ಕೊಡವೂರು ದೇವಳದಲ್ಲಿ ರಾಘವೇಂದ್ರ ಸ್ವಾಮಿ ಆರಾಧನೆ

| Published : Aug 12 2025, 12:31 AM IST

ಕೊಡವೂರು ದೇವಳದಲ್ಲಿ ರಾಘವೇಂದ್ರ ಸ್ವಾಮಿ ಆರಾಧನೆ
Share this Article
  • FB
  • TW
  • Linkdin
  • Email

ಸಾರಾಂಶ

ಶ್ರೀ ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಆರಾಧನ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಜ್ಯೋತಿ ಕೆ. ಹೆಬ್ಬಾರ್ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ವೈವಿಧ್ಯಮಯ ಸಾಂಸ್ಕೃತಿಕ ಶ್ರೀಮಂತಿಕೆ ಮಾರ್ದನಿಸುತ್ತಿರುವ ಊರು ಕೊಡವೂರು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಜ್ಯೋತಿ ಕೆ. ಹೆಬ್ಬಾರ್ ಹೇಳಿದರು.ಅವರು ಭಾನುವಾರ ಇಲ್ಲಿನ ಶ್ರೀ ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಆರಾಧನ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಲೆ, ಸಾಹಿತ್ಯ, ಸಂಸ್ಕೃತಿ, ಆಧ್ಯಾತ್ಮದ ಅಸ್ಮಿತೆಯಿಂದ ಬೆಳಗುತ್ತಿರುವ ಶ್ರೀ ಶಂಕರನಾರಾಯಣನ ಈ ದಿವ್ಯ ಸನ್ನಿಧಿಯಲ್ಲಿ ಗುರು ರಾಘವೇಂದ್ರ ಸ್ವಾಮಿಗಳ ಆರಾಧನೆಯ ಈ ಪರ್ವ ಕಾಲದಲ್ಲಿ ಕಲಾವಿದರಿಗೆ ಹಾಗೂ ಭಕ್ತರಿಗೆ ಶುಭ ಹಾರೈಸಿದರು.

ದೇ‍ವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು, ಶ್ರೀ ದೇವಳದಲ್ಲಿ ನಡೆಯುವ ಅಭಿವೃದ್ಧಿ ಕಾರ್ಯಕ್ರಮಗಳ ಮಾಹಿತಿ ನೀಡಿದರು.ಈ ಸಂದರ್ಭ ದೇವಳದ ಪ್ರಧಾನ ಅರ್ಚಕ ಸೀತಾರಾಮ ಆಚಾರ್ಯ, ಭಕ್ತವೃಂದದ ಅಧ್ಯಕ್ಷ ತೋಟದಮನೆ ದಿವಾಕರ ಶೆಟ್ಟಿ, ನಗರಸಭಾ ಸದಸ್ಯ ವಿಜಯ ಕೊಡವೂರು, ಉದ್ಯಮಿ ಸಾಧು ಸಾಲ್ಯಾನ್, ವ್ಯವಸ್ಥಾಪನ ಸಮಿತಿ ಸದಸ್ಯ ಭಾಸ್ಕರ್ ಪಾಲನ್, ಎ. ರಾಜ ಸೇರಿಗಾರ್ ಉಪಸ್ಥಿತರಿದ್ದರು.ಶಂಕರನಾರಾಯಣ ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ಜನಾರ್ದನ್ ಕೊಡವೂರು ಸ್ವಾಗತಿಸಿದರು. ಕಾವ್ಯ ಸೀತಾರಾಮ್ ಪ್ರಾರ್ಥಿಸಿದರು. ಪೂರ್ಣಿಮಾ ಜನಾರ್ದನ್ ನಿರೂಪಿಸಿದರು.