಧವಾರ ಶ್ರೀ ರಾಘವೇಂದ್ರ ಸ್ವಾಮಿಗಳ 353 ನೇ ಆರಾಧನಾ ಮಹೋತ್ಸವ ನಡೆಯಲಿದೆ ಎಂದು ಶ್ರೀ ಗುರು ರಾಘವೇಂದ್ರ ಸ್ವಾಮಿ ಚಾರಿಟೆಬಲ್ ಟ್ರಸ್ಟ್ ತಿಳಿಸಿದೆ. ಆಗಸ್ಟ್ 21 ರಂದು ಬೆಳಿಗ್ಗೆ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ, ಅಲಂಕಾರ ನಡೆಯಲಿದೆ. ಮಠಕ್ಕೆ ಬಂದ ಭಕ್ತಾದಿಗಳಿಗೆ ಮಧ್ಯಾಹ್ನ 1.30ಕ್ಕೆ ಅನ್ನ ಸಂತರ್ಪಣೆಯನ್ನು ಎಸ್ ಎಂ ಪ್ಯಾಲೇಸ್ ನಲ್ಲಿ ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.