ಯಾದಗಿರಿ: ವಿದ್ಯಾರ್ಥಿಗಳ ಸೂಕ್ತ ಸಮಯಕ್ಕೆ ಬಸ್‌ ವ್ಯವಸ್ಥೆ ಕಲ್ಪಿಸಿ

| Published : Jan 18 2024, 02:01 AM IST

ಯಾದಗಿರಿ: ವಿದ್ಯಾರ್ಥಿಗಳ ಸೂಕ್ತ ಸಮಯಕ್ಕೆ ಬಸ್‌ ವ್ಯವಸ್ಥೆ ಕಲ್ಪಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಮನವಿ ಮಾಡಿದ ಬಳಿಕ ಒಂದು ವಾರಗಳವರೆಗೂ ಸರಿಯಾಗಿ ಬಸ್ ಸೇವೆ ಒದಗಿಸಿ ನಂತರ ಪುನಃ ಅದೇ ರೀತಿ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರೋಪಿಸಿ ಜಯ ಕರ್ನಾಟಕ ಸಂಘಟನೆ ತಾಲೂಕಾಧ್ಯಕ್ಷ ನಾಗೇಶ್ ಗದ್ದಿಗಿ ಆಕ್ರೋಶ ಹೊರಹಾಕಿದ್ದಾರೆ.

ಕನ್ನಡಪ್ರಭ ವಾರ್ತೆ ಗುರುಮಕಠಲ್

ಗ್ರಾಮೀಣ ಪ್ರದೇಶಗಳಿಂದ ಯಾದಗಿರಿ, ಗುರುಮಠಕಲ್, ಸೈದಾಪುರ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ಬಾರದೆ ಇರುವುದರಿಂದ ಪ್ರತಿನಿತ್ಯ ನರಕ ಯಾತನೆ ಅನುಭವಿಸುತ್ತಿದ್ದಾರೆ ಎಂದು ಜಯ ಕರ್ನಾಟಕ ಸಂಘಟನೆ ತಾಲೂಕಾಧ್ಯಕ್ಷ ನಾಗೇಶ್ ಗದ್ದಿಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಲವು ಬಾರಿ ನಮ್ಮ ಸಂಘಟನೆ ವತಿಯಿಂದ ಡಿಪೋ ಮ್ಯಾನೇಜರ್‌ಗೆ ವಿದ್ಯಾರ್ಥಿಗಳ ಸಮಸ್ಯೆ ಕುರಿತು ವಿಚಾರಿಸಿದಾಗ ಕಂಡಕ್ಟರ್ ಇಲ್ಲ, ಡ್ರೈವರ್ ಇಲ್ಲ ಎಂದು ಹಾರಿಕೆ ಉತ್ತರ ನೀಡುತ್ತಾರೆ. ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಿ ಎಂದು ಮನವಿ ಮಾಡಿದ ಬಳಿಕ ಒಂದು ವಾರಗಳವರೆಗೂ ಸರಿಯಾಗಿ ಬಸ್ ಸೇವೆ ಒದಗಿಸಿ ನಂತರ ಪುನಃ ಅದೇ ರೀತಿ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ರೀತಿ ಅಧಿಕಾರಿಗಳ ನಿರ್ಲಕ್ಷ್ಯತೆಯಿಂದ ಬಸ್ ಅವ್ಯವಸ್ಥೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ಹಿನ್ನೆಡೆಯಾಗುತ್ತಿದೆ. ಸರಿಯಾದ ಸಮಯಕ್ಕೆ ಬಸ್‌ಗಳ ಅವಶ್ಯಕತೆ ಇದೆ. ಆದರೆ, ನಿಗದಿತ ಸಮಯಕ್ಕೆ ಬಸ್ ಇಲ್ಲದ ಕಾರಣ ವಿದ್ಯಾರ್ಥಿಗಳು ಖಾಸಗಿ ವಾಹನಗಳ ಮೂಲಕ ತೆರಳಬೇಕಾದ ಪರಿಸ್ಥಿತಿ ಎದುರಾಗಿದೆ. ವಿದ್ಯಾರ್ಥಿಗಳು ವಾರ್ಷಿಕ ಬಸ್ ಪಾಸ್ ತೆಗೆದುಕೊಂಡರೂ ಉಪಯೋಗವಾಗುತ್ತಿಲ್ಲ. ಸಾರಿಗೆ ಇಲಾಖೆ ಅಧಿಕಾರಿಗಳು ಈ ಕೂಡಲೇ ಎಚ್ಚೆತ್ತುಕೊಂಡು ಶಾಲಾ-ಕಾಲೇಜಿನ ಸಮಯಕ್ಕೆ ಬಸ್ ಸೌಲಭ್ಯ ಕಲ್ಪಿಸಬೇಕು. ಇಲ್ಲವಾದಲ್ಲಿ ತಮ್ಮ ಡಿಪೋ ಬೀಗ ಜಡಿದು ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.