ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ: ಸಚಿವ ಸಂತೋಷ್ ಲಾಡ್ರಾಜ್ಯದ ಅಸಂಘಟಿತ ವಲಯದ ಎಲ್ಲ ವರ್ಗಗಳ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸ್ಥಾಪಿಸಲಾಗಿದೆ. ರಾಜ್ಯದಲ್ಲಿ ಈಗಾಗಲೇ ಗುರುತಿಸಿರುವ 101 ಅಸಂಘಟಿತ ಕಾರ್ಮಿಕ ವರ್ಗಗಳ ಕಾರ್ಮಿಕರು ತಕ್ಷಣ ನೋಂದಣಿ ಮಾಡಿಕೊಂಡು ಸ್ಮಾರ್ಟ್ ಕಾರ್ಡ್ ಮೂಲಕ ಸವಲತ್ತುಗಳ ಲಾಭ ಪಡೆದುಕೊಳ್ಳುವಂತೆ ರಾಜ್ಯ ಕಾರ್ಮಿಕ ಖಾತೆ ಸಚಿವರಾದ ಸಂತೋಷ್ ಲಾಡ್ ಹೇಳಿದರು.