ಕೆಂಪೇಗೌಡರ ಕೊಡುಗೆ ಮಾನವ ಕುಲಕ್ಕೆ ಆದರ್ಶ: ಶರಣಬಸಪ್ಪಕೆಂಪೇಗೌಡರ ಕೊಡುಗೆ ಮಾನವ ಕುಲಕ್ಕೆ ಆದರ್ಶ. ಅವರ ತತ್ವಾದರ್ಶ ಅಳವಡಿಸಿಕೊಂಡು ಮುಂದಿನ ಸಮಾಜಕ್ಕೆ ಕೊಡುಗೆ ನೀಡೋಣ ಎಂದು ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆದ ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಠಿಣ ಮತ್ತು ಅವಿರತ ಪ್ರಯತ್ನದ ಮೂಲಕ ಜೀವನದಲ್ಲಿ ಉತ್ತಮ ಗುರಿ ಹೊಂದಲು ಸಾಧ್ಯ. ನಿರಂತರ ಅಭ್ಯಾಸ ಮಕ್ಕಳು ಯಶಸ್ವಿಯಾಗಲು ಸಹಕರಿಸುತ್ತದೆ ಎಂದರು.