ಯಾದಗಿರಿ : ನಾಳೆ ಜಿಲ್ಲಾಮಟ್ಟದ ಪತ್ರಿಕಾ ದಿನಾಚರಣೆ

| Published : Jul 29 2024, 12:49 AM IST

ಸಾರಾಂಶ

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಮತ್ತು ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಜು. 30 ರಂದು ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಯಾದಗಿರಿ

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಮತ್ತು ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಜು. 30 ರಂದು ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಂದು ಬೆಳಗ್ಗೆ 10ಕ್ಕೆ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆಯುವ ಸಮಾರಂಭವನ್ನು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಉದ್ಘಾಟಿಸುವರು. ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು, ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಕೆ. ನಿಂಗಜ್ಜ ಅವರು ಪ್ರಶಸ್ತಿ ಪ್ರದಾನ ಮಾಡುವರು.

ಮುಖ್ಯ ಅತಿಥಿಗಳಾಗಿ ಖ್ಯಾತ ಹಾಸ್ಯ ಕಲಾವಿದ ಬಸವರಾಜ ಮಾಮನಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸಿದ್ದಪ್ಪ ಹೊಟ್ಟಿ, ಡಿಡಿಯು ಶಿಕ್ಷಣ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಡಾ. ಭೀಮಣ್ಣ ಮೇಟಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಭವಾನಿಸಿಂಗ್ ಠಾಕೂರು, ರಾಜ್ಯ ಪರಿಷತ್ತಿನ ಸದಸ್ಯ ರಾಘವೇಂದ್ರ ಕಾಮನಟಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ ಕಲಾಲ್ ಅವರು ಆಗಮಿಸಲಿದ್ದಾರೆ. ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಅಧ್ಯಕ್ಷತೆ ವಹಿಸಲಿದ್ದಾರೆ.

ಶರಣಾರ್ಥಿ ಕನ್ನಡಿಗರೇ " ಪತ್ರಿಕೆಯ ಸಂಪಾದಕ ಶರಣು ಗದ್ದುಗೆ ಅವರಿಗೆ ದಿ. ಭೀಮರಾಯ ಕಲಾಲ್ ಸ್ಮರಣಾರ್ಥ ಮತ್ತು ಪತ್ರಕರ್ತ ಮಲ್ಲಿಕಾರ್ಜುನ ಅರಿಕೇರಕರ್ ಅವರಿಗೆ ದಿ. ಸಾಹು ಮುರಾರಿರಾವ್ ಭೀ. ಶಿಂಧೆ ಸ್ಮರಣಾರ್ಥ ಜಿಲ್ಲಾ ಮಟ್ಟದ ಉತ್ತಮ ವರದಿಗಾರ ಪ್ರಶಸ್ತಿ ಹಾಗೂ ತಲಾ 5 ಸಾವಿರ ರೂಪಾಯಿಗಳ ಪ್ರಶಸ್ತಿ ಮೊತ್ತ ನೀಡಿ ಗೌರವಿಸಲಾಗುವುದು.

ಪತ್ರಕರ್ತರಾದ ಈರಣ್ಣ ಮೌರ್ಯ, ಶೇಖ್ ಮುಕ್ತಿಯಾರ್‌ ಅಹ್ಮದ್, ಅನಿಲ್ ಬಸೂದೆ, "ಕನ್ನಡಪ್ರಭ "ದ ಹುಣಸಗಿಯ ಬಸವರಾಜ ಕಟ್ಟಿಮನಿ, ಶರಭು ನಾಟೇಕರ್, ಡಿ. ಸಿ. ಪಾಟೀಲ್, ನಾಗರಾಜ ಕೋಟೆ, ನಿಂಗಪ್ಪ ಕುರಿಯರ್ ಹಾಗೂ ಕೆ. ಗವಿಸಿದ್ದೇಶ ಹೊಗರಿ ಇವರಿಗೆ ಜಿಲ್ಲಾ ಮಟ್ಟದ ಉತ್ತಮ ವರದಿಗಾರ ಪ್ರಶಸ್ತಿ ಹಾಗೂ ಛಾಯಾಗ್ರಾಹಕರಾದ ಶಿವಶಂಕರ ಎನ್.ಟಿ. ಮತ್ತು ಅಮರೇಶ್ ಬೊಮ್ಮರೆಡ್ಡಿ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಛಾಯಾಗ್ರಾಹಕ ಪ್ರಶಸ್ತಿ ನೀಡಲಾಗುವುದು. ಪ್ರಶಸ್ತಿ ಜತೆಗೆ ತಲಾ 2 ಸಾವಿರ ರು.ಗಳ ಪ್ರಶಸ್ತಿ ಮೊತ್ತ ನೀಡಿ ಗೌರವಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.